Udupi Namma Clinic Junior Health Assistant Vacancy 2024: ಉಡುಪಿ ಜಿಲ್ಲೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನಾಳೆ (ಅಗಸ್ಟ್ 3) ಸಂಜೆ 4:00 ಒಳಗೆ ಅರ್ಜಿಯನ್ನು ಸಲ್ಲಿಸಬೇಕು.
ಉಡುಪಿ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆಯು ಉಡುಪಿ ಜಿಲ್ಲೆಯ ನಮ್ಮ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ಒಟ್ಟು 6 ಕಿರಿಯ ಆರೋಗ್ಯ ಸಹಾಯಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿತ ಕಚೇರಿಯಲ್ಲಿ ಅರ್ಜಿ ನಮೂನೆಗಳನ್ನು ಪಡೆದುಕೊಂಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಗೆ ಖುದ್ದಾಗಿ ಅಥವಾ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ನಾಳೆಯೇ ಕೊನೆಯ ದಿನಾಂಕ ವಾಗಿದೆ. ಈ ನೇಮಕಾತಿ ಕುರಿತಾದ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು ಗಮನವಿಟ್ಟು ಓದಿರಿ.
Shortview of DHFWS Udupi Namma Clinic Junior Health Assistant Vacancy 2024
Organization Name – District Health and Family Welfare Society Udupi (DHFWS Udupi)
Post Name – Junior Health Assistant
Total Vacancy – 06
Application Process: Offline
Job Location – Udupi
ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/07/2024
- ಅರ್ಜಿ ಸಲ್ಲಿಸಲು ಕೊನೆಯ ದಿನ: ಆಗಸ್ಟ್ 3, 2024(ನಾಳೆ)
ಖಾಲಿ ಇರುವ ಹುದ್ದೆಗಳ ವಿವರ:
ಉಡುಪಿ ಜಿಲ್ಲೆಯ ಬೀಡನಗುದ್ದೆ, ನಿಟ್ಟೂರು, ಕಕ್ಕುಂಜೆ, ಖಾರ್ವಿಕೆರೆ, ಟಿ.ಟಿ ರೋಡ್, ಮರಿಣಾಪುರ ನಮ್ಮ ಕ್ಲಿನಿಕ್ ಗಳಲ್ಲಿ ಖಾಲಿ ಇರುವ ಒಟ್ಟು 6 ಕಿರಿಯ ಆರೋಗ್ಯ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.
ವಿದ್ಯಾರ್ಹತೆ:
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಅಥವಾ ಡಿಪ್ಲೋಮೋ ಪಾಸ್ ಮಾಡಿರಬೇಕು.
ಅಥವಾ
ಪಿಯುಸಿ ವಿಜ್ಞಾನ ವಿಭಾಗದಲ್ಲಿ ಪಾಸಾಗಿರಬೇಕು ಅಥವಾ ಅರೆಕಾಲಿಕ ವೈದ್ಯಕೀಯ ಮಂಡಳಿ ನಡೆಸುವ ಎರಡು ವರ್ಷಗಳ ಆರೋಗ್ಯ ನಿರೀಕ್ಷಕರ ಡಿಪ್ಲೋಮೋ ಹೊಂದಿರಬೇಕು.
ವಯೋಮಿತಿ:
ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಯಾವುದೇ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿಲ್ಲ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿದ್ಯಾರ್ಹತೆಗೆ ಅನುಗುಣವಾಗಿ 14,044 ರಿಂದ 15,397 ಮಾಸಿಕ ವೇತನ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ರೋಸ್ಟರ್ ಕಮ್ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Also Read: Chitradurga Anganwadi Recruitment 2024: ಚಿತ್ರದುರ್ಗ ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ನೇಮಕಾತಿ
How to Apply for Udupi Namma Clinic Junior Health Assistant Recruitment 2024
ಅರ್ಜಿ ಸಲ್ಲಿಕೆ ಪ್ರಕ್ರಿಯೆ: ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ:
ಜಿಲ್ಲಾ ಯೋಜನಾ ನಿರ್ವಹಣಾ ಘಟಕ
ಎನ್.ಹೆಚ್.ಎಂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ
ಉಡುಪಿ
ದೂರವಾಣಿ ಸಂಖ್ಯೆ- 0820-2985429ಕ್ಕೆ ಸಂಪರ್ಕಿಸಬಹುದು.
Important Direct Links:
Official Notification PDF | Download |
Official Website | udupi.nic.in |
More Updates | KarnatakaHelp.in |