ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA), ಯುಜಿಸಿ NET 2024 ಪರೀಕ್ಷೆ ಕೇಂದ್ರಗಳ ನಗರ ತಿಳಿಸುವ ಸ್ಲಿಪ್ ಅನ್ನು ಬಿಡುಗಡೆ ಮಾಡಿದೆ. 21 ಆಗಸ್ಟ್ 2024 ರಿಂದ 04 ಸೆಪ್ಟೆಂಬರ್ 2024 ರವರೆಗೆ 83 ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ಈ ಸ್ಲಿಪ್ ಮೂಲಕ ಅಭ್ಯರ್ಥಿಗಳು ತಮ್ಮ ಪರೀಕ್ಷೆ ನಡೆಯುವ ನಗರವನ್ನು ತಿಳಿದುಕೊಳ್ಳಬಹುದು.
ಅಧಿಕೃತ ಪ್ರಕಟಣೆಯ ಪ್ರಕಾರ, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ತಮ್ಮ UGC – NET ಜೂನ್ 2024 ರ ಪರೀಕ್ಷಾ ಸಿಟಿ ಇಂಟಿಮೇಶನ್ ಸ್ಲಿಪ್ ಅನ್ನು ಡೌನ್‌ಲೋಡ್ ಮಾಡಲು ತಮ್ಮ ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.