ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಜೆಕ್ಟ್ ಅಸಿಸ್ಟೆಂಟ್, ಹೆಲ್ಪರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಬೆಳಗಾವಿ, ಹಾವೇರಿ, ವಿಜಯಪುರ, ಗದಗ ಈ ಭಾಗಗಳಲ್ಲಿ ಉದ್ಯೋಗವನ್ನು ಅರಸುತ್ತಿದ್ದರೆ ನಿಮಗೆ ಇದು ಸದವಕಾಶವಾಗಲಿದೆ. ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 13, 2025 ರಂದು ವಾಕ್ ಇನ್ ಸಂದರ್ಶನಕ್ಕೆ ಹಾಜರಾಗಬಹುದು. ವಯೋಮಿತಿ, ಆಯ್ಕೆ ಪ್ರಕ್ರಿಯೆ, ಸಂಬಳ, ಸಂದರ್ಶನಕ್ಕೆ ಹಾಜರಾಗಲು ವಿಳಾಸ ಸೇರಿದಂತೆ ಸಂಪೂರ್ಣ ಮಾಹಿತಿ ನಿಮಗಿಲ್ಲಿ ನೀಡಲಾಗಿದೆ.
ಅಧಿಸೂಚನೆಯಂತೆ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವವರು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಬಿ.ಎಸ್ಸಿ/ ಬಿ.ಟೆಕ್ ಪೂರ್ಣಗೊಳಿಸಿರಬೇಕು. ಹೆಲ್ಪರ್ ಹುದ್ದೆಗೆ ಹತ್ತನೇಯ ತರಗತಿ ಉತ್ತೀರ್ಣರಾಗಿದ್ದರೆ ಅರ್ಜಿಯನ್ನು ಸಲ್ಲಿಸಬಹುದು.
ಆಯ್ಕೆ ಪ್ರಕ್ರಿಯೆ:
ದಾಖಲೆ ಪರಿಶೀಲನೆ
ಲಿಖಿತ ಪರೀಕ್ಷೆ
ಸಂದರ್ಶನ
ವೇತನ:
ಪ್ರಾಜೆಕ್ಟ್ ಅಸಿಸ್ಟೆಂಟ್ – ರೂ. 30,000/-
ಹೆಲ್ಪರ್ – ರೂ.15000/-
ಅರ್ಜಿ ಸಲ್ಲಿಸುವುದು ಹೇಗೆ ?
ಧಾರವಾಡ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ (ಅಧಿಕೃತ ಅಧಿಸೂಚನೆಯಲ್ಲಿ ಉಲ್ಲೇಖಿಸಿದಂತೆ) ಈ ಕೆಳಗಿನ ಸ್ಥಳದಲ್ಲಿ ವಾಕ್-ಇನ್-ಇಂಟರ್ವ್ಯೂಗೆ ಹಾಜರಾಗಬಹುದು – ಚೇಂಬರ್ ಆಫ್ ಅಸೋಸಿಯೇಟ್ ಡೈರೆಕ್ಟರ್ ಆಫ್ ರಿಸರ್ಚ್ (HQ), ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ-580005
ರಾಮಕೃಷ್ಣ ಬಿ ಹೆಚ್ ಅವರು 2020ರಿಂದ ಉದ್ಯೋಗ ಸುದ್ದಿಯ ಮೂಲಕ ತಮ್ಮ ಓದುಗರಿಗೆ ನಿಖರ, ನೈಜ ಮತ್ತು ಸವಿವರವಾದ ಮಾಹಿತಿಯನ್ನು ತಲುಪಿಸುತ್ತಿದ್ದಾರೆ. ವಿಶೇಷವಾಗಿ ಉದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಕುರಿತಾಗಿ ಆಳವಾದ ಅಧ್ಯಯನವನ್ನು ಇಟ್ಟುಕೊಂಡಿದ್ದು, ಯುವಕರಿಗೆ ಉದ್ಯೋಗದ ಮಾಹಿತಿಯನ್ನು ತಲುಪಿಸುವ ಗುರಿಯನ್ನು ಇಟ್ಟುಕೊಂಡಿದ್ದಾರೆ.