KREIS 2026: 6ನೇ ತರಗತಿ ವಿಶೇಷ ವರ್ಗದ ಮೀಸಲಾತಿಯಡಿ ಪ್ರವೇಶಾತಿ; ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ವಿಶೇಷ ವರ್ಗದ ಮೀಸಲಾತಿಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಶಿವಸ್ವಾಮಿ ಬಿ ಅವರು ತಿಳಿಸಿದ್ದಾರೆ. ವಿಶೇಷ ವರ್ಗದ ಅಭ್ಯರ್ಥಿಗಳಿಗೆ ಸರ್ಕಾರವು ಶೇ.50ರಷ್ಟು ಸೀಟುಗಳನ್ನು ಮೀಸಲಿರಿಸಿದ್ದು, ಅಭ್ಯರ್ಥಿಗಳನ್ನು ಪ್ರವೇಶ ಪರೀಕ್ಷೆಯಿಲ್ಲದೇ ಸೀಟುಗಳ ಲಭ್ಯತೆಯ ಆಧಾರದ ಮೇಲೆ ನೇರವಾಗಿ ಪ್ರವೇಶ ನೀಡಲಾಗುತ್ತದೆ. ಸೀಟು ಹಂಚಿಕೆ ಪ್ರಕ್ರಿಯೆಯು ಆನ್‌ಲೈನ್‌ ಮೂಲಕ ಇರಲಿದೆ. ಪ್ರಸ್ತುತ 5ನೇ ತರಗತಿಯಿಂದ ತೇರ್ಗಡೆಯಾಗಿರುವ ಆಸಕ್ತ … More

KREIS-ಮೊರಾರ್ಜಿ ವಸತಿ ಶಾಲೆ: 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ನಾನಾ ವಸತಿ ಶಾಲೆಗಳಲ್ಲಿ 2026ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ(ಜೂ.12) ಪ್ರಕಟಿಸಿದೆ. ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/kreis2026ಕ್ಕೆ ಭೇಟಿ ನೀಡಿ, ಫಲಿತಾಂಶವಿರುವ ಜಿಲ್ಲಾವಾರು ಪಟ್ಟಿಯನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು. ಸದರಿ ಪಟ್ಟಿಯಲ್ಲಿರುವ ವಿದ್ಯಾರ್ಥಿಗಳು, ಅಗತ್ಯ ದಾಖಲೆಗಳೊಂದಿಗೆ ಆಯಾ ಶಾಲೆಗಳಿಗೆ ಜೂ.20ರೊಳಗೆ ಪ್ರವೇಶಾತಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸೀಟು … More

ಕ್ರೈಸ್‌ 2026: ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್‌)ದಡಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಿಗೆ 2026-27ನೇ ಸಾಲಿನ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಮೊದಲ ಸುತ್ತಿನ ತಾತ್ಕಾಲಿಕ ಸೀಟು ಹಂಚಿಕೆ ಫಲಿತಾಂಶವನ್ನು ಶನಿವಾರ(ಮೇ 16) ಪ್ರಕಟಿಸಿದೆ. ವಿದ್ಯಾರ್ಥಿಗಳು/ಪೋಷಕರು ಪ್ರಾಧಿಕಾರ ಅಧಿಕೃತ ಜಾಲತಾಣhttps://cetonline.karnataka.gov.in/kea/kreis2026ದ ಮುಖೇನ ಹಂಚಿಕೆ ಪಟ್ಟಿಯನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು. ಸಂಸ್ಥೆ/ಶಾಲೆ ಹಾಗೂ ವರ್ಗವಾರು ಆಧಾರಿತ ವಿವರಗಳನ್ನೊಳಗೊಂಡ ಒಟ್ಟು 1248 ಪುಟಗಳ ಪಟ್ಟಿಯನ್ನು ಕೆಇಎ ಬಿಡುಗಡೆಗೊಳಿಸಿದೆ. ಕ್ರೈಸ್‌ ಮೊದಲ ಸುತ್ತಿನ ತಾತ್ಕಾಲಿಕ … More

KREIS ಪ್ರಥಮ ಪಿಯುಸಿ ಪ್ರವೇಶಾತಿ; ಅರ್ಜಿ ಆಹ್ವಾನ

ಬೆಂಗಳೂರು: 2026-27ನೇ ಶೈಕ್ಷಣಿಕ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಡಿ ಕಾರ್ಯನಿರ್ವಹಿಸುತ್ತಿರುವ ಹಾಗೂ ಉನ್ನತೀಕರಿಸಲಾಗಿರುವ ವಸತಿ ಶಾಲಾ/ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 8320 ಸ್ಥಾನಗಳಿಗೆ ಪ್ರವೇಶಾತಿ ನಡೆಯಲಿದ್ದು, ಅರ್ಜಿ ಸಲ್ಲಿಸಲು ಏ.29 ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ. ಪ್ರವೇಶಾತಿ ಬಯಸುವ ವಿದ್ಯಾರ್ಥಿಗಳು/ಪೋಷಕರು ಅರ್ಜಿ ಸಲ್ಲಿಸಲು ಕೆಆರ್‌ಇಐಎಸ್‌ ಅಧಿಕೃತ ಜಾಲತಾಣ https://kreis.karnataka.gov.in/ಕ್ಕೆ ಭೇಟಿ ನೀಡಿ. ಪ್ರವೇಶಾತಿಗೆ ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ … More

KREIS/EMRS 2026: ಅಂತಿಮ ಫಲಿತಾಂಶ, ಮೆರಿಟ್‌ ಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಮಾ.01ರಂದು ನಡೆದ ಪರೀಕ್ಷೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮಂಗಳವಾರ ಪ್ರಕಟಿಸಿದೆ. ತಾತ್ಕಾಲಿಕ ಫಲಿತಾಂಶವನ್ನು ಮಾ.17ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಸ್ವೀಕೃತ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿ ಅಭ್ಯರ್ಥಿಗಳ ಅಂತಿಮ ಫಲಿತಾಂಶ ಹಾಗೂ ತಾತ್ಕಾಲಿಕ ಮೆರಿಟ್‌ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ಜಾಲತಾಣ(https://cetonline.karnataka.gov.in/kea/kreis2026)ದಲ್ಲಿ ಬಿಡುಗಡೆಗೊಳಿಸಲಾಗಿದೆ ಎಂದು ಕೆಇಎ ಪ್ರಕಟಣೆ ತಿಳಸಿದೆ. … More

KREIS/EMRS 2026: ತಾತ್ಕಾಲಿಕ ಕೀ ಉತ್ತರ ಪ್ರಕಟ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಡಿ ಬರುವ ವಿವಿಧ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗಾಗಿ ಮಾ.01ರಂದು ನಡೆದ ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ(ಮಾ.03) ಪ್ರಕಟಿಸಿದೆ. ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/kreis2026.aspx ಮೂಲಕ ಕೀ ಉತ್ತರಗಳನ್ನು ಪರಿಶೀಲಿಸಬಹುದು. ಆಕ್ಷೇಪಣೆಗಳಿದ್ದಲ್ಲಿ ಮಾ.07ರ ಮಧ್ಯಾಹ್ನ 12 ಗಂಟೆಯೊಳಗೆ ಸಲ್ಲಿಸಬಹುದು ಎಂದು ಕೆಇಎ ಪ್ರಕಟಣೆ ತಿಳಿಸಿದೆ. ಪ್ರವೇಶ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರ ಹೇಗೆ ಡೌನ್ಲೋಡ್‌ ಮಾಡುವುದು? … More

KREIS ಪ್ರವೇಶ ಪರೀಕ್ಷೆ 2026 ಹಾಲ್‌ ಟಿಕೆಟ್‌ ಬಿಡುಗಡೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧೀನದಲ್ಲಿರುವ ವಸತಿ ಶಾಲೆಗಳಿಗೆ 2026ನೇ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಸಂಬಂಧಿಸಿದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾ.01ರಂದು ನಡೆಸಲಿರುವ ಪ್ರವೇಶ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಲು ಅವಕಾಶ ನೀಡಿದೆ. ಅಭ್ಯರ್ಥಿಗಳು ಪ್ರವೇಶ ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ವಸತಿ ಶಾಲೆಗೆ ಭೇಟಿ ನೀಡಿ ಪ್ರವೇಶ ಪತ್ರವನ್ನು ಡೌನ್ಲೋಡ್‌ ಮಾಡಿಕೊಳ್ಳಬಹುದು. KREIS Entrance Exam 2026 Hall Ticket Link(School Login) Login More … More

KREIS/EMRS 2026: ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಹಾಗೂ ಪರಿಶಿಷ್ಟ ಪಂಗಡಗಳ ವಸತಿ ಶಾಲಾ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳ ಪ್ರವೇಶಾತಿ ಪ್ರವೇಶ ಪರೀಕ್ಷೆ ನೋಂದಣಿಯ ಕೊನೆಯ ದಿನಾಂಕವನ್ನು ಫೆ.07ರವರೆಗೆ ವಿಸ್ತರಿಸಲಾಗಿದೆ. ಈ ಹಿಂದೆ ಫೆ.02ರವರೆಗೆ ನೋಂದಣಿಗೆ ಅವಕಾಶವಿತ್ತು. ಪರಿಶಿಷ್ಟ ಜಾತಿಯ ಒಳವೀಸಲು ಪ್ರವರ್ಗಗಳಾದ ಪ್ರವರ್ಗ ಎ, ಪ್ರವರ್ಗ ಬಿ, ಪ್ರವರ್ಗ ಸಿ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸುವಾಗ ಕಡ್ಡಾಯವಾಗಿ ಜಾತಿ ಪ್ರಮಾಣ ಪತ್ರದಲ್ಲಿ ಮುದ್ರಿತವಾಗಿರುವ ಆರ್‌ಡಿ ಸಂಖ್ಯೆ ನಮೂದಿಸಿ, ಅರ್ಜಿಯನ್ನು ಸಲ್ಲಿಸಬೇಕು ಎಂದು ಕೆಇಎ … More

KREIS 6ನೇ ತರಗತಿ ಪ್ರವೇಶಾತಿ ಪರೀಕ್ಷೆ; ನೋಂದಣಿ ಪ್ರಾರಂಭ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026-27ನೇ ಸಾಲಿಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಗೆ ಒಳಪಡುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ದಾಖಲಾತಿಗೆ ಸಂಬಂಧಿಸಿದ ಪ್ರವೇಶ ಪರೀಕ್ಷೆಗಾಗಿ ವಿದ್ಯಾರ್ಥಿಗಳಿಂದ ನೋಂದಣಿ ಪ್ರಕ್ರಿಯೆ ಆರಂಭಿಸಿದೆ. ಪ್ರವೇಶ ಪರೀಕ್ಷೆ ಮಾ.01ರಂದು ನಡೆಯಲಿದೆ. ಪ್ರಸ್ತುತ 5ನೇ ತರಗತಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ನಿಮಗೆ ಹತ್ತಿರವಿರುವ ಸಂಘದ ಅಧೀನದ ಯಾವುದೇ ವಸತಿ ಶಾಲೆಗೆ ಫೆ.07ರೊಳಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಪ್ರಮುಖ ದಿನಾಂಕಗಳು: ಅರ್ಜಿ ಸಲ್ಲಿಕೆಗೆ ವಾರ್ಷಿಕ ಆದಾಯದ … More

Morarji 4th Round Result 2025: ನಾಲ್ಕನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಮೊರಾರ್ಜಿ ಸೇರಿ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪರೀಕ್ಷೆಯನ್ನು ಫೆ.15 ರಂದು ನಡೆಸಿತ್ತು. ಇಂದು(ಜೂ.6) ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಕ್ಕೆ ಅರ್ಹತೆ ಪಡೆದ ಮೊದಲನೇ, ಎರಡನೇ ಹಾಗೂ (ವಿಶೇಷ ವರ್ಗದ ಅಭ್ಯರ್ಥಿಗಳಿಗೆ) ಮೂರನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಿತ್ತು, ಇನ್ನೂ ಆಯ್ಕೆಯಾದ ವಿದ್ಯಾರ್ಥಿಗಳು ನಾಲ್ಕನೇ ಸುತ್ತಿನ … More