ಕೆಸೆಟ್ 2025ರ ತಾತ್ಕಾಲಿಕ ಫಲಿತಾಂಶ ಪಟ್ಟಿ ಪ್ರಕಟ
2025ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್ 2025)ಯ ತಾತ್ಕಾಲಿಕ ಫಲಿತಾಂಶಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶುಕ್ರವಾರ ಬಿಡುಗಡೆ ಮಾಡಿದೆ. ಅಂತಿಮ ಕೀ ಉತ್ತರಗಳನ್ವಯ ತಾತ್ಕಾಲಿಕ ಅಂಕಗಳನ್ನು ನ.15 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ನ.17ರವರೆಗೆ ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ವಿಷಯವಾರು ಕಟ್-ಆಫ್ ಅಂಕದೊಂದಿಗೆ ತಾತ್ಕಾಲಿಕ ಫಲಿತಾಂಶ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ನಲ್ಲಿ ಬಿಡುಗಡೆ ಮಾಡಲಾಗಿದೆ. ಯುಜಿಸಿ ಸೂತ್ರ ಮತ್ತು ರಾಜ್ಯ ಮೀಸಲಾತಿ ನೀತಿಯ ಪ್ರಕಾರ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ತಯಾರಿಸಲಾಗಿದೆ. 🠂 ಹೆಚ್.ಪ್ರಸನ್ನ, … More