UPSC ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ-II 2026ರ ನೋಂದಣಿ ಆರಂಭ
ಕೇಂದ್ರ ಲೋಕಸೇವಾ ಆಯೋಗವು 2026ನೇ ಸಾಲಿನ ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ-IIರ ನೋಂದಣಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಸ್ವೀಕಾರ ಪ್ರಾರಂಭಿಸಿದೆ. ಭಾರತೀಯ ಮಿಲಿಟರಿ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿ, ವಾಯುಪಡೆ ಅಕಾಡೆಮಿ, ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಗಳಗೆ 451 ಸ್ಥಾನಗಳಿಗೆ ಪ್ರವೇಶ ನಡೆಯಲಿದ್ದು, ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಮೇ 20ರಿಂದ ಪ್ರಾರಂಭಗೊಂಡು ಜೂನ್ 09ರಂದು ಕೊನೆಗೊಳ್ಳುತ್ತದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಆಸಕ್ತ ಪುರುಷ ಹಾಗೂ ಮಹಿಳಾ ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಯುಪಿಎಸ್‌ಸಿ ಅಧಿಕೃತo ವೆಬ್ಸೈಟ್ https://upsc.gov.in/ಗೆ … More