ಕೆಸೆಟ್-2026: ಹಾಲ್‌ ಟಿಕೆಟ್‌ ಬಿಡುಗಡೆ

ಬೆಂಗಳೂರು ಅ.05: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಅ.11ರಂದು ನಡೆಸಲಿರುವ 2026ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(‌ಕೆಸೆಟ್-2026)ಯ ಪ್ರವೇಶ ಪತ್ರವನ್ನು ಸೋಮವಾರ ಬಿಡುಗಡೆ ಮಾಡಿದೆ. ಪತ್ರಿಕೆ-1 ಮತ್ತು ಪತ್ರಿಕೆ-2 ಒಳಗೊಂಡ ಪರೀಕ್ಷೆಯು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ರಾಜ್ಯದ ನಾನಾ ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಒಟ್ಟು 37 ವಿಷಯಗಳಿಗೆ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರಾಧಿಕಾರದಲ್ಲಿ ಲಭ್ಯವಿರುವ ಲಿಂಕ್‌ https://www.cetonline.karnataka.gov.in/KEA_EXAM_PORTAL/Forms/Candidates/Login ಮೂಲಕ ತಮ್ಮ ಅರ್ಜಿ ಸಂಖ್ಯೆ, ಹೆಸರು ನಮೂದಿಸುವ … More

ಕೆಸೆಟ್-2026ರ ಅರ್ಜಿ ಗಡುವು ವಿಸ್ತರಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2026ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್-2026)ಯ ಆನ್‌ಲೈನ್‌ ಅರ್ಜಿ ಸಲ್ಲಿಕೆಯ ಗಡುವನ್ನು ಸೆ.10ರವರೆಗೆ ವಿಸ್ತರಿಸಿದೆ. ಪರೀಕ್ಷೆ ಯು ಒಟ್ಟು 37 ವಿಷಯಗಳಲ್ಲಿ ಅ.11ರಂದು ರಾಜ್ಯದ 11 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದೆ. ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ಅರ್ಹತೆ ಹೊಂದಿದ ಅಥವಾ ಅಂತಿಮ ವರ್ಷದಲ್ಲಿ ವ್ಯಾಸಾಂಗ ಮಾಡುತ್ತಿರುವ ಅಭ್ಯರ್ಥಿಗಳೂ ಸಹ ಕೆಇಎ ಅಧಿಕೃತ ಜಾಲತಾಣ https://kearecruitment.karnataka.gov.in/kset2026/Account/Loginಕ್ಕೆ ಭೇಟಿ ನೀಡಿ ನೋಂದಣಿ ಮಾಡಿಕೊಳ್ಳಬಹುದು. ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಸಾಮಾನ್ಯ … More

ಕೆಸೆಟ್‌ 2025ರ ಮೂಲ ದಾಖಲಾತಿ ಪರಿಶೀಲನೆ ವೇಳಾಪಟ್ಟಿ ಬಿಡುಗಡೆ

ಕರ್ನಾಟಕ ಸಹಾಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2025ರಲ್ಲಿ ತಾತ್ಕಾಲಿಕ ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆಗಾಗಿ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗುರುವಾರ(ನ.27) ಬಿಡುಗಡೆ ಮಾಡಿದೆ. ನ.29 ರಿಂದ ಡಿ.06ರವರೆಗೆ ದಿನನಿತ್ಯ ಎರಡು ಪಾಳೆಯಲ್ಲಿ ದಾಖಲಾತಿ ಪರಿಶೀಲನೆ ನಡೆಯಲಿದ್ದು, ವಿಷಯವಾರು ಪಟ್ಟಿಯಲ್ಲಿರುವ ಅನುಕ್ರಮ ಸಂಖ್ಯೆಯನ್ನು ಆಧರಿಸಿ ನಿಗದಿತ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಲು ಅಭ್ಯರ್ಥಿಗಳಿಗೆ ಪ್ರಾಧಿಕಾರ ಹೊರಡಿಸಿದ ಪ್ರಕಟಣೆ ತಿಳಿಸಿದೆ. ಸ್ನಾತಕೋತ್ತರ ಪದವಿ ಪೂರ್ಣಗೊಂಡಿರುವ ಎಲ್ಲಾ ವರ್ಷಗಳ/ಸೆಮಿಸ್ಟರ್‌ಗಳ ಅಂಕ ಪಟ್ಟಿಗಳನ್ನು ಹೊಂದಿರುವ ಅಭ್ಯರ್ಥಿಗಳು … More

