DRDOನಲ್ಲಿ ಅಪ್ರೆಂಟಿಸ್‌ಶಿಪ್‌: ವಾಕ್-ಇನ್-ಇಂಟರ್ವ್ಯೂಗೆ ಕರೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯಡಿ ಬರುವ ಪ್ರಮುಖ ಸಂಶೋಧನಾ ಪ್ರಯೋಗಾಲಯವಾಗಿರುವ ರಕ್ಷಣಾ ಎಲೆಕ್ಟ್ರಾನಿಕ್ಸ್ ಸಂಶೋಧನಾ ಪ್ರಯೋಗಾಲಯ (DLRL)ನಲ್ಲಿ ಅಪ್ರೆಂಟಿಸ್‌ಶಿಪ್‌ ಕಾಯ್ದೆಯಡಿ ಅಪ್ರೆಂಟಿಸ್‌ ತರಬೇತಿಗೆ ಅಭ್ಯರ್ಥಿಗಳ ಆಯ್ಕೆಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಪದವೀಧರ (ತಾಂತ್ರಿಕ ಮತ್ತು ತಾಂತ್ರಿಕೇತರ), ತಂತ್ರಜ್ಞ ಅಪ್ರೆಂಟಿಸ್‌ ಒಟ್ಟು 46 ಅಪ್ರೆಂಟಿಸ್ ತರಬೇತಿಗೆ ಅಭ್ಯರ್ಥಿಗಳನ್ನು ವಾಕ್-ಇನ್ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದೆ. ಸದರಿ ಅಪ್ರೆಂಟಿಸ್ ತರಬೇತಿಗಳಿಗೆ ಸೇರ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://nats.education.gov.inನ ಮೂಲಕ ನೋಂದಾಯಿಸಿಕೊಂಡು, ನಿಗದಿತ ವಿಳಾಸದಲ್ಲಿ ನಡೆಯುವ ವಾಕ್-ಇನ್-ಸಂದರ್ಶನಕ್ಕೆ ಹಾಜರಾಗಲು … More

ಗುಪ್ತಚರ ಇಲಾಖೆ(IB)ಯಲ್ಲಿ ಮಲ್ಟಿ ಟಾಸ್ಕಿಂಗ್ ಸ್ಟಾಫ್(MTS) ಹುದ್ದೆಗಳ ಭರ್ತಿ

ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಗುಪ್ತಚರ ಇಲಾಖೆ (ಇಂಟೆಲಿಜೆನ್ಸ್ ಬ್ಯೂರೋ IB)ನಲ್ಲಿ 2025ನೇ ಸಾಲಿನ ಮಲ್ಟಿ-ಟಾಸ್ಕಿಂಗ್ ಸ್ಟಾಫ್ (ಸಾಮಾನ್ಯ) ಪರೀಕ್ಷೆಯ ಮೂಲಕ ವಿವಿಧ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಪ್ರಕಟಗೊಂಡಿದೆ. ಒಟ್ಟು 362 ಮಲ್ಟಿ ಟಾಸ್ಕಿಂಗ್ ಸ್ಟಾಫ್ (ಜನರಲ್) ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. ಎಸ್ಸೆಸ್ಸೆಲ್ಸಿ ಪಾಸಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಗೆ ಅರ್ಹರು. ನ.22 ರಿಂದ ಡಿ.14ರೊಳಗೆ ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು … More

CSIR NCLನಲ್ಲಿ ತಾಂತ್ರಿಕ ಸಿಬ್ಬಂದಿಗಳ ಭರ್ತಿ

ವೈಜ್ಞಾನಿಕ ಮತ್ತು ಕೈಗಾರಿಕಾ ಸಂಶೋಧನಾ ಮಂಡಳಿ(CSIR)ಯ ಅಧೀನದ ರಾಷ್ಟ್ರೀಯ ರಾಸಾಯನಿಕ ಪ್ರಯೋಗಾಲಯ(NCL)ವು ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ತಂತ್ರಜ್ಞ-I 15 ಹುದ್ದೆ ಹಾಗೂ ತಾಂತ್ರಿಕ ಸಹಾಯಕ 19 ಹುದ್ದೆ ಸೇರಿದಂತೆ ಒಟ್ಟು 34 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಎಸ್ಸೆಸ್ಸೆಲ್ಸಿ, ಡಿಪ್ಲೊಮಾ, ಬಿಎಸ್ಸಿ ಉದ್ಯೋಗಾಕಾಂಕ್ಷಿಗಳು ಜ.12ರೊಳಗೆ CISR ಅಧಿಕೃತ ಜಾಲತಾಣದ ಲಿಂಕ್‌ https://rectt.ngri.res.in/NCL_Group_2_3_2025/ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ✓ … More

KVS ಎಡಿಇ/ಎಲ್‌ಡಿಸಿಇ ಮೂಲಕ ಬೋಧಕ-ಬೋಧಕೇತರ 2499 ಹುದ್ದೆಗಳ ನೇಮಕ

ಕೇಂದ್ರೀಯ ವಿದ್ಯಾಲಯ ಸಂಘಟನೆಯು ಸೀಮಿತ ಇಲಾಖಾ ಪರೀಕ್ಷೆ (LDE) ಹಾಗೂ ಸೀಮಿತ ಇಲಾಖಾ ಸ್ಪರ್ಧಾತ್ಮಕ ಪರೀಕ್ಷೆ (LDCE)ಯ ಮೂಲಕ ವಿವಿಧ ಬೋಧಕ ಮತ್ತು ಬೋಧಕೇತರ ವೃಂದದ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ಪ್ರಾಂಶುಪಾಲ, ಉಪ ಪ್ರಾಂಶುಪಾಲ, ಪಿಜಿಟಿ ಮತ್ತು ಟಿಜಿಟಿ ಶಿಕ್ಷಕ, ಹೆಡ್ ಮಾಸ್ಟರ್, ಸೆಕ್ಷನ್ ಆಫೀಸರ್ ಹಾಗೂ ಫೈನಾನ್ಸ್ ಆಫೀಸರ್ ಸೇರಿದಂತೆ ಇತರೆ 2499 ಹುದ್ದೆಗಳನ್ನು ಅರ್ಹತೆ ಮತ್ತು ಹಿರಿತನದ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಅಗತ್ಯ ಶೈಕ್ಷಣಿಕ ಅರ್ಹತೆ ಜೊತೆಗೆ … More

DRDOನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್, ಟೆಕ್ನಿಷಿಯನ್ ಹುದ್ದೆಗಳು

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಸಿಬ್ಬಂದಿ ಪ್ರತಿಭಾ ನಿರ್ವಹಣಾ ಕೇಂದ್ರ(CEPТАМ)ದಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಮತ್ತು ಟೆಕ್ನಿಷಿಯನ್ “ಎ” ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಡಿ.11ರಿಂದ ಪ್ರಾರಂಭವಾಗಿದೆ. ವಿವಿಧ ವಿಭಾಗಗಳಿಗೆ 561 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು ಹಾಗೂ 203 ಟೆಕ್ನಿಷಿಯನ್ “ಎ” ಹುದ್ದೆಗಳು ಸೇರಿ ಒಟ್ಟು 764 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಡಿಪ್ಲೊಮಾ, ಬಿಎಸ್ಸಿ, ಐಟಿಐ ಉದ್ಯೋಗಾಕಾಂಕ್ಷಿಗಳು 2026ರ ಜ.01ರೊಳಗೆ DRDO ಅಧಿಕೃತ ಜಾಲತಾಣ https://drdo.gov.in/drdo/ದ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದು. … More

UPSC ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ (I) 2026ರ ನೋಂದಣಿ ಆರಂಭ

2026ರ ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ Iರ ನೋಂದಣಿಗಾಗಿ ಕೇಂದ್ರ ಲೋಕಸೇವಾ ಆಯೋಗ(UPSC)ವು ಅರ್ಜಿ ಆಹ್ವಾನಿಸಿದೆ. ಭಾರತೀಯ ಮಿಲಿಟರಿ ಅಕಾಡೆಮಿ ಡೆಹ್ರಾಡೂನ್ ಕೋರ್ಸ್, ಭಾರತೀಯ ನೌಕಾ ಅಕಾಡೆಮಿ ಎಳಿಮಲ ಕೋರ್ಸ್, ಹೈದರಾಬಾದ್‌ನ ವಾಯುಪಡೆ ಅಕಾಡೆಮಿ (ಪ್ರಿ-ಫ್ಲೈಯಿಂಗ್) ತರಬೇತಿ ಕೋರ್ಸ್ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿ (ಪುರುಷ/ ಮಹಿಳಾ) ಕೋರ್ಸ್‌ಗಳ 451 ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಡಿ.30ರೊಳಗೆ ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsconline.nic.in/ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಪ್ರಮುಖ … More

