Good News: ಶಾಲಾ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ, ಬಾಳೆಹಣ್ಣು ವಿತರಣೆ
ವಾರದಲ್ಲಿ ಆರು ದಿನವೂ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮೊಟ್ಟೆ/ಬಾಳೆಹಣ್ಣನ್ನು ನೀಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್ ಪ್ರೇಮ್‌ಜಿ ಫೌಂಡೇಶನ್ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಪ್ರಸ್ತುತ ಯೋಜನೆಯನ್ನು 2025-26ನೇ ಸಾಲಿನಲ್ಲಿ ಮುಂದುವರಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಆದೇಶವನ್ನು … More