RRB ತಂತ್ರಜ್ಞ ಗ್ರೇಡ್ I ಸಿಗ್ನಲ್ ಮತ್ತು ಗ್ರೇಡ್ III ಅರ್ಜಿ ಸ್ಟೇಟಸ್‌ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿಯು ಸಿಇಎನ್‌ ನಂ.02/2025ರಡಿ ಅಧಿಸೂಚಿಸಿದ್ದ ಟೆಕ್ನಿಷಿಯನ್‌ ಗ್ರೇಡ್‌ I ಸಿಗ್ನಲ್‌ ಮತ್ತು ವಿವಿಧ ವರ್ಗಗಳ ಟೆಕ್ನಿಷಿಯನ್‌ ಗ್ರೇಡ್‌ III ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಸ್ಥಿತಿಯನ್ನು ಡಿ.8 ರಿಂದ ಪರಿಶೀಲಿಕೊಳ್ಳಬಹುದು. ಅಭ್ಯರ್ಥಿಗಳು ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಸ್ವೀಕೃತ ಹಾಗೂ ತಿರಸ್ಕೃತ ಅರ್ಜಿಗಳ ಮಾಹಿತಿಯನ್ನು http://www.rrbapply.gov.in/ನಲ್ಲಿ ಬಿಡುಗಡೆ ಮಾಡಲಾಗಿದೆ ಜೊತೆಗೆ ಅಭ್ಯರ್ಥಿಗಳು ನೋಂದಣಿ ಮಾಡಿರುವ ಮೊಬೈಲ್‌ ನಂಬರ್‌ಗೆ ಎಸ್‌ಎಮ್‌ಎಸ್‌ ಮೂಲಕವೂ ಮಾಹಿತಿ ಕಳುಹಿಸಲಾಗಿದೆ ಎಂದು ಮಂಡಳಿ ಹೊರಡಿಸಿದ ಪ್ರಕಟಣೆ ತಿಳಿಸಿದೆ. How … More

ಆರ್‌ಆರ್‌ಬಿ 9970 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ಅರ್ಜಿ ಸ್ಥಿತಿ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿಯು ಸಹಾಯಕ ಲೋಕೋ ಪೈಲೆಟ್ (ALP) ಹುದ್ದೆಗಳ ನೇಮಕಾತಿಗಾಗಿ ಸಲ್ಲಿಸಲಾದ ಅರ್ಜಿ ಸ್ಥಿತಿಯನ್ನು ಡಿ.05 ರಿಂದ ಪರಿಶೀಲನೆಗೆ ಅವಕಾಶ ನೀಡಿದೆ. RRB CEN ಸಂಖ್ಯೆ 01/2025ರಡಿ 9970 ಸಹಾಯಕ ಲೋಕೋ ಪೈಲೆಟ್ ಹುದ್ದೆಗಳ ಭರ್ತಿಗಾಗಿ ಅಧಿಸೂಚಿಸಿ, ಅರ್ಜಿ ಸ್ವೀಕರಿಸಿತ್ತು. ಸದರಿ ಹುದ್ದೆಗಳಿಗೆ ಸಲ್ಲಿಸಿದ ಅರ್ಜಿಗಳ ಪರಿಶೀಲನೆ ಪೂರ್ಣಗೊಂಡಿದ್ದು, ಅಭ್ಯರ್ಥಿಗಳ ಅರ್ಜಿಗಳ ಸ್ಥಿತಿಯನ್ನು ಆರ್‌ಆರ್‌ಬಿ ಆನ್‌ಲೈನ್‌ ಅಧಿಕೃತ ಜಾಲತಾಣ https://www.rrbapply.gov.in/ದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸ್ವೀಕರಿಸಲಾಗಿದೆಯೇ ಅಥವಾ ತಿರಸ್ಕರಿಸಲಾಗಿದೆಯೇ ಎಂಬುದನ್ನು ಪರಿಶೀಲಿಸಬಹುದು ಎಂದು … More

