ಚಿತ್ರದುರ್ಗ ಜಿಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬಿಲ್ ಕಲೆಕ್ಟರ್ ಹುದ್ದೆಗಳ ಭರ್ತಿ

ಚಿತ್ರದುರ್ಗ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯತಿಗಳಲ್ಲಿ ಕರವಸೂಲಿಗಾರ(ಬಿಲ್ ಕಲೆಕ್ಟರ್) ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲೆಯ ಮೈಲನಹಳ್ಳಿ, ಹಿರೇಹಳ್ಳಿ, ಸಿರಿಗೆರೆ, ಸಾಣಿಕರೆ, ತಂಗಡ, ಆ‌ರ್.ನುಲೇನೂರು, ದೊಡ್ಡೇರಿ, ಜಾಜೂರು ಹಾಗೂ ಗನ್ನಾಯನಕನಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಆಸಕ್ತ ಮತ್ತು ಅರ್ಹ ಅರ್ಜಿದಾರರು ಚಿತ್ರದುರ್ಗ ಜಿಲ್ಲೆಯ ಅಧಿಕೃತ ಜಾಲತಾಣ https://chitradurga.nic.in/ ಕ್ಕೆ ಭೇಟಿ ನೀಡಿ, ಫೆಬ್ರವರಿ 8ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿಯ ಪ್ರಮುಖ ದಿನಾಂಕಗಳು: ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಗಳು ಮಾನ್ಯತೆ … More

ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ವಿವಿಧ ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ

ರಾಯಚೂರು ಜಿಲ್ಲಾ ಪಂಚಾಯಿತಿಯಲ್ಲಿ ಮಹಾತ್ಮಗಾಂಧಿ ರಾಷ್ಟೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ವಿವಿಧ ತಾಂತ್ರಿಕ ಸಿಬ್ಬಂದಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಡಿ.24 ಕೊನೆಯ ದಿನವಾಗಿದೆ. ತಾಂತ್ರಿಕ ಸಂಯೋಜಕ(02), ಎಂಐಎಸ್ ಸಂಯೋಜಕ(02), ಆಡಳಿತ ಸಹಾಯಕ(03) ಹಾಗೂ (ಅನುಷ್ಠಾನ ಇಲಾಖೆ ಗಣಕಯಂತ್ರ ನಿರ್ವಾಹಕ(02) ಸೇರಿದಂತೆ ಒಟ್ಟು 09 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಆಸಕ್ತ ಮತ್ತು ಅರ್ಹ ಉದ್ಯೋಗಾಕಾಂಕ್ಷಿಗಳು ರಾಯಚೂರು ಜಿಲ್ಲಾ ಪಂಚಾಯತ್ ಅಧಿಕೃತ … More

ಮಂಡ್ಯ ಜಿಲ್ಲಾ ಪಂಚಾಯತ್‌ನಲ್ಲಿ ವ್ಯವಸ್ಥಾಪಕ ಹುದ್ದೆಯ ನೇಮಕಾತಿ

ಮಂಡ್ಯ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಂಡ್ಯ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆಯಿಂದ ಅಭಿವೃದ್ಧಿಪಡಿಸಿರುವ ವಿವಿಧ ತಂತ್ರಾಂಶಗಳ ಅನುಷ್ಠಾನ ಮತ್ತು ಪ್ರಗತಿಯ ಬಗ್ಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜನೆಯ ಇ-ಪಂಚಾಯತ್ ಕಾರ್ಯಕ್ರಮದಡಿ ಜಿಲ್ಲಾ ಪಂಚಾಯತ್ ನಲ್ಲಿ ಪ್ರಸ್ತುತ ಖಾಲಿ ಇರುವ … More

ಮೈಸೂರು ಜಿಲ್ಲಾ ಪಂಚಾಯತ್​ನಲ್ಲಿ ಜಿಲ್ಲಾ ಯೋಜನಾ ವ್ಯವಸ್ಥಾಪಕರ(ADPM) ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು ಜಿಲ್ಲಾ ಪಂಚಾಯತ್‌ನಲ್ಲಿ 2025ನೇ ಸಾಲಿಗೆ ಖಾಲಿ ಇರುವ ಸಹಾಯಕ ಜಿಲ್ಲಾ ಯೋಜನಾ ವ್ಯವಸ್ಥಾಪಕರ (ADPM) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಇ-ಪಂಚಾಯತ್ ಯೋಜನೆಯಡಿ ಜಿಲ್ಲಾ ಪಂಚಾಯತ್‌ನಲ್ಲಿ ಪ್ರಸ್ತುತ ಖಾಲಿ ಇರುವ ಓರ್ವ(01)ಹುದ್ದೆಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೈಸೂರು ಜಿಲ್ಲಾ ಅಧಿಕೃತ ವೆಬ್ಸೈಟ್ https://mysore.nic.in/ಗೆ ಭೇಟಿ ನೀಡಿ. ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಮೈಸೂರು ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಉಕೇಶ್‌ಕುಮಾರ್ ಸುಬ್ರಮಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸದರಿ ನೇಮಕಾತಿಗೆ … More

ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು IEC ಸಂಯೋಜಕ ಹುದ್ದೆಗೆ ಅರ್ಜಿ ಆಹ್ವಾನ, ಅಪ್ಲೈ ಮಾಡಿ

ಜಿಲ್ಲಾ ಪಂಚಾಯತ್ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಖಾಲಿ ಇರುವ ತಾಲೂಕು IEC ಸಂಯೋಜಕ ಹುದ್ದೆ ನೇಮಕಾತಿಗಾಗಿ ಅಧಿಸೂಚನೆ ಬಿಡುಗಡೆ ಮಾಡಿದೆ. ತಾಲೂಕು IEC ಸಂಯೋಜಕ ಹುದ್ದೆಗೆ ಅಭ್ಯರ್ಥಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯಾದಗಿರಿ ಜಿಲ್ಲಾ ಪಂಚಾಯತಿಯ ಅಂತರ್ಜಾಲ https://yadgir.nic.in/ಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಬಿ.ಕೆ.ಆರ್. ಸರ್ವೀಸಸ್ ಪ್ರೈವೇಟ್ ಲಿಮಿಟೆಡ್, ಬೆಂಗಳೂರು ಪ್ರಕಟಣೆಯಲ್ಲಿ ತಿಳಿಸಿದೆ. ಈ … More

Bagalkot Zilla Panchayat Recruitment 2024: ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬಾಗಲಕೋಟೆ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತ ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯಲ್ಲಿ ಬರುವ ಬಾದಾಮಿ, ಬಾಗಲಕೋಟೆ, ಹನುಗುಂದ, ಜಮಖಂಡಿ ತಾಲೂಕಿನ ನಾಲ್ಕು ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಹಾಲಗೇರಿ, ದೇವನಾಳ, ಹಾವರಗಿ, ಕಂಕಣವಾಡಿ, ಗ್ರಾಮ ಪಂಚಾಯಿತಿಗಳಿಗೆ … More

Chikkaballapur Library Supervisor Vacancy 2024: ಚಿಕ್ಕಬಳ್ಳಾಪುರ ಗ್ರಂಥಾಲಯ ಮೇಲ್ವಿಚಾರಕರ ನೇಮಕಾತಿ

ಚಿಕ್ಕಬಳ್ಳಾಪುರ ಜಿಲ್ಲಾ ವ್ಯಾಪ್ತಿಯ ಬರುವ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಪಾಲಕರು ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಪಾಲಕರು ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಒಟ್ಟು 21 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಯಾವ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇದೆಯೋ ಆ ಗ್ರಾಮ ಪಂಚಾಯತ್ … More

Gadag Zilla Panchayat Recruitment 2024: ಜಿಲ್ಲಾ ಪಂಚಾಯತಿಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳು; ಇಲ್ಲಿದೇ ಮಾಹಿತಿ

ಗದಗ ಜಿಲ್ಲಾ ಪಂಚಾಯತ್ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಅಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಗದಗ ಜಿಲ್ಲಾ ಪಂಚಾಯತ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (MGNREGA) ಅಡಿಯಲ್ಲಿ ತಾಂತ್ರಿಕ ಸಹಾಯಕರು ಕೃಷಿ / ತಾಂತ್ರಿಕ ಸಹಾಯಕರು ತೋಟಗಾರಿಕೆ/ ತಾಂತ್ರಿಕ ಸಹಾಯಕರು ಅರಣ್ಯ ವಿಭಾಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ‌ ಅರ್ಜಿ ಅಹ್ವಾನಿಸಲಾಗಿದೆ. ಈ ನೇಮಕಾತಿಯಲ್ಲಿ ಒಟ್ಟು 16 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಆಸಕ್ತ … More

Bengaluru Urban ZP Recruitment 2024: PUC ಪಾಸ್ ಆದವರಿಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು ನಗರ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಯ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮತ್ತು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ನೇಮಕಾತಿಯಲ್ಲಿ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಬೆಂಗಳೂರು ನಗರ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಒಟ್ಟು 6 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್ ಆಧಾರದ ಮೇಲೆ … More

Haveri Gram Panchayat Recruitment 2024: PUC ಪಾಸ್, ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಆಹ್ವಾನ

ಹಾವೇರಿ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ(Haveri Gram Panchayat Recruitment 2024) ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ 2022 ನಿಯಮಗಳ ಅನ್ವಯ ಹಾವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಆರು ತಾಲೂಕಿನ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಒಟ್ಟು 18 … More