ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರ
ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಆ.27 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು-ಬರೆಯಲು ತಿಳಿದಿರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 49 ವಯೋಮಾನದ ಪುರುಷರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಊಟ, ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ … More