ಕಾರ್ಮಿಕರ ಮಕ್ಕಳಿಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನ: ಅರ್ಹರು ಹೀಗೆ ಅರ್ಜಿ ಸಲ್ಲಿಸಿ
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2025-26ನೇ ಸಾಲಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ ಸಹಾಯ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ಇಂಜಿನಿಯರಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50 ಹಾಗೂ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳು ಶೇ.45ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಅಂತಹ ವಿದ್ಯಾರ್ಥಿಗಳು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಅಧಿಕೃತ ವೆಬ್ ಸೈಟ್ https://klwbapps.karnataka.gov.in/ಗೆ ಭೇಟಿ ನೀಡಿ. … More