ಕೆಸೆಟ್‌ 2025ರ ತಾತ್ಕಾಲಿಕ ಫಲಿತಾಂಶ ಪಟ್ಟಿ ಪ್ರಕಟ

2025ನೇ ಸಾಲಿನ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್‌ 2025)ಯ ತಾತ್ಕಾಲಿಕ ಫಲಿತಾಂಶಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಶುಕ್ರವಾರ ಬಿಡುಗಡೆ ಮಾಡಿದೆ. ಅಂತಿಮ ಕೀ ಉತ್ತರಗಳನ್ವಯ ತಾತ್ಕಾಲಿಕ ಅಂಕಗಳನ್ನು ನ.15 ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ನ.17ರವರೆಗೆ ಅವಕಾಶ ನೀಡಲಾಗಿತ್ತು. ಸದರಿ ಪರೀಕ್ಷೆಯ ವಿಷಯವಾರು ಕಟ್‌-ಆಫ್‌ ಅಂಕದೊಂದಿಗೆ ತಾತ್ಕಾಲಿಕ ಫಲಿತಾಂಶ ಪಟ್ಟಿಯನ್ನು ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ https://cetonline.karnataka.gov.in/kea/ನಲ್ಲಿ ಬಿಡುಗಡೆ ಮಾಡಲಾಗಿದೆ. ಯುಜಿಸಿ ಸೂತ್ರ ಮತ್ತು ರಾಜ್ಯ ಮೀಸಲಾತಿ ನೀತಿಯ ಪ್ರಕಾರ ಅಭ್ಯರ್ಥಿಗಳ ಮೆರಿಟ್‌ ಪಟ್ಟಿಯನ್ನು ತಯಾರಿಸಲಾಗಿದೆ. 🠂 ಹೆಚ್‌.ಪ್ರಸನ್ನ, … More

ಕೆಸೆಟ್‌ 2025ರ ಪರಿಷ್ಕೃತ ಕೀ ಉತ್ತರ ಪ್ರಕಟ

2025ನೇ ಸಾಲಿನ ಕರ್ನಾಟಕ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆಸೆಟ್‌)ಯ ಪರಿಷ್ಕೃತ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನ.12ರಂದು ಬಿಡುಗಡೆ ಮಾಡಿದೆ. ಕೆಸೆಟ್‌ ಪರೀಕ್ಷೆಯ ನ.2ಕ್ಕೆ ನಡೆಸಲಾಗಿತ್ತು. ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನ.4ರಂದು ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ನ.6ರವರೆಗೆ ಕಾಲಾವಕಾಶ ನೀಡಲಾಗಿತ್ತು. ಈ ಸಮಯದಲ್ಲಿ 26 ವಿಷಯಗಳಿಗೆ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಸಿದ್ದು, ಇವರ ಶಿಪಾರಸ್ಸಿನ ಮೇರೆಗೆ ಪರಿಷ್ಕೃತ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ https://cetonline.karnataka.gov.in/kea/kset2025ನಲ್ಲಿ ಪ್ರಕಟಿಸಲಾಗಿದೆ. ಪರಿಸರ ವಿಜ್ಞಾನ, ಗೃಹ ವಿಜ್ಞಾನ, … More

ಕೆಸೆಟ್ ಪರೀಕ್ಷೆ 2025ರ ತಾತ್ಕಾಲಿಕ ಕೀ ಉತ್ತರ ಪ್ರಕಟ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಹತೆ ಪಡೆಯಲು ನ.2ರಂದು ನಡೆಸಲಾದ (ಕೆಸೆಟ್) ಅರ್ಹತಾ ಪರೀಕ್ಷೆ 2025ರ ತಾತ್ಕಾಲಿಕ ಕೀ ಉತ್ತರಗಳನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ರಾಜ್ಯದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 34 ವಿಷಯಗಳಿಗೆ ಯಶಸ್ವಿಯಾಗಿ ನಡೆಸಲಾಗಿತ್ತು. ಇದೀಗ ಪ್ರಾಧಿಕಾರವು ಸದರಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು KEA ಅಧಿಕೃತ ಜಾಲತಾಣ https://cetonline.karnataka.gov.in/kea/ದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ಈ ಸಂಬಂಧ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ನವೆಂಬರ್ 06ರೊಳಗೆ ಆನ್ ಲೈನ್ ಮೂಲಕ … More

LIVE KSET Hall Ticket 2025: ಕೆಸೆಟ್‌ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

2025ನೇ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶುಕ್ರವಾರ(ಅ.24) ಬಿಡುಗಡೆ ಮಾಡಿದೆ. ನವೆಂಬರ್‌ 2 ರಂದು ರಾಜ್ಯದ ವಿವಿಧ ಪರೀಕ್ಷಾ ಕೇಂದ್ರದಲ್ಲಿ ಕೆಸೆಟ್‌ ಪರೀಕ್ಷೆ ನಡೆಯಲಿದೆ. ಸಾಮಾನ್ಯ ಪತ್ರಿಕೆ ಮತ್ತು ವಿಷಯ ಪತ್ರಿಕೆ ಎಂಬ ಎರಡು ಪತ್ರಿಕೆಯನ್ನೊಳಗೊಂಡ ಪರೀಕ್ಷೆಯಿದಾಗಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ https://cetonline.karnataka.gov.in/KEA_EXAM_PORTAL/Forms/Candidates/Loginನ ಮೂಲಕ ಪ್ರವೇಶ ಪತ್ರ ಡೌನ್ಲೋಡ್‌ ಮಾಡಿಕೊಳ್ಳಬಹುದು. ಕೆಸೆಟ್‌ ಹಾಲ್‌ ಟಿಕೆಟ್‌(KSET Hall Ticket 2025) ಡೌನ್ಲೋಡ್‌ ಮಾಡುವುದು ಹೇಗೆ.? … More