ಆರ್‌ಆರ್‌ಬಿ NTPC ಯುಜಿ ಕಂಪ್ಯೂಟರ್ ಆಧಾರಿತ ಪರೀಕ್ಷೆ 2ರ ವೇಳಾಪಟ್ಟಿ ಪ್ರಕಟ

ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಹಂತದ ಹುದ್ದೆಗಳ ನೇಮಕಾತಿಗಾಗಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆ-2ರ ತಾತ್ಕಾಲಿಕ ವೇಳಾಪಟ್ಟಿಯನ್ನು ರೈಲ್ವೆ ನೇಮಕಾತಿ ಮಂಡಳಿಯು ಬುಧವಾರ ಬಿಡುಗಡೆ ಮಾಡಿದೆ. ಒಟ್ಟು 3445 ಹುದ್ದೆಗಳ ಭರ್ತಿಗಾಗಿ ನಡೆಸಲಾಗಿದ್ದ ಮೊದಲ ಹಂತ ಕಂಪ್ಯೂಟರ್ ಆಧಾರಿತ ಪರೀಕ್ಷೆ -1 ರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗಾಗಿ ಎರಡನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ-2 ಅನ್ನು ಡಿಸೆಂಬರ್ 20 ರಂದು ನಡೆಸಲು ನಿರ್ಧರಿಸಲಾಗಿದ್ದು, ಸದರಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಆರ್.ಆರ್.ಬಿಯ ಎಲ್ಲಾ ಪ್ರಾದೇಶಿಕ ಅಧಿಕೃತ ಜಾಲತಾಣ … More

RRB NTPC ಯುಜಿ ಸಿಬಿಟಿ-1ರ ಫಲಿತಾಂಶ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು CEN 06/2024ರ ಅಡಿಯಲ್ಲಿ ಅಧಿಸೂಚಿಸಲಾದ NTPC ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಪೂರ್ವ ಹಂತದ ಹುದ್ದೆಗಳ ನೇಮಕಾತಿಗಾಗಿ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-1ರ ಫಲಿತಾಂಶವನ್ನು ನ.21ರಂದು ಅಧಿಕೃತವಾಗಿ ಬಿಡುಗಡೆ ಮಾಡಿದೆ. ಒಟ್ಟು 3445 ಹುದ್ದೆಗಳ ನೇಮಕಾತಿ ಸಂಬಂಧ ಮೊದಲನೇ ಹಂತದ ಕಂಪ್ಯೂಟರ್ ಆಧಾರಿತ ಪರೀಕ್ಷೆ -1 ಅನ್ನು ಆಗಸ್ಟ್ 07 ರಿಂದ ಸೆಪ್ಟೆಂಬರ್ 09 ರವರೆಗೆ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. ಇದೀಗ ಸದರಿ ಪರೀಕ್ಷೆಯ ಫಲಿತಾಂಶವನ್ನು RRB ಅಧಿಕೃತ ಜಾಲತಾಣ … More

RRB ಗ್ರೂಪ್‌-ಡಿ ಪರೀಕ್ಷೆ 2025ರ ಪರೀಕ್ಷಾ ನಗರ, ದಿನಾಂಕ ಹಾಗೂ ಶಿಫ್ಟ್‌ಗಳ ವಿವರ ಬಿಡುಗಡೆ

ರೈಲ್ವೆ ನೇಮಕಾತಿ ಮಂಡಳಿಯು CEN NO: 08/2024ರ ಅಡಿಯಲ್ಲಿ ಅಧಿಸೂಚಿಸಲಾದ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಸಂಬಂಧ ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಅಂತಿಮ ವೇಳಾಪಟ್ಟಿ ಹಾಗೂ ಸಿಟಿ ಇಂಟಿಮೇಶನ್ ಸ್ಲಿಪ್ ಅನ್ನು ಬುಧವಾರ (ನ.18)ರಂದು ಅಧಿಕೃತವಾಗಿ ಬಿಡುಗಡೆ ಮಾಡಲಾಗಿದೆ. ಜನವರಿ 22ರಂದು ಒಟ್ಟು 32,438 ಗ್ರೂಪ್ ಡಿ (7ನೇ ಸಿಪಿಸಿ ಪೇ ಮ್ಯಾಟ್ರಿಕ್ಸ್‌ನ ಹಂತ 1ರ) ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚಿಸಲಾಗಿತ್ತು. ಮೊದಲ ಹಂತ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಯನ್ನು 2025ರ … More

