ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ ತರಬೇತಿಗೆ ಅವಕಾಶ; ಅರ್ಜಿ ಆಹ್ವಾನ

ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್‌ಶಿಪ್‌ ತರಬೇತಿ ನೀಡಲು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಮಹಿಳಾ ಆಯವ್ಯಯ ಹಾಗೂ ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಗಳಡಿ ಒಟ್ಟು 21 ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ತರಬೇತಿಯನ್ನು ನೀಡಲಾಗುತ್ತದೆ. ಬರವಣಿಗೆಯಲ್ಲಿ ಪರಿಣಿತಿ ಹೊಂದಿರುವ ಮತ್ತು ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಅರ್ಹ ಅಭ್ಯರ್ಥಿಗಳು ನ.15ರೊಳಗೆ https://forms.gle/Qth3f5FjMHXSxTB68 ಲಿಂಕ್‌ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಮಾಧ್ಯಮ … More

ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ 31 ದಿನಗಳ ಉಚಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ್‌ ಬಿ. ಸಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಅವರು, ತರಬೇತಿ ನ.13ರಿಂದ ಪ್ರಾರಂಭವಾಗಲಿದೆ. ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ, ಕನ್ನಡ ಓದಲು ಮತ್ತು ಬರೆಯಲು ಬರುವ 18 ರಿಂದ 45 ವರ್ಷ ವಯಸ್ಸಿನ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ … More

ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಪುರುಷರು ಹಾಗೂ ಮಹಿಳೆಯರಿಗೆ ಉಚಿತ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ತರಬೇತಿ ಸಂಸ್ಥೆಯಲ್ಲಿ ಅಕ್ಟೋಬರ್‌ 27 ರಿಂದ 13 ದಿನಗಳ ಕಾಲ ತರಬೇತಿ ಶಿಬಿರ ಆಯೋಜಿಸಲಾಗಿದ್ದು, ಕನ್ನಡ ಓದಲು, ಬರೆಯಲು ಬರುವ ರಾಜ್ಯದ ಎಲ್ಲಾ ಜಿಲ್ಲೆಯ 18-45 ವಯೋಮಾನದ ಪುರುಷ … More

ಕಾನೂನು ಪದವೀಧರರಿಗೆ ಉಚಿತ ಆಡಳಿತ ನ್ಯಾಯಾಧೀಕರಣ ತರಬೇತಿ ಅರ್ಜಿ ಆಹ್ವಾನ

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯದ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸೇರಿದ ಕಾನೂನು ಪದವೀಧರರು ಅರ್ಜಿ ಸಲ್ಲಿಸಬುಹುದು. ಸದರಿ ತರಬೇತಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಕ್ಟೋಬರ್ 31ರೊಳಗೆ ಇಲಾಖೆಯ ಜಾಲತಾಣ https://twd.karnataka.gov.in/ದ ಮೂಲಕ ಅಥವಾ ನಿಮ್ಮ ಜಿಲ್ಲೆಯಲ್ಲಿನ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ನಮೂನೆ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ಶೈಕ್ಷಣಿಕ … More

ನಿರುದ್ಯೋಗಿ ಮಹಿಳೆಯರಿಗೆ “ಉಚಿತ ಬ್ಯೂಟಿ ಪಾರ್ಲರ್ ತರಬೇತಿ”

ಬೆಂಗಳೂರು ಗ್ರಾಮಾಂತರ: ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಮಹಿಳೆಯರಿಗೆ 35 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಸಿಬಿಆರ್‌ಎಸ್ಇಟಿಐ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕನ್ನಡ ಓದಲು, ಬರೆಯಲು ಬರುವ ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವರ್ಷ ವಯೋಮಾನದ ಮಹಿಳೆಯರು ಅರ್ಹರಾಗಿರುತ್ತಾರೆ. ಉಚಿತ ತರಬೇತಿಯ ಜೊತೆಗೆ ಊಟ, ವಸತಿ ಸೌಕರ್ಯ ಲಭ್ಯವಿರುತ್ತದೆ. ಬಿಪಿಎಲ್‌ ಅಭ್ಯರ್ಥಿಗಳಿಗೆ ಮೊದಲ … More

[ಉಚಿತ] ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನ: ಅರ್ಜಿ ಸಲ್ಲಿಸಲು ಅ.3 ಕೊನೆ ದಿನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸಹಯೋಗದಲ್ಲಿ ವೃತ್ತಿಪರ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರು ಹೊರಡಿಸಿದ ಪ್ರಕಟಣೆ ತಿಳಿಸಿದೆ. ಅರ್ಜಿ ಸಲ್ಲಿಸಲು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ ಜನಾಂಗದ ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿದೆ. ತರಬೇತಿಗೆ ಅರ್ಜಿ ಸಲ್ಲಿಸಬಯಸುವವರು ಅಲ್ಪಸಂಖ್ಯಾತರ ನಿರ್ದೇಶನಾಲಯದ ಜಾಲತಾಣ https://dom.karnataka.gov.in/ಗೆ ಭೇಟಿ ನೀಡಿ. ಅ.3ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು: ತರಬೇತಿಗೆ ಯಾರೆಲ್ಲಾ ಅರ್ಜಿ ಸಲ್ಲಿಸಬಹುದು? • … More

