ಕೆಇಎ ಪರೀಕ್ಷೆ: ಜ.10, 11ರ ತಾತ್ಕಾಲಿಕ ಫಲಿತಾಂಶ ಪ್ರಕಟ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆ/ಮಂಡಳಿಯ ಮೂಲ ಉಳಿಕೆ ವೃಂದದ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಜ.10 ಮತ್ತು ಜ.11ರಂದು ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯ ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಫಲಿತಾಂಶವನ್ನು ಸೋಮವಾರ(ಜ.19) ಪ್ರಕಟಿಸಿದೆ. ಪ್ರಕಟಿತ ಅಂತಿಮ ಕೀ ಉತ್ತರ, ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ತಾತ್ಕಾಲಿಕ ಫಲಿತಾಂಶಕ್ಕೆ ಜ.21ರ ಬೆಳಗ್ಗೆ 9 ರೊಳಗೆ ಪ್ರಾಧಿಕಾರ ವೆಬ್‌ಸೈಟ್ https://cetonline.karnataka.gov.in/kea/vdptrecnhk2025ನಲ್ಲಿ ಲಭ್ಯವಿರುವ ಲಿಂಕ್ ಮೂಲಕ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ. ಕೆಇಎ … More