ಆರ್‌ಆರ್‌ಬಿ NPTC ಪದವಿ ಹಂತದ CBT 1ರ ಫಲಿತಾಂಶ ಪ್ರಕಟ

ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ ಪದವಿ ಹಂತದ ಹುದ್ದೆಗಳ ನೇಮಕಾತಿಗಾಗಿ 2025ರ ಜೂನ್ 5 ರಿಂದ 24 ರವರೆಗೆ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-1 (CBT-I)ರ ಫಲಿತಾಂಶವನ್ನು ಮಂಡಳಿಯು ಬಿಡುಗಡೆ ಮಾಡಿದೆ. CEN 05/2024ರ ಅಡಿ ಅಧಿಸೂಚಿಸಿ ತಾಂತ್ರಿಕೇತರ ಜನಪ್ರಿಯ ವರ್ಗಗಳ ವಿವಿಧ ಸ್ಟೇಷನ್ ಮೇಲ್ವಿಚಾರಕ, ಟಿಕೆಟ್ ಮೇಲ್ವಿಚಾರಕ, ಜೂನಿಯರ್ ಅಕೌಂಟ್ಸ್, ಅಸಿಸ್ಟೆಂಟ್ ಕಮ್ ಟೈಪಿಸ್ಟ್ ಹಾಗೂ ಸೀನಿಯರ್ ಕ್ಲರ್ಕ್ ಕಮ್ ಟೈಪಿಸ್ಟ್) ಸೇರಿದಂತೆ ಇತರೆ ಒಟ್ಟು 8113 ಪದವಿ ಹಂತದ ಹುದ್ದೆಗಳ ನೇಮಕಾತಿ … More

RRB NTPC UG ಕಂಪ್ಯೂಟರ್ ಆಧಾರಿತ ಪರೀಕ್ಷೆ-1ರ ಕೀ ಉತ್ತರ ಪ್ರಕಟ: ಆಕ್ಷೇಪಣೆಗೆ ಕಾಲಾವಕಾಶ

ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ (NTPC) ಪದವಿಪೂರ್ವ ಮಟ್ಟದ (UG) ಹುದ್ದೆಗಳ ನೇಮಕಾತಿ ಸಂಬಂಧ ಆ.7ರಿಂದ ಸೆ.9ರವರೆಗೆ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ-1ರ (CBT-I) ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. RRB ಸಿಇಎನ್ 06/2024ರ ಅನ್ವಯ ಒಟ್ಟು 3445 ಹುದ್ದೆಗಳ ಭರ್ತಿಗಾಗಿ ಅಧಿಸೂಚಿಸಿ, ಕಂಪ್ಯೂಟರ್ ಆಧಾರಿತ ಪರೀಕ್ಷೆ-I ಅನ್ನು ನಡೆಸಲಾಗಿತ್ತು. ಸದರಿ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಪ್ರಶ್ನೆಗಳು, ಪ್ರತಿಕ್ರಿಯೆಗಳು ಮತ್ತು ಉತ್ತರ ಕೀಗಳನ್ನು ಆರ್.ಆರ್.ಬಿ ಅಧಿಕೃತ ವೆಬ್ ಸೈಟ್ https://rrb.digialm.com//EForms/configuredHtml/2667/95125/login.htmlನಲ್ಲಿ ಪರಿಶೀಲನೆ ಮಾಡಿಕೊಳ್ಳಬಹುದಾಗಿದೆ. … More

RRB (CEN NO: 08/2024) ಗ್ರೂಪ್-ಡಿ CBT ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ರೈಲ್ವೆ ಇಲಾಖೆಯಲ್ಲಿನ ವಿವಿಧ ಗ್ರೂಪ್ ಡಿ ಹುದ್ದೆಗಳ ನೇಮಕಾತಿ ಸಂಬಂಧ ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ತಾತ್ಕಾಲಿಕ ವೇಳಾಪಟ್ಟಿಯನ್ನು ರೈಲ್ವೆ ನೇಮಕಾತಿ ಮಂಡಳಿಯು ಸೋಮವಾರ (ಸೆ.08)ರಂದು ಬಿಡುಗಡೆ ಮಾಡಿದೆ. CEN NO: 08/2024ರ ಅಡಿಯಲ್ಲಿ ಒಟ್ಟು 32,438 ಗ್ರೂಪ್ ಡಿ (7ನೇ ಸಿಪಿಸಿ ಪೇ ಮ್ಯಾಟ್ರಿಕ್ಸ್‌ನ ಹಂತ 1ರ) ಅಧಿಸೂಚಿಸಲಾಗಿತ್ತು. CBTಯನ್ನು ನವೆಂಬರ್ 17ರಿಂದ ಡಿಸೆಂಬರ್‌ವರೆಗೆ ಭಾರತದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಿದೆ. ಅಭ್ಯರ್ಥಿಗಳು ಪರೀಕ್ಷಾ ದಿನದ ನಾಲ್ಕು ದಿನಗಳ ಮುಂಚೆ ಅಧಿಕೃತ … More