ಯುಪಿಎಸ್ಸಿ NDA NA ಪರೀಕ್ಷೆ-Iರ ನೋಂದಣಿ ಪ್ರಾರಂಭ

ಕೇಂದ್ರ ಲೋಕಸೇವಾ ಆಯೋಗವು (UPSC) 2026ರ ರಾಷ್ಟ್ರೀಯ ರಕ್ಷಣಾ ಅಕಾಡೆಮಿ(NDA) ಮತ್ತು ನೌಕಾ ಅಕಾಡೆಮಿ(NA) ಪರೀಕ್ಷೆ-Iರ ನೋಂದಣಿಗಾಗಿ ಬುಧವಾರ ಅಧಿಸೂಚನೆ ಹೊರಡಿಸಿದೆ. ರಾಷ್ಟ್ರೀಯ ರಕ್ಷಣಾ ಅಕಾಡೆಮಿಗಳಾದ ಸೇನಾ ವಿಭಾಗ, ನೌಕಾಪಡೆ, ವಾಯುಪಡೆಗಳಲ್ಲಿನ ತಾಂತ್ರಿಕ ಮತ್ತು ತಾಂತ್ರಿಕೇತರ ಹುದ್ದೆಗಳಿಗೆ ಹಾಗೂ ನೌಕಾ ಅಕಾಡೆಮಿಯ (10+2 ಕೆಡೆಟ್ ಪ್ರವೇಶ ಯೋಜನೆ) ವಿಭಾಗಗಳಲ್ಲಿ 394 ಹುದ್ದೆಗಳಿಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳನ್ನು ಈ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿ.30ರೊಳಗೆ ಯುಪಿಎಸ್‌ಸಿ … More

RITES ಲಿಮಿಟೆಡ್‌ನಲ್ಲಿ ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗೆ ಅರ್ಜಿ

ರೈಲ್ ಇಂಡಿಯಾ ತಾಂತ್ರಿಕ ಮತ್ತು ಆರ್ಥಿಕ ಸೇವೆ (RITES) ಲಿಮಿಟೆಡ್‌ನ ಬಹು ಎಂಜಿನಿಯರಿಂಗ್ ವೃತ್ತಿಪರರನ್ನು ಭರ್ತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ಪ್ರದೇಶಗಳಿಗೆ ಮೆಕ್ಯಾನಿಕಲ್ ವಿಭಾಗಕ್ಕೆ 150 ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಡಿ.30 ಕೊನೆದಿನವಾಗಿದ್ದು, ಅರ್ಜಿ ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅರ್ಜಿದಾರರು RITES ಲಿಮಿಟೆಡ್ ಅಧಿಕೃತ ವೆಬ್‌ಸೈಟ್ ಲಿಂಕ್‌ https://recruit.rites.com/frmRegistration.aspxಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಜಿ … More

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಉತ್ತರ ಕನ್ನಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ. ತಜ್ಞ ವೈದ್ಯರು, ಎಂ.ಬಿ.ಬಿ.ಎಸ್ ವೈದ್ಯಾಧಿಕಾರಿಗಳು ಹಾಗೂ ಶುಶ್ರೂಷಕಿಯರು ಸೇರಿದಂತೆ ಇತರೆ ಒಟ್ಟು 30ಕ್ಕೂ ಹೆಚ್ಚು ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ಇಲಾಖೆಯ ವಿಳಾಸಕ್ಕೆ ಭೇಟಿ ನೀಡಿ, ಡಿ.15ರೊಳಗೆ ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ … More

KVS ಮತ್ತು NVSನಲ್ಲಿ 14967 ಬೋಧಕ, ಬೋಧಕೇತರ ಹುದ್ದೆಗಳ ನೇಮಕಾತಿ

ಭಾರತ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಸ್ವಾಯತ್ತ ಸಂಸ್ಥೆಯಾಗಿರುವ ಕೇಂದ್ರೀಯ ವಿದ್ಯಾಲಯ ಸಂಘಟನೆ ಮತ್ತು ನವೋದಯ ವಿದ್ಯಾಲಯ ಸಮಿತಿಯು ಒಟ್ಟು 14,967+ ವಿವಿಧ ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟಿಸಿದೆ. ಪ್ರಾಂಶುಪಾಲರು, ಸಹಾಯಕ ಆಯುಕ್ತರು, ಉಪ ಪ್ರಾಂಶುಪಾಲರು, ಸ್ನಾತಕೋತ್ತರ ಶಿಕ್ಷಕರು, ತರಬೇತಿ ಪಡೆದ ಪದವೀಧರ ಶಿಕ್ಷಕರು, ಗ್ರಂಥಪಾಲಕ, ಪ್ರಾಥಮಿಕ ಶಿಕ್ಷಕರು ಹಾಗೂ ಬೋಧಕೇತರ ಹುದ್ದೆಗಳು ಸೇರಿದಂತೆ ಇತರೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳಿಗೆ … More