ಬಿಸಿಎಂ ಹಾಸ್ಟೆಲ್: ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮೆಟ್ರಿಕ್-ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್-ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶ ಪಡೆಯಲು ಇಚ್ಛಿಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ ಮತ್ತು ಪ.ಪಂಗಡಕ್ಕೆ ಸೇರಿದ ಅರ್ಹ ವಿದ್ಯಾರ್ಥಿಗಳು ಅಧಿಕೃತ ಜಾಲತಾಣ https://shp.karnataka.gov.in/bcwdದ ಮೂಲಕ ಸೆ.30ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಪ್ರವರ್ಗ-1, … More