ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA)ಯು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) 2025ರ ಡಿಸೆಂಬರ್ ಆವೃತ್ತಿಯ ರಾಷ್ಟ್ರೀಯ ಅರ್ಹತಾ ಪರೀಕ್ಷೆ ನೋಂದಣಿಗೆ ಅಧಿಸೂಚನೆ ಹೊರಡಿಸಿ, ಅರ್ಜಿ ಆಹ್ವಾನಿಸಿದೆ.
ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ ಹೊಂದಲು ಮತ್ತು ಪಿಎಚ್ಡಿ ಪ್ರವೇಶ ಪಡೆಯಲು ಅರ್ಹತೆಯನ್ನು ನಿರ್ಧರಿಸುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆಯಾಗಿದ್ದು, ಒಟ್ಟು 85 ವಿಷಯಗಳಿಗೆ ಪರೀಕ್ಷೆ ಇದೇ ಡಿಸೆಂಬರ್ನಲ್ಲಿ ನಡೆಯಲಿದೆ. ಸದರಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ನ.07ರವರೆಗೆ ಅವಕಾಶವಿದ್ದು, ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು NTA ಅಧಿಕೃತ ವೆಬ್ಸೈಟ್ https://ugcnet.nta.nic.in/ಗೆ ಭೇಟಿ ನೀಡಿ.
UGC-NET ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ – ಅಕ್ಟೋಬರ್ 07, 2025
ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ – ನವೆಂಬರ್ 07, 2025
ಪರೀಕ್ಷಾ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ನವೆಂಬರ್ 07, 2025
ಅರ್ಜಿಯನ್ನು ತಿದ್ದುಪಡಿ ಮಾಡಲು ಕೊನೆಯ ದಿನಾಂಕ – ನವೆಂಬರ್ 10 -12, 2025
ಪರೀಕ್ಷಾ ದಿನಾಂಕ – ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳು/ಸಂಸ್ಥೆಗಳಿಂದ (ಪರೀಕ್ಷೆ ಬರೆಯಲು ನಿರ್ಧರಿಸಿರುವ ವಿಷಯದಲ್ಲಿ) 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ಒಬಿಸಿ-ಎನ್ಸಿಎಲ್/ಎಸ್ಸಿ/ಎಸ್ಟಿ/ಪಿಡಬ್ಲ್ಯೂಡಿ/ತೃತೀಯ ಲಿಂಗ ಅಭ್ಯರ್ಥಿಗಳು (ಪರೀಕ್ಷೆ ಬರೆಯಲು ನಿರ್ಧರಿಸಿರುವ ವಿಷಯದಲ್ಲಿ) 50% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
01-12-2025 ರಂತೆ;
✓ ಜೆ.ಆರ್.ಎಫ್ ಪರೀಕ್ಷೆಗೆ; ಗರಿಷ್ಠ ವಯಸ್ಸಿನ ಮಿತಿ – 30 ವರ್ಷಗಳು.
• ಓಬಿಸಿ(ಎನ್.ಸಿ.ಎಲ್), ಪ.ಜಾತಿ, ಪ.ಪಂಗಡ, ಪಿ.ಡಬ್ಲ್ಯೂ.ಡಿ ಹಾಗೂ ತೃತೀಯ ಲಿಂಗ ಮತ್ತು ಮಹಿಳಾ ಅರ್ಜಿದಾರರಿಗೆ – 5 ವರ್ಷಗಳವರೆಗೆ ವಯೋಮಿತಿ ಸಡಿಲಿಕೆಯನ್ನು ಒದಗಿಸಲಾಗಿದೆ.
✓ ಪಿಎಚ್ಡಿ ಪ್ರವೇಶ ಹಾಗೂ ಸಹಾಯಕ ಪ್ರಾಧ್ಯಾಪಕರ ಅರ್ಹತೆ ಪರೀಕ್ಷೆಗೆ; ಯಾವುದೇ ಗರಿಷ್ಠ ವಯಸ್ಸಿನ ಮಿತಿ ನಿಗದಿಪಡಿಸಿರುವುದಿಲ್ಲ.
ಆಯ್ಕೆ ವಿಧಾನ:
ಕಂಪ್ಯೂಟರ್ ಆಧಾರಿತ ಪರೀಕ್ಷೆ
ದಾಖಲೆ ಪರಿಶೀಲನೆ
ಅರ್ಹತಾ ಪಟ್ಟಿ
ಪರೀಕ್ಷಾ ಶುಲ್ಕ:
ಸಾಮಾನ್ಯ/ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ – 1150ರೂ. ಸಾಮಾನ್ಯ-ಇಡಬ್ಲ್ಯೂಎಸ್/ಒಬಿಸಿ-ಎನ್ಸಿಎಲ್ ಅಭ್ಯರ್ಥಿಗಳಿಗೆ – 600ರೂ. ಪ.ಜಾತಿ, ಪ.ಪಂಗಡ, ಪಿ.ಡಬ್ಲ್ಯೂ.ಡಿ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ – 325ರೂ.
UGC-NET ಪರೀಕ್ಷಾ ದಿನಾಂಕ:
UGC NET ಡಿಸೆಂಬರ್-2025ರ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಗೆ ಮೊದಲನೇ ಹಂತದಲ್ಲಿ ನಡೆಸಲಾಗುವ ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ಡಿಸೆಂಬರ್ ಮಾಹೆಯಲ್ಲಿ ನಡೆಸಲು ನಿರ್ಧರಿಸಿದ್ದು, ಪರೀಕ್ಷಾ ದಿನಾಂಕ, ಸಮಯ ಹಾಗೂ ಪ್ರವೇಶ ಪತ್ರವನ್ನು ಮುಂದಿನ ದಿನಗಳಲ್ಲಿ ಬಿಡುಗಡೆ ಮಾಡಲಾಗುವುದು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಹೀಗೆ..;
• NTA ಅಧಿಕೃತ ವೆಬ್ಸೈಟ್ https://ugcnet.nta.nic.in/ ಗೆ ಭೇಟಿ ನೀಡಿ.
• ನಂತರ ಅಭ್ಯರ್ಥಿ ಚಟುವಟಿಕೆ ವಿಭಾಗದ ಕೆಳಗೆ ನೀಡಲಾಗಿರುವ – “UGC-NET DEC 2025 ಕ್ಕೆ ನೋಂದಣಿ” ಲಿಂಕ್ ಮೇಲೆ ಕ್ಲಿಕ್ ಮಾಡಿ.
• ಹೊಸ ಬಳಕೆದಾರರಾಗಿದ್ದಲ್ಲಿ ನೋಂದಾಯಿಸಿ ಅಥವಾ ಅಪ್ಲಿಕೇಶನ್ ಸಂಖ್ಯೆ, ಪಾಸ್ವರ್ಡ್ ಹಾಗೂ ಕ್ಯಾಪ್ಚ ನಮೂದಿಸಿ ಲಾಗಿನ್ ಆಗಿ.
Ugc Net December 2025 Application Form
• ಬಳಿಕ ಅರ್ಜಿ ನಮೂನೆಯಲ್ಲಿ ಕೇಳಲಾಗುವ ಎಲ್ಲಾ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಇತ್ತೀಚಿನ ಛಾಯಾಚಿತ್ರ ಮತ್ತು ಸಹಿ ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
• ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.