ಜೆಸ್ಕಾಂನಲ್ಲಿ ಶಿಶಿಕ್ಷು ತರಬೇತಿಗೆ; ಅರ್ಜಿ ಆಹ್ವಾನ

ಕಲಬುರಗಿ: ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ನಿಯಮಿತ(ಜೆಸ್ಕಾಂ)ವು ರಾಷ್ಟೀಯ ಶಿಶಿಕ್ಷು ಯೋಜನೆಯಡಿ 2026-27ನೇ ಸಾಲಿಗೆ ಇಂಜಿನಿಯರಿಂಗ್ ಪದವವೀಧರ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಶಿಶಿಕ್ಷು(ಅಪ್ರೆಂಟಿಸ್‌) ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಇಂಜಿನಿಯರಿಂಗ್ ಪದವೀಧರ ಅಪ್ರೆಂಟಿಸ್‌ 175 ಸ್ಥಾನಗಳು, ಡಿಪ್ಲೊಮಾ ಅಪ್ರೆಂಟಿಸ್‌ 100 ಸ್ಥಾನಗಳು ಸೇರಿದಂತೆ ಒಟ್ಟು 275 ಅಭ್ಯರ್ಥಿಗಳನ್ನು ಒಂದು ವರ್ಷಗಳ ಅವಧಿಯವರೆಗೆ ಶಿಶಿಕ್ಷು ತರಬೇತಿಗಾಗಿ ಆಯ್ಕೆ ಮಾಡಿಕೊಳ್ಳಲಿದೆ. ಆಫ್‌ಲೈನ್‌ ಮುಖೇನ ಅರ್ಜಿ ಸಲ್ಲಿಸಲು ಜೂ.05ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಉದ್ಯೋಗಾಕಾಂಕ್ಷಿಗಳು ಅಧಿಕೃತ … More

ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ ತಿಂಗಳ ಮೂರನೆಯ ವಾರದಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ ಉಚಿತ ಕುರಿ ಸಾಕಾಣಿಕೆ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶಿಬಿರದಲ್ಲಿ ಕುರಿ ಸಾಕಾಣಿಕೆ ಜೊತೆಗೆ ವೈಜ್ಞಾನಿಕ ರೀತಿಯಲ್ಲಿ ಹಸು ಸಾಕಾಣಿಕೆ, ಮೇಕೆ ಸಾಕಾಣಿಕೆ, ಹಂದಿ ಸಾಕಾಣಿಕೆ, ಕೋಳಿ ಸಾಕಾಣಿಕೆ, ತೋಟಗಾರಿಕಾ ಬೆಳೆಗಳು, ಸಾವಯವ ಗೊಬ್ಬರ ತಯಾರಿಕೆ … More

ಐಎಎಸ್‌, ಕೆಎಎಸ್‌ ಉಚಿತ ಪೂರ್ವಭಾವಿ ತರಬೇತಿ; ಅರ್ಜಿ ಆಹ್ವಾನ

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗಾಗಿ 2025-26ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ) ವತಿಯಿಂದ ಐಎಎಸ್‌ ಹಾಗೂ ಕೆಎಎಸ್‌ ಪರೀಕ್ಷೆಗಳ ಪೂರ್ವಭಾವಿ ತರಬೇತಿ ಪ್ರವೇಶ ಪರೀಕ್ಷೆ ನೋಂದಣಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ. ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ)ಯು ಮೇ 31ರಂದು ನಡೆಸಲಾಗುವುದು. ಐಎಎಸ್‌ 100 ಸ್ಥಾನಗಳು, ಕೆಎಎಸ್‌ 400 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ತರಬೇತಿ ಸಮಯದಲ್ಲಿ ಶಿಷ್ಯವೇತನ, ವಸತಿ ಸೌಲಭ್ಯ ನೀಡಲಾಗುವುದಿಲ್ಲ. … More

