ಭಾರತೀಯ ವಿಶ್ವವಿದ್ಯಾಲಯಗಳ ಅನುದಾನ ಆಯೋಗ (UGC) ನಡೆಸುತ್ತಿದ್ದ UGC NET 2024 ಪರೀಕ್ಷೆಯನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರದ್ದುಗೊಳಿಸಿದೆ.ಜೂನ್ 18ರಂದು ನಡೆದ ರಾಷ್ಟ್ರೀಯ ಅರ್ಹತಾ ಪರೀಕ್ಷೆಯಲ್ಲೂ (NET 2024) ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವಾಲಯವು ನೆಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ.
ಜೂನ್ 18ರಂದು UGC-NET ಪರೀಕ್ಷೆಯನ್ನು ದೇಶದಾದ್ಯಂತ ಒಟ್ಟು 317 ನಗರಗಳಲ್ಲಿ 1205 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗಿತ್ತು. 11 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಪರೀಕ್ಷೆಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಪರೀಕ್ಷಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಪಾವಿತ್ರ್ಯತೆಯನ್ನು ಉಳಿಸಿಕೊಳ್ಳಲು ಶಿಕ್ಷಣ ಸಚಿವಾಲಯವು UGC-NET ಜೂನ್ 2024 ಪರೀಕ್ಷೆಯನ್ನು ರದ್ದುಗೊಳಿಸಿ ಪ್ರಕಟಣೆಯನ್ನು ಬಿಡುಗಡೆ ಮಾಡಲಾಗಿದೆ. ಈ ಕುರಿತು ಶೀಘ್ರದಲ್ಲೇ ತನಿಖಾ ನಡೆಸಲಾಗುತ್ತದೆ ಎಂದು NTA ತಿಳಸಿದೆ.
ಹೊಸ ಪರೀಕ್ಷೆಯ ದಿನಾಂಕಗಳು:
NTA ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸಲಿದೆ. ಅಧಿಕೃತ ಘೋಷಣೆಗಾಗಿ ಅಭ್ಯರ್ಥಿಗಳು NTA ವೆಬ್‌ಸೈಟ್ ಅನ್ನು ಭೇಟಿ ಮಾಡಬಹುದು.
ರದ್ದುಗೊಳಿಸುವಿಕೆಗೆ ಕಾರಣ:
NTA ಪ್ರಕಾರ, ನ್ಯಾಷನ್ ಸೈಬರ್ ಕ್ರೈಮ್ ಥ್ರೆಟ್ ಅನಾಲಿಟಿಕ್ಸ್ ಯುನಿಟ್ ಆಫ್ ಇಂಡಿಯನ್ ಸೈಬರ್ ಕ್ರೈಮ್ ಕೋ-ಆರ್ಡಿನೇಷನ್ ಸೆಂಟರ್‌ನಿಂದ ಯುಜಿಸಿಗೆ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಕುರಿತು ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
ಪ್ರಮುಖ ಅಂಶಗಳು:
- UGC NET 2024 ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ.
- ಹೊಸ ಪರೀಕ್ಷೆಯ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು.
- ಪರೀಕ್ಷೆಯ ಸಮಗ್ರತೆಯನ್ನು ದುರ್ಬಲಗೊಳಿಸಿದ ಆರೋಪಗಳಿಗೆ ಸಂಬಂಧಿಸಿ ತನಿಖೆ ನಡೆಯುತ್ತಿದೆ.
- ಅಭ್ಯರ್ಥಿಗಳು NTA ವೆಬ್‌ಸೈಟ್ ಮತ್ತು ಸಾಮಾಜಿಕ ಮಾಧ್ಯಮ ಖಾತೆಗಳ ಮೂಲಕ ನವೀಕರಣಗಳನ್ನು ಪರಿಶೀಲಿಸಬೇಕು.
Important Direct Links:
UGC NET June 2024 Exam Cancelled Notice PDF | Download |
UGC NET June 2024 Notification | Details |
Official Website | ugcnet.nta.nic.in |
More Updates | KarnatakaHelp.in |