ಇನ್ಶುರೆನ್ಸ್ ಕಂಪನಿಯಲ್ಲಿ ಆಡಳಿತ ಅಧಿಕಾರಿ(AO) ಹುದ್ದೆಗಳ ನೇಮಕಾತಿ

ಸಾರ್ವಜನಿಕ ವಲಯದ ಪ್ರಮುಖ ವಿಮಾ ಕಂಪನಿಯಾದ ದಿ ಓರಿಯಂಟಲ್ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ (OICL) ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. 285 ಜನರಲಿಸ್ಟ್ ಹುದ್ದೆಗಳು ಹಾಗೂ 15 ಹಿಂದಿ ಅಧಿಕಾರಿ ಹುದ್ದೆಗಳು ಸೇರಿ ಒಟ್ಟು 300 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.18 ರೊಳಗೆ OICL ಅಧಿಕೃತ ಜಾಲತಾಣ https://orientalinsurance.org.in/careersಕ್ಕೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ … More

ನಮ್ಮ ಮೆಟ್ರೋದಲ್ಲಿ ಇಂಜಿನಿಯರ್ ಹುದ್ದೆಗಳ ನೇಮಕಾತಿ: 2,06,250ರೂ.ವರೆಗೆ ವೇತನ

ಬಿ.ಎಂ.ಆರ್.ಸಿ.ಎಲ್‌ನ ಸಿಸ್ಟಮ್ ವಿಭಾಗದಲ್ಲಿ ಮುಖ್ಯ ಇಂಜಿನಿಯರ್, ಡೆಪ್ಯೂಟಿ ಮುಖ್ಯ ಇಂಜಿನಿಯರ್, ಕಾರ್ಯನಿರ್ವಾಹಕ ಇಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್ ಹುದ್ದೆಗಳ ಭರ್ತಿಗಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ಸೋಮವಾರ ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಕೆ ಡಿ.1ರಿಂದ ಪ್ರಾರಂಭವಾಗಿದೆ. ಒಟ್ಟು 27 ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಗುತ್ತಿಗೆ ಮತ್ತು ನಿಯೋಜನೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತೆಯನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.24ರೊಳಗೆ BMRCL ಅಧಿಕೃತ ವೆಬ್ಸೈಟ್ https://english.bmrc.co.in/career/ಗೆ ಭೇಟಿ … More

IPPBನಲ್ಲಿ ಜೂ.ಅಸೋಸಿಯೇಟ್‌ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳ ಭರ್ತಿ

ಅಂಚೆ ಇಲಾಖೆ ಅಡಿಯಲ್ಲಿ ಸ್ಥಾಪಿಸಲಾದ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಲಿಮಿಟೆಡ್ (IPPB)ನಲ್ಲಿ ಜೂನಿಯರ್ ಅಸೋಸಿಯೇಟ್‌ ಹಾಗೂ ಸಹಾಯಕ ವ್ಯವಸ್ಥಾಪಕ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಬ್ಯಾಂಕಿನ ವಿವಿಧ ಕಚೇರಿಗಳಲ್ಲಿ 199 ಜೂನಿಯರ್ ಅಸೋಸಿಯೇಟ್‌ ಮತ್ತು 110 ಸಹಾಯಕ ವ್ಯವಸ್ಥಾಪಕರು (ಸ್ಕೇಲ್-1) ಸೇರಿದಂತೆ ಒಟ್ಟು 309 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಕೆಗೆ ಡಿ.01 ಕೊನೆ ದಿನಾಂಕವಾಗಿ ನಿಗದಿಪಡಿಸಲಾಗಿತ್ತು, ಸದರಿ ಅವಧಿಯನ್ನು ಡಿ.08ರವರೆಗೆ ವಿಸ್ತರಿಸಲಾಗಿದೆ. ಈ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ … More