ಉಚಿತ ‘ಅಣಬೆ ಬೇಸಾಯ’ ತರಬೇತಿ; ಸಂದರ್ಶನಕ್ಕೆ ಆಹ್ವಾನ

ಹೊಸಪೇಟೆ: ತಾಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗಾಗಿ ಮೇ 11ರಿಂದ ಹತ್ತು ದಿನಗಳ ‘ಉಚಿತ ಅಣಬೆ ಬೇಸಾಯ ತರಬೇತಿ’ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಯಾವುದೇ ಜಿಲ್ಲೆಯ 18-50 ವರ್ಷ ವಯಸ್ಸಿನ ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವವರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿ ಅವಧಿಯಲ್ಲಿ ಊಟ-ವಸತಿ ಸೌಕರ್ಯಗಳನ್ನು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ … More

ಉಚಿತ ‘ಟೈಲರಿಂಗ್’ ತರಬೇತಿ ಶಿಬಿರ

ಹೊಸಕೋಟೆ: ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳ ಮೂರನೆಯ ವಾರದಿಂದ 31 ದಿನ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ತಿಳಿಸಿದ್ದಾರೆ. ರಾಜ್ಯದ ಯಾವುದೇ ಜಿಲ್ಲೆಯ 18-45 ವಯೋಮಾನದ ಕನ್ನಡ ಓದಲು-ಬರೆಯಲು ತಿಳಿದಿರುವ ಯುವತಿಯರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಊಟ, ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುತ್ತದೆ. ಬಿಪಿಎಲ್‌ ಕಾರ್ಡುದಾರರಿಗೆ ಮೊದಲ ಆದ್ಯತೆ ನೀಡಲಾಗುವುದು. … More

ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ 2025-26ನೇ ಸಾಲಿಗೆ ವಸತಿಸಹಿತ ಪೊಲೀಸ್‌ ಕಾನ್‌ಸ್ಟೇಬಲ್‌ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆನ್‌ಲೈನ್‌ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನೋಂದಣಿ ಮಾಡಲು ಮಾ.26 ರಿಂದ 31ರವೆರೆಗೆ ಅವಕಾಶವಿದೆ. ವಿದ್ಯಾರ್ಥಿಯು ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಹ ಆಸಕ್ತರು ನೋಂದಣಿಗಾಗಿ ಇಲಾಖೆಯ ಅಧಿಕೃತ ವೆಬ್‌ಸೈಟ್‌ https://erp.dom.karnataka.gov.in/aplಗೆ ಭೇಟಿ ನೀಡಿ. ಪ್ರಮುಖ ದಿನಾಂಕಗಳು: ವಿದ್ಯಾರ್ಹತೆ: ವಿದ್ಯಾರ್ಥಿಯು 12ನೇ ತರಗತಿ ಅಥವಾ ತತ್ಸಮಾನ ಅರ್ಹತೆ ಹೊಂದಿರಬೇಕು. ವಯಸ್ಸಿನ ಮಿತಿ: 31-03-2026ರಂತೆ; … More

ಫಾಸ್ಟ್ ಫುಡ್‌(ಚಾಟ್ಸ್‌ ಸೆಂಟರ್) ತಯಾರಿಕೆ  ತರಬೇತಿ; ಸಂದರ್ಶನಕ್ಕೆ ಆಹ್ವಾನ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ನಿರುದ್ಯೋಗಿ ಪುರುಷ ಹಾಗೂ ಮಹಿಳೆಯರಿಗೆ 12 ದಿನದ ಉಚಿತ ಫಾಸ್ಟ್‌ ಫುಡ್‌ (ಚಾಟ್ಸ್‌ ಸೆಂಟರ್) ತಯಾರಿಕೆ ತರಬೇತಿ ಶಿಬಿರವನ್ನು ಏ.4ರಿಂದ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಏನೇನು ಕಲೆಯುವಿರಿ? ಶಿಬಿರದಲ್ಲಿ ಪಾನಿ ಪೂರಿ, ಬೇಲ್‌ ಪೂರಿ, ದಹಿ ಪೂರಿ, ಸೇವ್‌ ಪೂರಿ, ಚಾಟ್‌ ಮಸಾಲ, ಕಚೋರಿ, ಗೋಬಿ ಮಂಚೂರಿ, ಪ್ರೈಡ್‌ ರೈಸ್‌, ಸಮೋಸ ಇನ್ನಿತರೆ ಚಾಟ್ಸ್‌ ಗಳ ತಯಾರಿಕೆಯ ಬಗ್ಗೆ ತರಬೇತಿ … More

