ಕಿರು ಉದ್ದಿಮೆ ಪ್ರಾರಂಭಿಸಲು ಸರ್ಕಾರದಿಂದ 15 ಲಕ್ಷ ರೂ.ವರೆಗೆ ಸಹಾಯಧನ: ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ಯಮಗಳ ಔಪಚಾರಿಕೀಕರಣ ಯೋಜನೆ (PMFME)ಯ ಆತ್ಮ ನಿರ್ಭರ ಭಾರತ ಅಭಿಯಾನದಡಿ ಪ್ರಧಾನ ಮಂತ್ರಿ ಕಿರು ಆಹಾರ ಸಂಸ್ಕರಣಾ ಘಟಕ ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ. ಸೂಕ್ಷ್ಮ ಹಾಗೂ ಸಣ್ಣ ಆಹಾರ ಉದ್ದಿಮೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ PMFME ಯೋಜನೆಯನ್ನು ಜಾರಿಗೆ ತರಲಾಗಿದೆ. ಸದರಿ ಯೋಜನೆಯಲ್ಲಿ ಹೊಸ ಆಹಾರ ಸಂಸ್ಕರಣಾ ಉದ್ದಿಮೆ ಪ್ರಾರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ಸಾಲ ಸೌಲಭ್ಯ ಜೊತೆಗೆ ಗರಿಷ್ಠ 15 ಲಕ್ಷರೂ.ಗಳವರೆಗೆ ಸಹಾಯಧನವನ್ನು ಪಡೆಯುವ ಅವಕಾಶವಿದೆ. … More