ವಿವಿಧ ರಾಜ್ಯಗಳಲ್ಲಿರುವ UCO ಬ್ಯಾಂಕಿನ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 532 ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬ್ಯಾಂಕಿಂಗ್ ವಲಯದಲ್ಲಿ ಕೆಲಸ ನಿರ್ವಹಿಸಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಅರ್ಹ ಪದವೀಧರ ಅಭ್ಯರ್ಥಿಗಳು NATS ಅಧಿಕೃತ ಜಾಲತಾಣ https://nats.education.gov.in/ದ ಮೂಲಕ ಅ.30ರೊಳಗೆ ಅರ್ಜಿ ಸಲ್ಲಿಸಬಹುದು.
ಅಭ್ಯರ್ಥಿಗಳು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
01-10-2025 ರಂತೆ;
ಕನಿಷ್ಠ ವಯಸ್ಸಿನ ಮಿತಿ – 20 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ – 28 ವರ್ಷಗಳು
ವಯೋಮಿತಿ ಸಡಿಲಿಕೆ – ಪ.ಜಾತಿ, ಪ. ಪಂಗಡದ ಅಭ್ಯರ್ಥಿಗಳಿಗೆ – 5 ವರ್ಷಗಳು, ಇತರ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 3 ವರ್ಷಗಳು, ಅಂಗವಿಕಲ ಅಭ್ಯರ್ಥಿಗಳಿಗೆ – 10 ವರ್ಷಗಳು (SC/ST-15, OBC-13)
ಆಯ್ಕೆ ಪ್ರಕ್ರಿಯೆ:
ಆನ್ಲೈನ್ ಲಿಖಿತ ಪರೀಕ್ಷೆ
ಮೆರಿಟ್ ಲಿಸ್ಟ್
ದಾಖಲಾತಿ ಪರಿಶೀಲನೆ/ವೈದ್ಯಕೀಯ ಪರೀಕ್ಷೆ
ಸ್ಟೈಫಂಡ್:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಹೆಯಾನ 15,000ರೂ. ವರೆಗೆ ಸ್ಟೈಫಂಡ್ ನೀಡಲಾಗುತ್ತದೆ.
ಅರ್ಜಿ ಶುಲ್ಕ:
• ಪ.ಜಾತಿ, ಪ. ಪಂಗಡದ ಅಭ್ಯರ್ಥಿಗಳಿಗೆ – ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ • ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 400ರೂ.+ (ಜಿಎಸ್ಟಿ) • ಸಾಮಾನ್ಯ ವರ್ಗ, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ – 800ರೂ. + (ಜಿಎಸ್ಟಿ)
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಹಂತಗಳು
• NATS ಅಧಿಕೃತ ಜಾಲತಾಣ https://nats.education.gov.in/ ಕ್ಕೆ ಭೇಟಿ ನೀಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
• ಲಾಗಿನ್ ಆದ ನಂತರ UCO ಬ್ಯಾಂಕ್ 1961 ರ ಅಪ್ರೆಂಟಿಸ್ ಕಾಯ್ದೆಯ ಅಡಿಯಲ್ಲಿ ಅಪ್ರೆಂಟಿಸ್ ಗಳ ನಿಯೋಜನೆ “ಜಾಹೀರಾತು ಸಂಖ್ಯೆ:HO/HRM/RECR/2025-26/COM-03” ಹುಡುಕಿ ಅನ್ವಯಿಸುವ ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಭವಿಷ್ಯದ ಎಲ್ಲಾ ಪತ್ರವ್ಯವಹಾರಗಳಿಗಾಗಿ ತಮ್ಮ ದಾಖಲಾತಿ ಐಡಿಯನ್ನು NATS ಪೋರ್ಟಲ್ನಿಂದ ನೀಡಲಾಗುತ್ತದೆ.
• NATS ನಲ್ಲಿ ಅಪ್ರೆಂಟಿಸ್ಶಿಪ್ ಅವಕಾಶ/ಜಾಹೀರಾತಿಗಾಗಿ ಯಶಸ್ವಿಯಾಗಿ ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳಿಗೆ BFSI SSC (info@bfsissc.com) ನಿಂದ ಇಮೇಲ್ ಅನ್ನು ಸ್ವೀಕರಿಸುತ್ತಾರೆ.
• ನಂತರ ಅಭ್ಯರ್ಥಿಗಳ ತರಬೇತಿಗಾಗಿ ರಾಜ್ಯಗಳ ಆಯ್ಕೆ ಇತ್ಯಾದಿಗಳ ಬಗ್ಗೆ ಅಗತ್ಯ ವಿವರಗಳನ್ನು ನೀಡಲು ಮತ್ತು ಅರ್ಜಿ ಶುಲ್ಕವನ್ನು ಪಾವತಿಸಲು ಆಹ್ವಾನಿಸಲಾಗುತ್ತದೆ.
• ನಂತರ ಅಭ್ಯರ್ಥಿಗಳು ಅಗತ್ಯ ವಿವರಗಳು ಹಾಗೂ ರಾಜ್ಯಗಳನ್ನು ಆಯ್ಕೆ ಮಾಡಿ. ಅರ್ಜಿ ಶುಲ್ಕ ಪಾವತಿ ಮಾಡಬಹುದು.
• ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ಭವಿಷ್ಯದ ಎಲ್ಲಾ ಪತ್ರವ್ಯವಹಾರಗಳಿಗಾಗಿ ತಮ್ಮ ದಾಖಲಾತಿ ಐಡಿಯನ್ನು ತಪ್ಪದೇ ಬರೆದಿಟ್ಟುಕೊಳ್ಳಿ.