KVS, NVS ಬೋಧಕ ಮತ್ತು ಬೋಧಕೇತರ ಪರೀಕ್ಷೆಯ ಕೀ ಉತ್ತರ ಪ್ರಕಟ

ಕೇಂದ್ರೀಯ ವಿದ್ಯಾಲಯ ಸಂಘಟನೆ ಮತ್ತು ನವೋದಯ ವಿದ್ಯಾಲಯ ಸಮಿತಿಯ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಜ.10 ಹಾಗೂ 11ರಂದು ನಡೆಸಲಾದ ಶ್ರೇಣಿ-1ರ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. CBSE ಅಧಿಕೃತ ಜಾಲತಾಣದ ಲಿಂಕ್‌ https://cbseit.in/cbse/2026/kvjnvkey/ನ ಮೂಲಕ ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಕೀ ಉತ್ತರವನ್ನು ಪರಿಶೀಲಿಸಿಕೊಳ್ಳಬಹುದು. ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಫೆಬ್ರವರಿ 04 ರ ರಾತ್ರಿ 11:59 ರೊಳಗೆ, ಪ್ರತಿ ಪ್ರಶ್ನೆಗೆ ₹1000/-ರಂತೆ ಪಾವತಿಸಿ ಆಕ್ಷೇಪಿಸಬಹುದು. ಕೀ ಉತ್ತರವನ್ನು … More

KVS, NVS ನೇಮಕಾತಿ ಪರೀಕ್ಷೆ; ಶ್ರೇಣಿ-1ರ ಪ್ರವೇಶ ಪತ್ರ ಬಿಡುಗಡೆ

ಕೇಂದ್ರೀಯ ವಿದ್ಯಾಲಯ ಸಂಘಟನೆ ಮತ್ತು ನವೋದಯ ವಿದ್ಯಾಲಯ ಸಮಿತಿಯ ವಿವಿಧ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ಭರ್ತಿಗಾಗಿ ಜ.10, 11ರಂದು ನಡೆಸಲಿರುವ ಶ್ರೇಣಿ-1 ಪರೀಕ್ಷೆಯ ಪ್ರವೇಶ ಪತ್ರ ಗುರುವಾರ(ಜ.8) ಬಿಡುಗಡೆಯಾಗಿದೆ. ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ದಿನ ಎರಡು ಪಾಳಿಗಳಲ್ಲಿ ಶ್ರೇಣಿ-1ರ ಪರೀಕ್ಷೆಗಳು ಜರುಗಲಿವೆ. ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನು NTA ಅಧಿಕೃತ ಜಾಲತಾಣ https://examinationservices.nic.in/AdmitCardService/ದಲ್ಲಿ ಲಭ್ಯವಿರುವ ಲಿಂಕ್‌ ಮೂಲಕ ಅಭ್ಯರ್ಥಿಗಳು ತಮ್ಮ ಲಾಗಿನ್ ರುಜುವಾತುಗಳನ್ನು ಬಳಸಿಕೊಂಡು ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು. ಪರೀಕ್ಷಾ ವೇಳಾಪಟ್ಟಿ … More

KVS ಮತ್ತು NVSನಲ್ಲಿ 14967 ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿ

ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಯಾಗಿರುವ ಕೇಂದ್ರೀಯ ವಿದ್ಯಾಲಯ ಸಂಘಟನೆ ಮತ್ತು ನವೋದಯ ವಿದ್ಯಾಲಯ ಸಮಿತಿಯು ಒಟ್ಟು 14,967+ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಪ್ರಾಂಶುಪಾಲರು, ಸಹಾಯಕ ಆಯುಕ್ತರು, ಉಪ ಪ್ರಾಂಶುಪಾಲರು, ಸ್ನಾತಕೋತ್ತರ ಶಿಕ್ಷಕರು, ತರಬೇತಿ ಪಡೆದ ಪದವೀಧರ ಶಿಕ್ಷಕರು, ಗ್ರಂಥಪಾಲಕ, ಪ್ರಾಥಮಿಕ ಶಿಕ್ಷಕರು ಹಾಗೂ ಬೋಧಕೇತರ ಹುದ್ದೆಗಳು ಸೇರಿದಂತೆ ಇತರೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ … More