ಸರ್ಕಾರದಿಂದ ಉಚಿತ ಸಿಯುಇಟಿ ಪರೀಕ್ಷಾ ಪೂರ್ವ ತರಬೇತಿ ನೀಡಲು ಅರ್ಜಿ ಆಹ್ವಾನ
2025-26ನೇ ಸಾಲಿಗೆ ಪರಿಶಿಷ್ಟ ಜಾತಿಯ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ CUET ಪರೀಕ್ಷಾ ಪೂರ್ವ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವಿಧ ಕೇಂದ್ರೀಯ ವಿಶ್ವವಿದ್ಯಾಲಯಗಳಿಗೆ ಪ್ರವೇಶ ಪಡೆಯಲು ವಿದ್ಯಾರ್ಥಿಗಳಿಗೆ ನಡೆಸಲಾಗುವ ಸಿಯುಇಟಿ(Common University Entrance Test) ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿಯನ್ನು ನೀಡಲಾಗುತ್ತದೆ. ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸೆ.20 ರೊಳಗೆ https://swdservices.karnataka.gov.in/petccoaching/CUETHome.aspxಗೆ ಭೇಟಿ ಅರ್ಜಿ ಸಲ್ಲಿಸಬಹುದುಎಂದು ಇಂದಿರಾಗಾಂಧಿ ವೃತ್ತಿ ಅಭಿವೃದ್ಧಿ ಕೇಂದ್ರದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು: … More