KREIS/EMRS 2026: ತಾತ್ಕಾಲಿಕ ಕೀ ಉತ್ತರ ಪ್ರಕಟ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿ ಬರುವ ವಿವಿಧ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗಾಗಿ ಮಾ.01ರಂದು ನಡೆದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ(ಮಾ.03) ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/kreis2026.aspx ಮೂಲಕ ಕೀ ಉತ್ತರಗಳನ್ನು ಪರಿಶೀಲಿಸಬಹುದು. ಆಕ್ಷೇಪಣೆಗಳಿದ್ದಲ್ಲಿ ಮಾ.07ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು ಎಂದು ಕೆಇಎ ಪ್ರಕಟಣೆ ತಿಳಿಸಿದೆ. ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಹೇಗೆ ಡೌನ್ಲೋಡ್‌ ಮಾಡುವುದು? … More

KREIS/EMRS 2026: ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಪರಿಶಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳ ಪ್ರವೇಶಾತಿ ಪ್ರವೇಶ ಪರೀಕ್ಷೆ ನೋಂದಣಿಯ ಕೊನೆಯ ದಿನಾಂಕವನ್ನು ಫೆ.07ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಫೆ.02ರವರೆಗೆ ನೋಂದಣಿಗೆ ಅವಕಾಶವಿತ್ತು. ಪರಿಶಿಷ್ಟ ಜಾತಿಯ ಒಳವೀಸಲು ಪ್ರವರ್ಗಗಳಾದ ಪ್ರವರ್ಗ ಎ, ಪ್ರವರ್ಗ ಬಿ, ಪ್ರವರ್ಗ ಸಿ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರದಲ್ಲಿ ಮುದ್ರಿತವಾಗಿರುವ ಆರ್‌ಡಿ ಸಂಖ್ಯೆ ನಮೂದಿಸಿ, ಅರ್ಜಿಯನ್ನು ಸಲ್ಲಿಸಬೇಕು ಎಂದು ಕೆಇಎ … More

ಏಕಲವ್ಯ ಮಾದರಿ ವಸತಿ ಶಾಲೆ ಪ್ರವೇಶ ಪರೀಕ್ಷೆಗೆ ನೋಂದಣಿ ಆರಂಭ

2026-27ನೇ ಸಾಲಿಗೆ ಪರಿಶಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ರಾಜ್ಯದ 12 ಏಕಲವ್ಯ ಮಾದರಿ ವಸತಿ ಶಾಲೆಗಳ ಪ್ರವೇಶ ಪರೀಕ್ಷೆಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳು ನೋಂದಣಿ ಮಾಡಬಹುದು. ಕೆಇಎ ಪರೀಕ್ಷೆ ನಡೆಸಿ, ಕೌನ್ಸಿಲಿಂಗ್ ಮೂಲಕ ಸೀಟು ಹಂಚಿಕೆ ಮಾಡಲಿದೆ. ಪ್ರವೇಶ ಪರೀಕ್ಷೆಯು ಮಾ.01ರಂದು ಜರುಗಲಿದೆ. ಫೆ.02ರೊಳಗೆ ನೋಂದಣಿ ಮಾಡಲು ನಿಮಗೆ ಹತ್ತಿರವಿರುವ, ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗೆ ನಿಗದಿತ ದಾಖಲೆಗಳೊಂದಿಗೆ ಭೇಟಿ ನೀಡಿ. ಮುಖ್ಯ ದಿನಾಂಕಗಳು: … More