ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ತರಬೇತಿದಾರರ ನೇಮಕಾತಿ

ಅರ್ಜಿ ಸಲ್ಲಿಕೆಗೆ ಡಿ.18ರ ಗಡುವು

Published on:

ಭಾರತ ಸರ್ಕಾರದ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್ (CSL)ನ ಸ್ವಾಮ್ಯದ ಅಂಗಸಂಸ್ಥೆ ಕಂಪನಿಯಾಗಿರುವ ಉಡುಪಿ ಕೊಚ್ಚಿನ್ ಶಿಪ್‌ಯಾರ್ಡ್ ಲಿಮಿಟೆಡ್‌(UCSL)ನಲ್ಲಿ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.

ಮೆಕ್ಯಾನಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ (12) ಹಾಗೂ ಎಲೆಕ್ಟ್ರಿಕಲ್ ಡಿಪ್ಲೊಮಾ ಎಂಜಿನಿಯರಿಂಗ್ ತರಬೇತಿದಾರ(04) ಸೇರಿದಂತೆ ಒಟ್ಟು 16 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದೆ. ಸದರಿ ಹುದ್ದೆಗಳ ಅರ್ಹತಾ ಮಾನದಂಡಗಳನ್ನು ಪೂರೈಸುವ ಉದ್ಯೋಗಾಕಾಂಕ್ಷಿಗಳು ಡಿ.18ರೊಳಗೆ ಯುಸಿಎಸ್‌ಎಲ್ ಅಧಿಕೃತ ಜಾಲತಾಣ https://cochinshipyard.in/careerdetail/career_locations/730ಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಕೆ ಪ್ರಾರಂಭದ ದಿನಾಂಕ – ನವೆಂಬರ್ 19, 2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಡಿಸೆಂಬರ್ 18, 2025
  • ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಡಿಸೆಂಬರ್ 18, 2025

ಶೈಕ್ಷಣಿಕ ಅರ್ಹತೆ:

ಯುಸಿಎಸ್‌ಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ರಾಜ್ಯ ತಾಂತ್ರಿಕ ಶಿಕ್ಷಣ ಮಂಡಳಿಯಿಂದ ಕನಿಷ್ಠ 60% ಅಂಕಗಳೊಂದಿಗೆ ಸಂಬಂಧಿಸಿದ ವಿಭಾಗದಲ್ಲಿ (ಮೆಕ್ಯಾನಿಕಲ್/ಎಲೆಕ್ಟ್ರಿಕಲ್) ಎಂಜಿನಿಯರಿಂಗ್‌ನಲ್ಲಿ 03 ವರ್ಷಗಳ ಡಿಪ್ಲೊಮಾ ಪೂರ್ಣಗೊಳಿಸಿರಬೇಕು.

ವಯೋಮಿತಿ:

18-12-2025 ರಂತೆ;

ಕನಿಷ್ಠ ವಯಸ್ಸಿನ ಮಿತಿ – 25 ವರ್ಷಗಳು

ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷಗಳು, ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – 05 ವರ್ಷಗಳು

ಆಯ್ಕೆ ವಿಧಾನ:

• ಹಂತ-I ವಸ್ತುನಿಷ್ಠ ಪ್ರಕಾರದ ಆನ್‌ಲೈನ್ ಪರೀಕ್ಷೆ
• ಹಂತ-II ವಿವರಣಾತ್ಮಕ ಪ್ರಕಾರದ ಪರೀಕ್ಷೆ
• ದಾಖಲಾತಿ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ

ಸಂಭಾವನೆ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ₹28,000ರೂ.ಗಳಿಂದ 1,10,000ರೂ. ವರೆಗೆ ಪ್ರತಿ ತಿಂಗಳು ಸಂಭಾವನೆಯನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೂ – 600ರೂ.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ:

• ಯುಸಿಎಸ್‌ಎಲ್ ಅಧಿಕೃತ ಜಾಲತಾಣ https://cochinshipyard.in/careerdetail/career_locations/730 ಕ್ಕೆ ಭೇಟಿ ನೀಡಿ.

• ವೃತ್ತಿ ಜೀವನ ವಿಭಾಗದ ಕೆಳಗೆ ನೀಡಲಾಗಿರುವ “ನೋಂದಣಿ ಮತ್ತು ಲಾಗಿನ್‌ಗಾಗಿ ಇಲ್ಲಿ ಕ್ಲಿಕ್ ಮಾಡಿ” ಲಿಂಕ್ ಮೇಲೆ ಟ್ಯಾಪ್ ಮಾಡಿ.

• ಲಾಗಿನ್ ಐಡಿ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.

• ನಂತರ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವ ವಿವರ, ಭಾವಚಿತ್ರ, ಶೈಕ್ಷಣಿಕ ಮಾಹಿತಿ, ಸಹಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.

• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ.

• ಕೊನೆಯಲ್ಲಿ ಅರ್ಜಿಯನ್ನು ಎಚ್ಚರಿಕೆಯಿಂದ ಪರಿಶೀಲಿಸಿ ಸಲ್ಲಿಸಿ.

• ಅಂತಿಮವಾಗಿ ಯಶಸ್ವಿಯಾಗಿ ಸಲ್ಲಿಸಿದ ಅರ್ಜಿ ಪ್ರತಿಯನ್ನು ಡೌನ್ಲೋಡ್ ಮಾಡಿ ಮುದ್ರಿಸಿ.

Important Direct Links:

Official Notification PDFDownload
Online Application Form LinkApply Now
Official Websiteudupicsl.com
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment