ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ – ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
2025-26ನೇ ಶೈಕ್ಷಣಿಕ ಸಾಲಿಗೆ ವಿವಿಧ ಸ್ನಾತಕೋತ್ತರ ಕೋರ್ಸುಗಳ ಪ್ರವೇಶಾತಿಗೆ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಶಂಕರಗೌಡ ಸೋಮನಾಳ ಪ್ರವೇಶಾತಿ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾಗಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ, ಸ್ನಾತಕೋತ್ತರ ಡಿಪ್ಲೋಮಾ, ಬಿ.ಪಿ.ಎಡ್, ಮತ್ತು ಸರ್ಟಿಫಿಕೇಟ್ ಕೋರ್ಸುಗಳ ಪ್ರವೇಶ ಪಡೆಯಲು ಇಚ್ಛಿಸುವ ಮಹಿಳಾ ಅಭ್ಯರ್ಥಿಯು ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ(UUCMS) ಪೋರ್ಟಲ್ https://uucms.karnataka.gov.in/login/Indexನ ಮೂಲಕ ಅರ್ಜಿ ಸಲ್ಲಿಸಬಹುದು … More