ಕೆಸೆಟ್‌ 2025ರ ತಾತ್ಕಾಲಿಕ ಫಲಿತಾಂಶ ಪಟ್ಟಿ ಪ್ರಕಟ

2025ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್‌ 2025)ಯ ತಾತ್ಕಾಲಿಕ ಫಲಿತಾಂಶಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶುಕ್ರವಾರ ಬಿಡುಗಡೆ ಮಾಡಿದೆ. ಅಂತಿಮ ಕೀ ಉತ್ತರಗಳನ್ವಯ ತಾತ್ಕಾಲಿಕ ಅಂಕಗಳನ್ನು ನ.15 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ನ.17ರವರೆಗೆ ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ವಿಷಯವಾರು ಕಟ್‌-ಆಫ್‌ ಅಂಕದೊಂದಿಗೆ ತಾತ್ಕಾಲಿಕ ಫಲಿತಾಂಶ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ನಲ್ಲಿ ಬಿಡುಗಡೆ ಮಾಡಲಾಗಿದೆ. ಯುಜಿಸಿ ಸೂತ್ರ ಮತ್ತು ರಾಜ್ಯ ಮೀಸಲಾತಿ ನೀತಿಯ ಪ್ರಕಾರ ಅಭ್ಯರ್ಥಿಗಳ ಮೆರಿಟ್‌ ಪಟ್ಟಿಯನ್ನು ತಯಾರಿಸಲಾಗಿದೆ. 🠂 ಹೆಚ್‌.ಪ್ರಸನ್ನ, … More

ಕೆಇಎ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟ

ವಿವಿಧ ಇಲಾಖೆ/ಸಂಸ್ಥೆ/ನಿಗಮ/ಮಂಡಳಿಯಲ್ಲಿನ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದ ಹುದ್ದೆಗಳ ನೇಮಕಾತಿಗಾಗಿ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಗುರುವಾರ ಬಿಡುಗಡೆ ಮಾಡಿದೆ. ಕೆಕೆ ವೃಂದದ ಪರೀಕ್ಷೆಗಳು ಡಿ.20, 21 ಮತ್ತು 2026ರ ಜ.24, ಫೆ.22ರಂದು ನಡೆಯಲಿವೆ. 2026ರ ಜ.10, 11, 12 ಮತ್ತು 25 ರಂದು ಉಳಿಕೆ ಮೂಲ ವೃಂದ ಪರೀಕ್ಷೆಗಳು ನಡೆಯಲಿವೆ. ಇನ್ನುಳಿದ ವಿವಿಧ ಹುದ್ದೆಗಳ ಪರೀಕ್ಷಾ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ … More

ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದಲ್ಲಿ ವಿವಿಧ ಹುದ್ದೆಗಳ ಭರ್ತಿ; ಕೆಇಎ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ(ಕೆ.ಎಸ್.ಎಸ್.ಐ.ಡಿ ಸಿ)ದಲ್ಲಿ ಗ್ರೂಪ್‌-ಎ, ಬಿ ಮತ್ತು ಸಿ ಹುದ್ದೆಗಳ ನೇರ ನೇಮಕಾತಿ(KEA KSSIDC Recruitment 2025)ಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಉಳಿಕೆ ವೃಂದದಲ್ಲಿ 33 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 11 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಪಿಯುಸಿ, ಯಾವುದೇ ಪದವಿ, ಬಿಇ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಪರೀಕ್ಷೆಗೆ ನೋಂದಣಿಯಾಗಲು ನ.1 ರಿಂದ 25ರವರೆಗೆ ಅವಕಾಶ ನೀಡಲಾಗಿದೆ. ಆಸಕ್ತರು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ಕ್ಕೆ … More

ಕೆಇಎಯಿಂದ 976 ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆ ಮತ್ತೊಮ್ಮೆ ಅವಕಾಶ

ವಿವಿಧ ಇಲಾಖೆ/ನಿಗಮ/ಸಂಸ್ಥೆಗಳಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಡಿ ಖಾಲಿ ಇರುವ 976 ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಅರ್ಜಿ ಆಹ್ವಾನಿಸಿದೆ. ಉಳಿಕೆ ವೃಂದದಲ್ಲಿ 585 ಹುದ್ದೆಗಳು ಮತ್ತು ಕ.ಕ ವೃಂದದಲ್ಲಿ 391 ಹುದ್ದೆಗಳಿಗೆ ಸ್ಫರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುವುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ನ ಮೂಲಕ ಅ.9 ರಿಂದ ನ.25ರವರೆಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್‌.ಪ್ರಸನ್ನ ಅವರು ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಪ್ರಮುಖ … More

ಕೆಸೆಟ್‌ 2025ರ ಪರಿಷ್ಕೃತ ಕೀ ಉತ್ತರ ಪ್ರಕಟ

2025ನೇ ಸಾಲಿನ ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್‌)ಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನ.12ರಂದು ಬಿಡುಗಡೆ ಮಾಡಿದೆ. ಕೆಸೆಟ್‌ ಪರೀಕ್ಷೆಯ ನ.2ಕ್ಕೆ ನಡೆಸಲಾಗಿತ್ತು. ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನ.4ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ನ.6ರವರೆಗೆ ಕಾಲಾವಕಾಶ ನೀಡಲಾಗಿತ್ತು. ಈ ಸಮಯದಲ್ಲಿ 26 ವಿಷಯಗಳಿಗೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಸಿದ್ದು, ಇವರ ಶಿಪಾರಸ್ಸಿನ ಮೇರೆಗೆ ಪರಿಷ್ಕೃತ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/kset2025ನಲ್ಲಿ ಪ್ರಕಟಿಸಲಾಗಿದೆ. ಪರಿಸರ ವಿಜ್ಞಾನ, ಗೃಹ ವಿಜ್ಞಾನ, … More

ಕೆಸೆಟ್ ಪರೀಕ್ಷೆ 2025ರ ತಾತ್ಕಾಲಿಕ ಕೀ ಉತ್ತರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಹತೆ ಪಡೆಯಲು ನ.2ರಂದು ನಡೆಸಲಾದ (ಕೆಸೆಟ್) ಅರ್ಹತಾ ಪರೀಕ್ಷೆ 2025ರ ತಾತ್ಕಾಲಿಕ ಕೀ ಉತ್ತರಗಳನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ರಾಜ್ಯದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 34 ವಿಷಯಗಳಿಗೆ ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಸದರಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು KEA ಅಧಿಕೃತ ಜಾಲತಾಣ https://cetonline.karnataka.gov.in/kea/ದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಈ ಸಂಬಂಧ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ನವೆಂಬರ್ 06ರೊಳಗೆ ಆನ್ ಲೈನ್ ಮೂಲಕ … More

LIVE KSET Hall Ticket 2025: ಕೆಸೆಟ್‌ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

2025ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶುಕ್ರವಾರ(ಅ.24) ಬಿಡುಗಡೆ ಮಾಡಿದೆ. ನವೆಂಬರ್‌ 2 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಕೆಸೆಟ್‌ ಪರೀಕ್ಷೆ ನಡೆಯಲಿದೆ. ಸಾಮಾನ್ಯ ಪತ್ರಿಕೆ ಮತ್ತು ವಿಷಯ ಪತ್ರಿಕೆ ಎಂಬ ಎರಡು ಪತ್ರಿಕೆಯನ್ನೊಳಗೊಂಡ ಪರೀಕ್ಷೆಯಿದಾಗಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ https://cetonline.karnataka.gov.in/KEA_EXAM_PORTAL/Forms/Candidates/Loginನ ಮೂಲಕ ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಳ್ಳಬಹುದು. ಕೆಸೆಟ್‌ ಹಾಲ್‌ ಟಿಕೆಟ್‌(KSET Hall Ticket 2025) ಡೌನ್ಲೋಡ್‌ ಮಾಡುವುದು ಹೇಗೆ.? … More

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ; ವಿವಿಧ ಹುದ್ದೆಗಳ ನೇಮಕ

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ(Rajiv Gandhi University of Health Sciences)ದಲ್ಲಿ ಉಳಿಕೆ ವೃಂದ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಅರ್ಜಿ ಆಹ್ವಾನಿಸಿದೆ. ಜೂನಿಯರ್ ಪ್ರೋಗ್ರಾಮರ್, ಸಹಾಯಕ ಇಂಜಿನಿಯರ್, ಗ್ರಂಥಪಾಲಕ ಸೇರಿ ಒಟ್ಟು ಉಳಿಕೆ ವೃಂದದಲ್ಲಿ 40 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 04 ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ … More

PGET Medical 2025: ವೈದ್ಯಕೀಯ ಸ್ನಾತಕೋತ್ತರ ಪದವಿ, ಡಿಪ್ಲೊಮಾ ಕೋರ್ಸುಗಳ ನೋಂದಣಿಗೆ ಅ.15ರ ತನಕ ಅವಕಾಶ

ವೈದ್ಯಕೀಯ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸುಗಳಿಗೆ ಸರ್ಕಾರಿ ಮತ್ತು ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಸೀಟುಗಳನ್ನು ಸರ್ಕಾರಿ ಕೋಟಾದಡಿ ಪ್ರವೇಶಾತಿಗಾಗಿ ನೀಟ್‌ ಪಿಜಿ 2025ರಲ್ಲಿ ಅರ್ಹತೆ ಪಡೆದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅ.4 ರಿಂದ 15ವರೆಗೆ KEA ಅಧಿಕೃತ ಜಾಲತಾಣ https://cetonline.karnataka.gov.in/kea/pgetmed2025ನ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕರಾದ ಹೆಚ್.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: PG NEET 2025ಕ್ಕೆ ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು: … More

PGCET 2025: ಮೊದಲ ಸುತ್ತಿನ ಅಣುಕು ಫಲಿತಾಂಶ ಸೆ.29ಕ್ಕೆ

ಎಂಬಿಎ, ಎಂ.ಸಿ.ಎ, ಎಂಇ, ಎಂಟೆಕ್, ಎಂ.ಆರ್ಕ್ ಕೋರ್ಸುಗಳ ಪ್ರವೇಶಕ್ಕಾಗಿ ಮೊದಲನೇ ಸುತ್ತಿನ ಸೀಟು ಹಂಚಿಕೆಗೆ ಇಚ್ಛೆ/ಆಯ್ಕೆ ಆದ್ಯತಾ ಕ್ರಮದಲ್ಲಿ ದಾಖಲಿಸಲು ಸೆ.24 ರಿಂದ ಸೆ.28ರವೆರೆಗೆ ಅವಕಾಶವಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಣುಕು ಫಲಿತಾಂಶವನ್ನು ಸೆ.29ಕ್ಕೆ ಪ್ರಕಟಿಸಿ, ಇಚ್ಛೆ/ಆಯ್ಕೆಗಳನ್ನು ಅ.03ರವರೆಗೆ ಮಾರ್ಪಾಡು ಮಾಡಲು ಅವಕಾಶ ನೀಡಲಾಗುವುದು. ಸದರಿ ಸುತ್ತಿನ ನೈಜ ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಅ.03ಕ್ಕೆ ಪ್ರಕಟಿಸಲಾಗುತ್ತದೆ. ಅಂತಿಮ ಫಲಿತಾಂಶವನ್ನು ಅ.4ರಂದು ಬಿಡುಗಡೆ ಮಾಡಲಾಗುವುದು ಎಂದು ಅವರು ತಿಳಿಸಿದ್ದಾರೆ. … More