ಪ್ರಸಕ್ತ ಸಾಲಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಗೆ ನ್ಯಾಯಾಂಗ ಇಲಾಖೆಯಲ್ಲಿ ತರಬೇತಿಗಾಗಿ ತರಬೇತಿ ಭತ್ಯೆ ನೀಡಲು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೈಸೂರು ಜಿಲ್ಲೆಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡಲು ಹಲವಾರು ಯೋಜನೆ, ವಿದ್ಯಾರ್ಥಿವೇತನ ಹಾಗೂ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ. ಕಾನೂನು ಪದವಿ ಪಡೆದ ಮತೀಯ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಅಭ್ಯರ್ಥಿಗಳಿಗೆ ಕಾನೂನು ತರಬೇತಿ ಪಡೆಯಲು ತರಬೇತಿ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ಧಾರೆ.
ಸದರಿ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು, ವಯೋಮಿತಿ, ಅರ್ಹತೆಗಳು ಹಾಗೂ ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
• ಅಭ್ಯರ್ಥಿಯು ಸೆಪ್ಟೆಂಬರ್ 04, 2025 ರೊಳಗೆ ವಕೀಲರಾಗಿ ಕಾರ್ಯನಿರ್ವಹಿಸಲು ನಿಗದಿಪಡಿಸಲಾದ ಕಾನೂನು ಪರೀಕ್ಷೆಯಲ್ಲಿ ತೇರ್ಗಡೆಯಾಗಿ 2 ವರ್ಷ ಪೂರ್ಣಗೊಳಿಸಿರಬೇಕು.
• ಅಭ್ಯರ್ಥಿಗಳು ಅಲ್ಪಸಂಖ್ಯಾತ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ) ಜನಾಂಗಕ್ಕೆ ಸೇರಿದವರಾಗಿರಬೇಕು.
• ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಅಲ್ಪಸಂಖ್ಯಾತರ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
• ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯವು 3.50 ಲಕ್ಷರೂ. ಮೀರರಿಬಾರದು.
• ಅಭ್ಯರ್ಥಿಯು ತಮ್ಮ ಹೆಸರನ್ನು ಬಾರ್ ಕೌನ್ಸಿಲ್ನಲ್ಲಿ ನೋಂದಾಯಿಸಿರಬೇಕು.
ವಯೋಮಿತಿ:
04-09-2025 ರಂತೆ;
ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ವಿಳಾಸಕ್ಕೆ ಭೇಟಿ ನೀಡಿ. ಅರ್ಜಿ ನಮೂನೆ ಪಡೆದು.
ಅರ್ಜಿಯಲ್ಲಿ ಕೇಳಲಾಗುವ ಸ್ವ ವಿವರ ಹಾಗೂ ಎಲ್ಲಾ ಅಗತ್ಯ ಶೈಕ್ಷಣಿಕ ದಾಖಲಾತಿಗಳನ್ನು ಲಗತ್ತಿಸಿ. ಸೆಪ್ಟೆಂಬರ್ 4 ರೊಳಗೆ ಅರ್ಜಿ ಸಲ್ಲಿಸಬಹುದು.
ವಿಳಾಸ:
ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ# ಸಿ.ಎ ನಂ.01, ಮೌಲಾನಾ ಆಜಾದ್ ಭವನ, ದಂಡಿನ ಮಾರಮ್ಮನ ದೇವಸ್ಥಾನದ ಎದುರು. ಮೈಸೂರು ಮತ್ತು ಬೆಂಗಳೂರು ರಸ್ತೆ, ಮೈಸೂರು-570007
ಹೆಚ್ಚಿನ ಮಾಹಿತಿಗಾಗಿ: ದೂ.ಸಂ – 0821-2422088 ಅನ್ನು ಸಂಪರ್ಕಿಸಬಹುದು.