ಉಚಿತ ಬ್ಯೂಟಿ ಪಾರ್ಲರ್‌ ತರಬೇತಿ ಶಿಬಿರ

ಹೊಸಕೋಟೆ: ತಾಲ್ಲೂಕಿನ ಸೊಣ್ಣಹಳ್ಳಿಪುರ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಏಪ್ರಿಲ್ ತಿಂಗಳ ಮೊದಲನೆಯ ವಾರದಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಬ್ಯೂಟಿ ಪಾರ್ಲರ್‌ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವತಿಯರು ಹಾಗೂ ಮಹಿಳೆಯರು ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ತರಬೇತಿ ಜೊತೆಗೆ ಉಚಿತ ಊಟ-ವಸತಿ ಸೌಕರ್ಯ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ … More

ಪಿಯುಸಿ ವಿದ್ಯಾರ್ಥಿಗಳಿಗೆ.. ಉಚಿತ ಪ್ರವೇಶ ಪರೀಕ್ಷೆಗಳ ತರಬೇತಿ.!!

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿಗೆ ಪಿಯುಸಿ ಓದುತ್ತಿರುವ ಸಮುದಾಯದ ವಿದ್ಯಾರ್ಥಿಗಳಿಗೆ ವೃತ್ತಿಪರ ಪದವಿಪೂರ್ವ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳ ಬಗ್ಗೆ ಉಚಿತ ಶಿಕ್ಷಣ/ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ನೀಟ್‌/ಐಐಟಿ/ಜೆಇಇ/ಕೆ-ಸಿಇಟಿ/ಐಸಿಎಆರ್‌/ಸಿಯುಇಟಿ/ಸಿಎಲ್‌ಎಟಿ/ಸಿಎ-ಪೊಂಡೇಷನ್‌ ಪದವಿಪೂರ್ವ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ಒದಗಿಸಲಿದೆ. ಬಾಲಕ ಮತ್ತು ಬಾಲಕಿಯರಿಗೆ ಪ್ರತ್ಯೇಕ ಕಲಿಕಾ ಕೇಂದ್ರಗಳ ವ್ಯವಸ್ಥೆಯಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಮಾ.31ರೊಳಗೆ ತಮ್ಮ ಜಿಲ್ಲೆ/ತಾಲೂಕಿನ ಅಲ್ಪಸಂಖ್ಯಾತ ಕಲ್ಯಾಣ ಇಲಾಗೆ ಭೇಟಿ ನೀಡಿ, ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ … More

ಉಚಿತ ಎಂಬ್ರಾಯಡರಿ ಮತ್ತು ಫ್ಯಾಬ್ರಿಕ್‌ ಪೈಂಟಿಂಗ್ ತರಬೇತಿ

ಹೊಸಕೋಟೆ: ತಾಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಮಹಿಳೆಯರಿಗಾಗಿ ಮಾರ್ಚ್‌ ತಿಂಗಳ ಮೊದಲ ವಾರದಿಂದ 31 ದಿನಗಳ ಉಚಿತ ಎಂಬ್ರಾಯಡರಿ (ಆರಿ ವರ್ಕ್‌ ಮತ್ತು ಸ್ಯಾರಿ ಕುಚ್ಚು ಹಾಕುವುದು) ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ್‌ ಬಿ ಸಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬ್ಲೌಸ್‌ಗಳಿಗೆ ಆರಿ ವರ್ಕ್‌ ಮಾಡುವುದು, ಸ್ಯಾರಿ ಕುಚ್ಚು ಮತ್ತು ಫ್ಯಾಬ್ರಿಕ್‌ ಪೈಂಟಿಂಗ್‌ ಬಗ್ಗೆ ತರಬೇತಿ ನೀಡಲಾಗುವುದು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರುವ, … More