ಉಚಿತ ತರಬೇತಿ: PC ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 60 ದಿನಗಳ ಕಾಲ ಪೊಲೀಸ್ ಕಾನ್ಸ್ಟೇಬಲ್ (Police Constable)ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಚೌದ್ಧ, ಸಿಖ್, ಪಾರ್ಸಿ) ಜನಾಂಗದ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿಯುತ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ನೀಡಲಾಗುತ್ತದೆ. ಸದರಿ ತರಬೇತಿಗೆ ಅರ್ಜಿ ಸಲ್ಲಿಸಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್ಸೈಟ್ https://dom.karnataka.gov.in/ಗೆ … More

ಸ್ವ-ಉದ್ಯೋಗ ಆಧಾರಿತ ತರಬೇತಿ ಜೊತೆಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ಮಲ್ಟಿ ಡಿಸಿಪ್ಲಿನರಿ ಟ್ರೈನಿಂಗ್ ಸೆಂಟರ್ (MDTC), ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ (KVIC), MSME ಸಚಿವಾಲಯ ವಿಜಿನಾಪುರ, ದೂರವಾಣಿನಗರ, ಬೆಂಗಳೂರು ಮತ್ತು ಅದರ ಎಂಪಾನೆಲ್ಡ್ ವೃತ್ತಿಪರ ತರಬೇತಿ ಸಹವರ್ತಿಗಳು(PTAs) ಜಂಟಿ ಸಹಯೋಗದಲ್ಲಿ ವಿವಿಧ ಜಿಲ್ಲೆಯ ಸ್ಥಳಗಳಲ್ಲಿ ಸ್ವ-ಉದ್ಯೋಗ ಆಧಾರಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ನಿರುದ್ಯೋಗಿ ಯುವಕರು, ಮಹಿಳೆಯರು, ಸರ್ಕಾರೇತರ ಸಂಸ್ಥೆಗಳು ಹಾಗೂ ಸ್ವ-ಸಹಾಯ ಗುಂಪುಗಳ ಅಭ್ಯರ್ಥಿಗಳಿಗೆ ಸ್ವ-ಉದ್ಯೋಗ ಆಧಾರಿತ ತರಬೇತಿಗೆ ಅರ್ಜಿ ಸಲ್ಲಿಸಲು ಅರ್ಹರು. ತರಬೇತಿ ಪೂರ್ಣಗೊಳಿಸಿದ ನಂತರ ಅಭ್ಯರ್ಥಿಗಳಿಗೆ PMEGP ಯೋಜನೆಯಡಿಯಲ್ಲಿ ಬ್ಯಾಂಕ್‌ಗಳ ಮೂಲಕ … More

ಉಚಿತ ಟೈಲರಿಂಗ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ: ಕೇಂದ್ರ ಸರ್ಕಾರದ ಗ್ರಾಮೀಣ ಅಭಿವೃದ್ಧಿ ಸಚಿವಾಲಯ(MoRD) ಹಾಗೂ ಕರ್ನಾಟಕ ಸರ್ಕಾರದ ಗ್ರಾಮೀಣ ಜೀವನೋಪಾಯ ಮತ್ತು ಸಂವರ್ಧನ ಸಂಸ್ಥೆ (ಸಂಜೀವಿನಿ-KSRLPS) ಸಹಯೋಗದಲ್ಲಿ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು 31 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ(ಸಿಬಿಆರ್ ಎಸ್ಇಟಿಐ)ಯ ನಿರ್ದೇಶಕ ಅಂಬರೀಶ ಬಿ.ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆ.22 ರಿಂದ ತರಬೇತಿ … More

ಅಣಬೆ ಬೇಸಾಯ; ಉಚಿತ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ಸೊಣ್ಣಹಳ್ಳಿಪುರದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರ ಆಯೋಜಿಸಲಾಗಿದೆ ಎಂದು ಕೆನರಾ ಬ್ಯಾಂಕ್‌ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕ ಅಂಬರೀಶ ಬಿ ಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆ.19 ರಿಂದ 10 ದಿನಗಳವರೆಗೆ ಶಿಬಿರ ನಡೆಯಲಿದ್ದು, ರಾಜ್ಯದ ಯಾವುದೇ ಜಿಲ್ಲೆಯ 18 ರಿಂದ 45 ವಯೋಮಾನದ ನಿರುದ್ಯೋಗಿ ಪುರುಷ ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದು. ಊಟ, ವಸತಿ ಸೌಕರ್ಯಗಳು ನೀಡಲಾಗುವುದು. … More