UGC NET Exam Cancelled: ಪರೀಕ್ಷೆ ರದ್ದು; ಶೀಘ್ರದಲ್ಲೇ ಹೊಸ ದಿನಾಂಕ ಘೋಷಣೆ

Published on:

ಫಾಲೋ ಮಾಡಿ
UGC NET Exam 2024 Cancelled
UGC NET Exam 2024 Cancelled

ಭಾರತೀಯ ವಿಶ್ವವಿದ್ಯಾಲಯಗಳ ಅನುದಾನ ಆಯೋಗ (UGC) ನಡೆಸುತ್ತಿದ್ದ UGC NET 2024 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಿದೆ.ಜೂನ್‌ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲೂ (NET 2024) ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ನೆಟ್​ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಜೂನ್ 18ರಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ ಒಟ್ಟು 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ‌ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಿ ಪ್ರಕಟಣೆಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಶೀಘ್ರದಲ್ಲೇ ‌ತನಿಖಾ ನಡೆಸಲಾಗುತ್ತದೆ ಎಂದು NTA ತಿಳಸಿದೆ.

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

Leave a Comment