ಕೆಸೆಟ್‌-2025 ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ಕರ್ನಾಟಕ ರಾಜ್ಯ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2025ರ ಅರ್ಜಿ ಸಲ್ಲಿಕೆ ಕೊನೆ ದಿನಾಂಕವನ್ನು ಸೆ.24ಕ್ಕೆ ಹಾಗೂ ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಭರಿಸಲು ಸೆ.25ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ದ ಕಾರ್ಯನಿರ್ವಾಹಕ ನಿರ್ದೇಶಕ ಎಚ್‌.ಪ್ರಸನ್ನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿಂದೆ ಅರ್ಜಿ ಸಲ್ಲಿಸಲು ಸೆ.18, ಅರ್ಜಿ ಶುಲ್ಕ ತುಂಬಲು ಸೆ.19 ನಿಗದಿಪಡಿಸಲಾಗಿತ್ತು. ಕೆಲವು ಅಭ್ಯರ್ಥಿಗಳು ಕೊನೆ ದಿನಾಂಕವನ್ನು ವಿಸ್ತರಿಸುವಂತೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದರು. ಆದ್ದರಿಂದ ಕೊನೆ ಅವಕಾಶ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹೆಚ್ಚಿನ … More

ಕೆಸೆಟ್ 2025: ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ, ಅರ್ಜಿ ಸಲ್ಲಿಸುವ ವಿಧಾನ ಹೇಗೆ?

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 2025ರ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(KSET)ನಡೆಸಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ರಾಜ್ಯದ ವಿಶ್ವವಿದ್ಯಾನಿಲಯ, ಪ್ರಥಮ ದರ್ಜೆ ಪದವಿ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆ (ಸರ್ಕಾರಿ, ಅನುದಾನಿತ ಮತ್ತು ಖಾಸಗಿ) ಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಗೊಳ್ಳಲು ಅರ್ಹತೆಯನ್ನು ಪಡೆಯಲು ಕೆಸೆಟ್ ಪರೀಕ್ಷೆಯನ್ನು ಪ್ರತಿ ವರ್ಷ ನಡೆಸಲಾಗುತ್ತದೆ. ಪ್ರಸ್ತುತ ಈ ಬಾರಿಯ ಕೆಸೆಟ್-2025ರ ಪರೀಕ್ಷೆಯನ್ನು 33 ವಿಷಯಗಳಲ್ಲಿ ನಡೆಸಲಾಗುತ್ತಿದ್ದು, ಪ್ರಾಧಿಕಾರವು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿ. ಆಸಕ್ತ ಮತ್ತು … More

KSET Syllabus 2025: ಕೆ-ಸೆಟ್‌ ಪರೀಕ್ಷೆಯ ಪಠ್ಯಕ್ರಮ ಬಿಡುಗಡೆ

ಪ್ರಸ್ತುತ ವರ್ಷದ ಕರ್ನಾಟಕ ರಾಜ್ಯ‌ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ(ಕೆ-ಸೆಟ್‌)ಯ ಪರೀಕ್ಷಾ ಪಠ್ಯಕ್ರಮವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ)ವು ಸೋಮವಾರ(ಸೆ.1) ಬಿಡುಗಡೆ ಮಾಡಿದೆ. ಕೆ-ಸೆಟ್‌ ಪರೀಕ್ಷೆಯು ನವೆಂಬರ್‌ 2 ರಂದು ನಡೆಯಲಿದೆ. ಒಟ್ಟು 33 ವಿಷಯಗಳ ವಿಷಯವಾರು ಪಠ್ಯಕ್ರಮವನ್ನು ಕೆಇಎ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://cetonline.karnataka.gov.in/kea/ಗೆ ಭೇಟಿ ನೀಡುವ ಮೂಲಕ ಪಠ್ಯಕ್ರಮವಿರುವ ಪಿಡಿಎಫ್‌ ಡೌನ್ಲೋಡ್‌ ಮಾಡಿಕೊಳ್ಳಬಹುದಾಗಿದೆ. KSET 2025 Subjects Wise Syllabus ಕೆ-ಸೆಟ್‌ 2025 ವಿಷಯವಾರು ಪಠ್ಯಕ್ರಮವನ್ನು ಈ … More