ಗುವಿಸಕಂಪನಿ(GESCOM) ಕಿರಿಯ ಪವರ್‌ಮ್ಯಾನ್ ಅಂತಿಮ ಆಯ್ಕೆ ಪಟ್ಟಿ ಪ್ರಕಟ
ಕಲಬುರಗಿ: ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತದಲ್ಲಿನ ಕೆಕೆ ಮತ್ತು ಎನ್.ಕೆ.ಕೆ ವೃಂದದ ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಗುವಿಸಕಂಪನಿ ಪ್ರಧಾನ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜೂ.16 ರಿಂದ ಜೂ.19ರವರೆಗೆ ಅಧಿಸೂಚಿತ ಹುದ್ದೆಗಳಿಗೆ 1:5ರ ಅನುಪಾತದಲ್ಲಿನಡೆಸಲಾದ ಸಹನ ಶಕ್ತಿ ಪರೀಕ್ಷೆಯಲ್ಲಿ ಅರ್ಹರಾದ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಕಟ್-ಆಪ್ (Cut-Off) ಅಂಕಗಳೊಂದಿಗೆ ಅಂತರ್ಜಾಲದಲ್ಲಿ ಅ.17ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅ.28ರವರೆಗೆ ಅವಕಾಶ ನೀಡಲಾಗಿತ್ತು. ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ಅಭ್ಯರ್ಥಿಗಳ ಅಂತಿಮ … More