RRB ಸಚಿವಾಲಯ ಮತ್ತು ಪ್ರತ್ಯೇಕ ವರ್ಗಗಳ ನೇಮಕಾತಿ; CBT ಪ್ರವೇಶ ಪತ್ರ ಬಿಡುಗಡೆ

ಸಚಿವಾಲಯ ಮತ್ತು ಪ್ರತ್ಯೇಕ ವರ್ಗಗಳ ವಿವಿಧ ಹುದ್ದೆಗಳ ನೇಮಕಾತಿ ಸಂಬಂಧ ಸೆ.10 ರಿಂದ 12ರವರೆಗೆ ನಡೆಯಲಿರುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಪ್ರವೇಶ ಪತ್ರವನ್ನು ರೈಲ್ವೆ ನೇಮಕಾತಿ ಮಂಡಳಿಯು ಶನಿವಾರ ಬಿಡುಗಡೆ ಮಾಡಿದೆ. ಜೂನಿಯ‌ರ್ ಅನುವಾದಕ, ಜೂನಿಯ‌ರ್ ಸ್ಟೆನೋಗ್ರಾಫ‌ರ್, ಸಿಬ್ಬಂದಿ ಮತ್ತು ಕಲ್ಯಾಣ ನಿರೀಕ್ಷಕ, ಮುಖ್ಯ ಕಾನೂನು ಸಹಾಯಕ, ಅಡುಗೆಯವರು, ಪಿಜಿಟಿ, ಟಿಜಿಟಿ ಸೇರಿ ವಿವಿಧ ಒಟ್ಟು 1036 ಹುದ್ದೆಗಳ ಭರ್ತಿಗಾಗಿ ಜ.6ರಂದು ಅಧಿಸೂಚಿಸಲಾಗಿತ್ತು. ಸದರಿ ಕಂಪ್ಯೂಟರ್ ಆಧಾರಿತ ಪರೀಕ್ಷೆಯ ಪ್ರವೇಶ ಪತ್ರವನ್ನು ಆರ್.ಆರ್.ಬಿ ಅಧಿಕೃತ ಅಂತರ್ಜಾಲ … More

ಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಅಂತಿಮ ಫಲಿತಾಂಶ ಪ್ರಕಟ

ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್) ಸಬ್ ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಯ ಅಂತಿಮ ಫಲಿತಾಂಶವನ್ನು ರೈಲ್ವೆ ನೇಮಕಾತಿ ಮಂಡಳಿಯು ಮಂಗಳವಾರ(ಆ.26) ಬಿಡುಗಡೆ ಮಾಡಿದೆ. ರೈಲ್ವೆ ನೇಮಕಾತಿ ಮಂಡಳಿಯು CEN RPF-01/2024ರ ಅಡಿಯಲ್ಲಿ ಅಧಿಸೂಚಿಸಲಾದ 452 ಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ (ಕಾರ್ಯನಿರ್ವಾಹಕ) ಹುದ್ದೆಗಳ ನೇಮಕಾತಿಗಾಗಿ 2024ರ ಡಿಸೆಂಬರ್ 2, 3, 9, 12 ಮತ್ತು 13ವೆರೆಗೆ ನಡೆಸಲಾದ ಕಂಪ್ಯೂಟರ್ ಆಧಾರಿತ ಪರೀಕ್ಷೆ (CBT)ಗಳಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ 2025ರ ಜೂನ್ 22, ಜುಲೈ 2ರವರೆಗೆ ದೈಹಿಕ ದಕ್ಷತೆ ಪರೀಕ್ಷೆ … More