ಭೂಮಾಪಕ ಹುದ್ದೆಗಳ ನೇಮಕಾತಿಗೆ ಕೆಇಎ ಅರ್ಜಿ ಆಹ್ವಾನ

ಬೆಂಗಳೂರು: ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಯಗಳ ಇಲಾಖೆಯಲ್ಲಿ ಖಾಲಿ ಇರುವ 750 ಭೂಮಾಪಕ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿ ಆಹ್ವಾನಿಸಿದೆ. ಉಳಿಕೆ ಮೂಲ ವೃಂದದಲ್ಲಿ 560 ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ 190 ಸ್ಥಾನಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಪ್ರಕ್ರಿಯೆ ನಡೆಯಲಿದೆ. ಬಿಇ ಅಥವಾ ಬಿ.ಟೆಕ್‌ ಅಥವಾ ಸಂಬಂಧಿತ ವಿಷಯದಲ್ಲಿ ಬಿಎಸ್ಸಿ ಅಥವಾ ಡಿಪ್ಲೊಮಾ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಆ.07ರವರೆಗೆ ಗಡುವು ನೀಡಲಾಗಿದೆ. ಅರ್ಜಿ ಸಲ್ಲಿಕೆ … More

ಅವಧಿ ವಿಸ್ತರಣೆ; ಅರ್ಜಿ ತಿದ್ದುಪಡಿಗೆ ಬಿಡುವು

ಬೆಂಗಳೂರು: ಪೊಲೀಸ್‌ ಇಲಾಖೆಯ ಉಳಿಕೆ ಮೂಲ ವೃಂದ ಹಾಗೂ ಕೆಕೆ ವೃಂದದ ಸಿವಿಲ್‌ ಕಾನ್ಸ್ಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅರ್ಹರು ಅರ್ಜಿ ಸಲ್ಲಿಕೆಗಾಗಿ ಗಡುವನ್ನು ಜು.08ರವೆರೆಗೆ ವಿಸ್ತರಿಸಲಾಗಿದೆ. ಆನ್‌ಲೈನ್‌ ಅರ್ಜಿ ಸಲ್ಲಿಕೆ ಹಾಗೂ ಅರ್ಜಿ ಶುಲ್ಕ ಪಾವತಿಸಲು ಜು.08ರವೆರೆಗೆ ಹಾಗೂ ಈಗಾಗಲೇ ಸಲ್ಲಿಕೆಯಾದ ಅರ್ಜಿಗಳನ್ನು ತಿದ್ದುಪಡಿ/ಮಾರ್ಪಾಡು ಮಾಡಲು ಜು.10ರಿಂದ13ರವೆರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ತಿಳಿಸಿದೆ. ಇದನ್ನೂ ಓದಿ: ಕರ್ನಾಟಕ ಪೊಲೀಸ್‌ ಕಾನ್ಸ್ಟೇಬಲ್‌(ಸಿವಿಲ್‌) ನೇಮಕಾತಿ 2026

ಸಶಸ್ತ್ರ ಪೊಲೀಸ್‌ ಕಾನ್ಸ್ಟೇಬಲ್‌(ಸಿಎಆರ್‌/ಡಿಎಆರ್‌) ಭರ್ತಿ; ಕೆಇಎ ಆರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪೊಲೀಸ್‌ ಇಲಾಖೆಯ ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್‌ ಕಾನ್ಸ್ಟೇಬಲ್‌(ಸಿಎಆರ್‌/ಡಿಎಆರ್‌) ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಧಿಸೂಚನೆ ಹೊರಡಿಸಿದೆ. ಒಟ್ಟು 1600(1421 ಆರ್‌ಪಿಸಿ + 179 ಕೆಕೆ) ಸ್ಥಾನಗಳಿಗೆ ಭರ್ತಿ ನಡೆಯಲಿದೆ. ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದು. ಲಿಖಿತ ಪರೀಕ್ಷೆ ಸೇರಿದಂತೆ ನಾನಾ ಆಯ್ಕೆ ಪ್ರಕ್ರಿಯೆ ಮೂಲಕ ನೇಮಕ ನಡೆಯಲಿದ್ದು, ಅರ್ಹ ಆಸಕ್ತ ಅಭ್ಯರ್ಥಿಗಳು ಕೆಇಎ ಅಧಿಕೃತ ಜಾಲತಾಣ(https://cetonline.karnataka.gov.in/kea/indexnew)ದಲ್ಲಿ ಲಭ್ಯವಿರುವ ಲಿಂಕ್‌ … More

ಕರ್ನಾಟಕ ಪೊಲೀಸ್‌ ಕಾನ್ಸ್ಟೇಬಲ್‌(ಸಿವಿಲ್‌) ನೇಮಕಾತಿ; ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಮಿಕ್ಕುಳಿದ ವೃಂದದ ಖಾಲಿ ಇರುವ ಪೊಲೀಸ್‌ ಕಾನ್ಸ್ಟೇಬಲ್‌(ಸಿವಿಲ್‌) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೆಕೆ ವೃಂದದಲ್ಲಿ 595 ಸ್ಥಾನಗಳು ಹಾಗೂ ಮಿಕ್ಕುಳಿದ ವೃಂದ(ಮೂಲ ಉಳಿಕೆ ವೃಂದ)ದಲ್ಲಿ 3395 ಸ್ಥಾನಗಳಿಗೆ ಭರ್ತಿ ನಡೆಯಲಿದೆ. ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಅರ್ಹತೆ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದು. ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಮುಂದಿನ ಹಂತದ ಆಯ್ಕೆ ಪ್ರಕ್ರಿಯೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. … More

ಕೃಷಿ ಅಧಿಕಾರಿ, ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ಭರ್ತಿ; ಮರು ಅರ್ಜಿ ಆಹ್ವಾನ

ಬೆಂಗಳೂರು: ಕೃಷಿ ಇಲಾಖೆಯಲ್ಲಿ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದಲ್ಲಿ ಖಾಲಿ ಇರುವ ಗ್ರೂಪ್‌-ಬಿ ಕೃಷಿ ಅಧಿಕಾರಿ(ಎಒ) ಮತ್ತು ಸಹಾಯಕ ಕೃಷಿ ಅಧಿಕಾರಿ(ಎಎಒ) ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಷ್ಕೃತ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಕಲ್ಯಾಣ ಕರ್ನಾಟಕ ವೃಂದದಲ್ಲಿ 257 + 16 ಹಿಂಬಾಕಿ ಹಾಗೂ ಮೂಲ ಉಳಿಕೆ ವೃಂದದಲ್ಲಿ 670 +2 ಹಿಂಬಾಕಿ ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸಂಬಂಧಿತ ವಿಷಯದಲ್ಲಿ ಬಿಎಸ್ಸಿ, ಬಿ.ಟೆಕ್‌ … More

ವಿವಿಧ ಇಲಾಖೆಯ ನಾನಾ ಹುದ್ದೆಗಳ ಭರ್ತಿ; ಕೆಇಎ ಪರಿಷ್ಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಇಲಾಖೆಯಲ್ಲಿ ಉಳಿಕೆ ಮೂಲ ವೃಂದ ಹಾಗೂ ಸ್ಥಳೀಯ ವೃಂದದಲ್ಲಿ ಖಾಲಿ ಇರುವ ನಾನಾ ಹುದ್ದೆಗಳ ಭರ್ತಿಗಾಗಿ ಪರಿಷ್ಕೃತ ಅಧಿಸೂಚನೆ ಹೊರಡಿಸಿದೆ. ಕೃಷಿ ಮಾರಾಟ ಇಲಾಖೆ(ಆರ್‌ಪಿಸಿ 10 ಹುದ್ದೆ), ಬೆಂಗಳೂರು ನಗರ ನೀರು ಸರಬರಾಜು ಒಳಚರಂಡಿ ಮಂಡಳಿ(ಆರ್‌ಪಿಸಿ 16+ ಕೆಕೆ 06 ಹುದ್ದೆ) ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ನಿಯಮಿತ(ಆರ್‌ಪಿಸಿ 04+ ಕೆಕೆ 01 ಹುದ್ದೆ)ದಲ್ಲಿನ ಹುದ್ದೆಗಳಿಗೆ ನೇಮಕ ನಡೆಯಲಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮೇ 21ರಿಂದ … More

ಕೆಇಎ ಎಫ್‌ಡಿಎ, ಎಸ್‌ಡಿಎ ನೇಮಕಾತಿ; ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದದ ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಮತ್ತು ದ್ವಿತೀಯ ದರ್ಜೆ ಸಹಾಯಕ(ಎಸ್‌ಡಿಎ) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಎಫ್‌ಡಿಎ 02 ಸ್ಥಾನಗಳು, ಎಸ್‌ಡಿಎ 04 ಸ್ಥಾನಗಳಿಗೆ ನೇಮಕ ನಡೆಯಲಿದೆ. ದ್ವಿತೀಯ ಪಿಯುಸಿ, ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/kearpcrec2026ಕ್ಕೆ ಭೇಟಿ ನೀಡಿ. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಪ್ರಥಮ ದರ್ಜೆ ಸಹಾಯಕ(ಎಫ್‌ಡಿಎ) ಹುದ್ದೆಗೆ:- ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಅಥವಾ … More

ಕೃಷಿ ಇಲಾಖೆ: ಎಒ, ಎಎಒ ಹುದ್ದೆಗಳ ಭರ್ತಿ; ಅಧಿಸೂಚನೆ ಹಿಂಪಡೆದ ಕೆಇಎ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಕೃಷಿ ಇಲಾಖೆಯ ಕಲ್ಯಾಣ ಕರ್ನಾಟಕ ಹಾಗೂ ಉಳಿಕೆ ಮೂಲಕ ವೃಂದದ ಗ್ರೂಪ್‌ ‘ಬಿ’ ಕೃಷಿ ಅಧಿಕಾರಿ(ಎಒ), ಸಹಾಯಕ ಕೃಷಿ ಅಧಿಕಾರಿ(ಎಎಒ) ಹುದ್ದೆಗಳ ನೇಮಕಾತಿಗಾಗಿ ಹೊರಡಿಸಿದ್ದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಅವರು ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ವೃಂದದ 242+16(ಹಿಂಬಾಕಿ) ಸ್ಥಾನಗಳು, ಉಳಿಕೆ ಮೂಲ ವೃಂದದ 630+02(ಹಿಂಬಾಕಿ) ಸ್ಥಾನ ಸೇರಿದಂತೆ ಒಟ್ಟು 890 ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲು ಏ.19ರಿಂದ ಅರ್ಜಿ ಆಹ್ವಾನಿಸಲಾಗಿತ್ತು. ರಾಜ್ಯ ಸರ್ಕಾರವು … More

BWSSB ಎಂಜಿನಿಯರ್‌, ಸಹಾಯಕ, ಮಾಪನ ಓದುಗ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)ಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದಲ್ಲಿ ಗ್ರೂಪ್‌ ಬಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಧಿಸೂಚನೆ ಹೊರಡಿಸಿದೆ. ಕ.ಕ ವೃಂದದಲ್ಲಿ 59 ಹುದ್ದೆ, ಉಳಿಕೆ ವೃಂದದಲ್ಲಿ 165 ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಪಿಯುಸಿ, ಕಲಾ/ವಾಣಿಜ್ಯ/ವಿಜ್ಞಾನ, ಎಂಜಿನಿಯರಿಂಗ್, ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ನ.17 ರಿಂದ ನ.25ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು, ಸದರಿ ಅರ್ಜಿ ಸಲ್ಲಿಕೆ ಕೊನೆ … More

ವಾಯುವ್ಯ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ಹುದ್ದೆಗಳ ಭರ್ತಿ – ಅರ್ಜಿ ಸಲ್ಲಿಕೆ ಪ್ರಾರಂಭ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ವಿವಿಧ ವೃಂದದ ದರ್ಜೆ 2 ಅಧಿಕಾರಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ನೇರ ನೇಮಕಾತಿ ಮೂಲಕ 27 ಹುದ್ದೆಗಳು, 06 ಹುದ್ದೆಗಳನ್ನು ಆಂತರಿಕ ನೇಮಕಾತಿ ಮೂಲಕ ನೇಮಕ ಮಾಡಿಕೊಳ್ಳಲಿದೆ. ಪದವಿ ಮತ್ತು ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅರ್ಹ ಅಭ್ಯರ್ಥಿಗಳು ಡಿ.10 ರೊಳಗೆ ಕೆಇಎ ಅಧಿಕೃತ ವೆಬ್‌ಸೈಟ್‌ ಲಿಂಕ್‌ https://cetonline.karnataka.gov.in/KEARECRUITMENT_NWKRTC/FORMS/LOGIN.ASPXಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು … More