ಶ್ರವಣದೋಷವುಳ್ಳ ಬಾಲಕ/ಬಾಲಕಿಯರಿಗೆ ಉಚಿತ ಶಾಲಾ ಪ್ರವೇಶಾತಿಗೆ ಅರ್ಜಿ ಆಹ್ವಾನ: ಇಲ್ಲಿದೆ ಸಂಪೂರ್ಣ ಮಾಹಿತಿ!
ಮೈಸೂರಿನ ತಿಲಕ ನಗರದ ಕಿವುಡ ಮಕ್ಕಳ ಸರ್ಕಾರಿ ಪಾಠಶಾಲೆಯ ಸಂಸ್ಥೆಯು ಕರ್ನಾಟಕ ರಾಜ್ಯ ಸಂಸ್ಥೆಯಾಗಿದ್ದು, ಸಂಸ್ಥೆಯಲ್ಲಿ ಶ್ರವಣದೋಷವುಳ್ಳ/ಕಿವುಡ ಬಾಲಕರಿಗೆ ಉಚಿತ ವಸತಿಯುತ ಹಾಗೂ ಬಾಲಕಿಯರಿಗೆ ಬಾಹ್ಯ ವಿದ್ಯಾರ್ಥಿನಿಯರಾಗಿ ಉಚಿತವಾಗಿ 1ನೇ ತರಗತಿಯಿಂದ 10ನೇ ತರಗತಿಯವರೆಗೆ ಬೋಧನಾ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗಧಿ ಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಬೋಧಿಸಲಾಗುತ್ತದೆ. ವಿಶೇಷ ಮಕ್ಕಳಿಗೆ ಭಾಷಾ ಕಲಿಕೆಯಲ್ಲಿ ವಿನಾಯಿತಿ ಇದ್ದು, ಒಟ್ಟಾರೆಯಾಗಿ ಕನ್ನಡ ಭಾಷೆಯೊಂದಿಗೆ ಗಣಿತ ವಿಜ್ಞಾನ ಹಾಗೂ ಸಮಾಜಶಾಸ್ತ್ರ ವಿಷಯವನ್ನು … More