ವಾರ್ತಾ ಇಲಾಖೆಯಲ್ಲಿ ‘ಅಪ್ರೆಂಟಿಸ್‌ಶಿಪ್’
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಯಡಿ ಅಪ್ರೆಂಟಿಸ್‌ಶಿಪ್ ತರಬೇತಿ ನೀಡಲಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ ಮತ್ತು ಹುಬ್ಬಳ್ಳಿಯ ರಾಜ್ಯ ಸಮಾಚಾರ ಕೇಂದ್ರದಲ್ಲಿ ಕ್ಷೇತ್ರ ಪ್ರಚಾರ ಹಾಗೂ ಮಾಧ್ಯಮ ಕ್ಷೇತ್ರದ ಬಗ್ಗೆ ಒಂದು ವರ್ಷ ಅವಧಿಯವರೆಗೆ ತರಬೇತಿ ನೀಡಲಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 68 ಪದವೀಧರ ಅಭ್ಯರ್ಥಿಗಳನ್ನು ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. … More