ಪಿಎಚ್.ಡಿ ಅಭ್ಯರ್ಥಿಗಳಿಗೆ ಫೆಲೋಶಿಪ್: ಅರ್ಜಿ ಆಹ್ವಾನ
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಜಿ ಆಹ್ವಾನಿಸಿದೆ. ರಾಜ್ಯದ ಶಾಸನಬದ್ಧ ವಿಶ್ವವಿದ್ಯಾಲಯಗಳಲ್ಲಿ/ಅಧೀನಕ್ಕೆ ಒಳಪಡುವ ಹಾಗೂ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-I, II(ಎ), III(ಎ) ಹಾಗೂ III(ಬಿ)ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಮಾಹೆಯಾನ 10,000ರೂ. ವರೆಗೆ ವ್ಯಾಸಂಗ ವೇತನ/ಫೆಲೋಶಿಪ್ ಅನ್ನು ನೀಡಲಾಗುತ್ತದೆ. ಸದರಿ ಯೋಜನೆಯಡಿ ಸೌಲಭ್ಯವನ್ನು ಪಡೆಯಲು … More