SSC ಕಾನ್‌ಸ್ಟೆಬಲ್(GD) 25,487 ಹುದ್ದೆಗಳ ಬೃಹತ್ ನೇಮಕಾತಿ

ಸಿಬ್ಬಂದಿ ಆಯ್ಕೆ ಆಯೋಗವು ವಿವಿಧ ಭದ್ರತಾ ಪಡೆಗಳಲ್ಲಿನ ಕಾನ್‌ಸ್ಟೆಬಲ್(ಜನರಲ್‌ ಡ್ಯೂಟಿ) ಹುದ್ದೆಗಳ ಭರ್ತಿಗಾಗಿ ನಡೆಸುವ ನೇಮಕಾತಿ ಪರೀಕ್ಷೆ 2026ರ ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಗಡಿ ಭದ್ರತಾ ಪಡೆ (BSF), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF), ಕೇಂದ್ರ ಮೀಸಲು ಪೊಲೀಸ್ ಪಡೆ (CRPF), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ITBP), ಸಶಸ್ತ್ರ ಸೀಮಾ ಬಲ್ (SSB) ಮತ್ತು ಸೆಕ್ರೆಟರಿಯೇಟ್ ಭದ್ರತಾ ಪಡೆ (SSF) ಮತ್ತು ಅಸ್ಸಾಂ ರೈಫಲ್ಸ್ (AR) ನಲ್ಲಿ ರೈಫಲ್‌ಮ್ಯಾನ್ ಪಡೆಗಳಿಗೆ ಒಟ್ಟು … More

BWSSB ಎಂಜಿನಿಯರ್‌, ಸಹಾಯಕ, ಮಾಪನ ಓದುಗ ಹುದ್ದೆಗಳ ಭರ್ತಿ; ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB)ಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಮೂಲ ವೃಂದದಲ್ಲಿ ಗ್ರೂಪ್‌ ಬಿ ಹುದ್ದೆಗಳ ಭರ್ತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಅಧಿಸೂಚನೆ ಹೊರಡಿಸಿದೆ. ಕ.ಕ ವೃಂದದಲ್ಲಿ 59 ಹುದ್ದೆ, ಉಳಿಕೆ ವೃಂದದಲ್ಲಿ 165 ಹುದ್ದೆಗಳ ಭರ್ತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ನಡೆಯಲಿದೆ. ಪಿಯುಸಿ, ಕಲಾ/ವಾಣಿಜ್ಯ/ವಿಜ್ಞಾನ, ಎಂಜಿನಿಯರಿಂಗ್, ಡಿಪ್ಲೊಮಾ ಪದವೀಧರ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ನ.17 ರಿಂದ ನ.25ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿತ್ತು, ಸದರಿ ಅರ್ಜಿ ಸಲ್ಲಿಕೆ ಕೊನೆ … More

IOCLನಲ್ಲಿ 2785 ಅಭ್ಯರ್ಥಿಗಳಿಗೆ ಅಪ್ರೆಂಟಿಸ್‌ಶಿಪ್‌

ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL)ನ ವಿವಿಧ ಸಂಸ್ಕರಣಾಗಾರ ಘಟಕಗಳಲ್ಲಿ ಅಪ್ರೆಂಟಿಸ್ ಕಾಯ್ದೆಯಡಿಯಲ್ಲಿ 2785 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅಧಿಸೂಚನೆ ಹೊರಡಿಸಿ, ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಟ್ರೇಡ್ ಅಪ್ರೆಂಟಿಸ್, ತಂತ್ರಜ್ಞ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್, ಲೆಕ್ಕಪರಿಶೋಧಕ ಹಾಗೂ ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ವಿವಿಧ ಟ್ರೇಡ್‌/ವಿಭಾಗಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ನ.28 ರಿಂದ ಡಿ.18ರೊಳಗೆ IOCL ಅಧಿಕೃತ ಜಾಲತಾಣ https://www.iocrefrecruit.in/iocrefrecruit/indexಕ್ಕೆ ಭೇಟಿ ನೀಡಿ … More

ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(KEONICS)ದಲ್ಲಿ ಉದ್ಯೋಗಾವಕಾಶ

ಕರ್ನಾಟಕ ಸರ್ಕಾರದ ಉದ್ಯಮ ಸಂಸ್ಥೆಯಾಗಿರುವ ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್)ದಲ್ಲಿ ಖಾಲಿ ಇರುವ ತರಬೇತಿ ಸಲಹೆಗಾರ ಮತ್ತು ಕಾನೂನು ಸಲಹೆಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಐಸಿಟಿ (ICT) ತರಬೇತಿ ಸಲಹೆಗಾರ(01) ಮತ್ತು ಕಾನೂನು ಸಲಹೆಗಾರ (01) ಸೇರಿದಂತೆ ಒಟ್ಟು 02 ಹುದ್ದೆಗಳಿಗೆ ಪದವೀಧರ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಾಗುತ್ತದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.02 ರೊಳಗೆ ಸ್ವಯಂ ದೃಢೀಕರಿಸಿದ ದಾಖಲಾತಿಗಳನ್ನು … More

ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ತರಬೇತಿದಾರರ ನೇಮಕಾತಿ

ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನ ಸ್ವಾಮ್ಯದ ಅಂಗಸಂಸ್ಥೆ ಕಂಪನಿಯಾಗಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌(UCSL)ನಲ್ಲಿ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಮೆಕ್ಯಾನಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ (12) ಹಾಗೂ ಎಲೆಕ್ಟ್ರಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ(04) ಸೇರಿದಂತೆ ಒಟ್ಟು 16 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಉದ್ಯೋಗಾಕಾಂಕ್ಷಿಗಳು ಡಿ.18ರೊಳಗೆ ಯುಸಿಎಸ್‌ಎಲ್ ಅಧಿಕೃತ ಜಾಲತಾಣ https://cochinshipyard.in/careerdetail/career_locations/730ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ … More

ಕರ್ನಾಟಕ ವಿದ್ಯುತ್‌ ನಿಗಮ(KPCL)ದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತದಲ್ಲಿ ಕಲ್ಯಾಣ ಕರ್ನಾಟಕ ಮತ್ತು ಮಿಕ್ಕುಳಿದ ವೃಂದದಲ್ಲಿ ಖಾಲಿ ಇರುವ ವಿವಿಧ ಬ್ಯಾಕ್‌ಲಾಗ್‌ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ.ಜಾತಿ ಮತ್ತು ಪ.ಪಂಗಡ ವರ್ಗಕ್ಕೆ ಮೀಸಲಾಗಿದ್ದ, ಭರ್ತಿಯಾಗದ ಖಾಲಿ ಹುದ್ದೆಗಳಿವು. ಫ್ಯಾಕ್ಟರಿ ಮೆಡಿಕಲ್‌ ಆಫೀಸರ್‌(02), ಮೆಡಿಕಲ್‌ ಆಫೀಸರ್‌(01), ಅಂಕೌಟ್ಸ್‌ ಆಫೀಸರ್‌(01), ಬಾಯ್ಲರ್‌ ಅಟೆಂಡೆಂಟ್‌ ಗ್ರೇಡ್‌-2 ಸೇರಿದಂತೆ ಒಟ್ಟು 5 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಎಸ್ಸೆಸ್ಸೆಲ್ಸಿ, ವೈದ್ಯಕೀಯ ಸ್ನಾತಕೋತ್ತರ ಪದವೀಧರರು, ಸಿಎ ಓದಿದವರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು https://kpcl.karnataka.gov.in/ನಲ್ಲಿ ಅರ್ಜಿ … More

ಮೈ.ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಪೌರಕಾರ್ಮಿಕರ ಹುದ್ದೆಗಳ ನೇರ ನೇಮಕಾತಿ

ಮೈಸೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ವಿವಿಧ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಗಾಗಿ ಮೈಸೂರು ಜಿಲ್ಲಾಧಿಕಾರಿಗಳ ಕಾರ್ಯಲಯದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 46 ಪೌರಕಾರ್ಮಿಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು ಡಿ.30ರೊಳಗೆ ಜಿಲ್ಲೆಯ ಆಯಾ ನಗರ ಸಂಸ್ಥೆಗಳಲ್ಲಿ ಅರ್ಜಿ ನಮೂನೆ ಪಡೆದು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕಾಲಾವಕಾಶ … More