Self Employment Loan Scheme: ಸ್ವಯಂ ಉದ್ಯೋಗ ಆರಂಭಿಸಲು ಸರ್ಕಾರದಿಂದ ಸಹಾಯಧನ, ಸಾಲಕ್ಕಾಗಿ ಅರ್ಜಿ ಆಹ್ವಾನ
2025-26ನೇ ಸಾಲಿಗೆ ಸಂಬಂಧಿಸಿದಂತೆ ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆಗೆ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ವತಿಯಿಂದ ಆಯಾ ಜನಾಂಗಕ್ಕೆ ಸೇರಿದ ನಿರುದ್ಯೋಗಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ನಿಗಮದಿಂದ … More