ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) 2025 ರ (ವಿಶ್ವವಿದ್ಯಾಲಯ ಧನಸಹಾಯ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ- UGC NET June 2025) UGC – NET ಪರೀಕ್ಷೆಯನ್ನು ಜೂನ್ ನಲ್ಲಿ ನಡೆಸಲು ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಯುಜಿಸಿ-ನೆಟ್ ಭಾರತೀಯ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹಾಗೂ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಭಾರತೀಯ ಪ್ರಜೆಗಳ ಅರ್ಹತೆಯನ್ನು ನಿರ್ಧರಿಸುವ ಪರೀಕ್ಷೆಯಾಗಿದ್ದು, ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್ ugcnet.nta.ac.in ಗೆ ಭೇಟಿ ನೀಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡಲಾಗಿದೆ. ತಪ್ಪದೆ ಕೊನೆವರೆಗೂ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಕೆಯ ಪ್ರಾರಂಭದ ದಿನಾಂಕ – 16-04-2025
- ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ – 08-05-2025
- ಅರ್ಜಿಯನ್ನು ತಿದ್ದುಪಡಿ ಮಾಡಲು ಕೊನೆಯ ದಿನಾಂಕ – 10-05-2025
ಶೈಕ್ಷಣಿಕ ಅರ್ಹತೆ:
- 55% ಅಂಕಗಳೊಂದಿಗೆ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು.
- ಒಬಿಸಿ-ಎನ್‌ಸಿಎಲ್/ಎಸ್‌ಸಿ/ಎಸ್‌ಟಿ/ಪಿಡಬ್ಲ್ಯೂಡಿ/ತೃತೀಯ ಲಿಂಗ ಅಭ್ಯರ್ಥಿಗಳಿಗೆ 50% ಅಥವಾ 75% ಅಂಕಗಳೊಂದಿಗೆ 4 ವರ್ಷಗಳ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
- ದಿನಾಂಕ 01-07-2025 ರಂತೆ – ಗರಿಷ್ಠ30 ವರ್ಷಗಳು.
ಸರ್ಕಾರಿ ನಿಯಮಗಳ ಅನುಸಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
ಪರೀಕ್ಷಾ ಶುಲ್ಕ:
- ಸಾಮಾನ್ಯ/ಮೀಸಲಾತಿ ಇಲ್ಲದ ಅಭ್ಯರ್ಥಿಗಳಿಗೆ – 1150 ರೂ.
- ಜನರಲ್-ಇಡಬ್ಲ್ಯೂಎಸ್/ಒಬಿಸಿ-ಎನ್‌ಸಿಎಲ್ ಅಭ್ಯರ್ಥಿಗಳಿಗೆ – 600 ರೂ.
- ಎಸ್.ಸಿ /ಎಸ್.ಟಿ / ಪಿ.ಡಬ್ಲ್ಯೂ.ಡಿ ಹಾಗೂ ತೃತೀಯ ಲಿಂಗಿ ಅಭ್ಯರ್ಥಿಗಳಿಗೆ – 325 ರೂ.
How to Apply for UGC NET June 2025
- NTA ಅಧಿಕೃತ ವೆಬ್ ಸೈಟ್
https://ugcnet.nta.ac.in/ ಗೆ ಭೇಟಿ ನೀಡಿ. - ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಬಳಸಿಕೊಂಡು ನೋಂದಾಯಿಸಿ.
- ಕೇಳಲಾಗುವ ಎಲ್ಲಾ ಸ್ವ ವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
- ಇತ್ತೀಚಿನ ಛಾಯಾಚಿತ್ರ (10-200 KB) ಮತ್ತು ಸಹಿ (4-30 KB) ಅಪ್‌ಲೋಡ್ ಮಾಡಿ.
- SBI/CANARA/ICICI/HDFC ಬ್ಯಾಂಕ್, ಡೆಬಿಟ್/ಕ್ರೆಡಿಟ್ ಕಾರ್ಡ್ ಅಥವಾ UPI ಮೂಲಕ ಶುಲ್ಕವನ್ನು ಪಾವತಿಸಿ.
- ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ನಂತರ ಸಲ್ಲಿಸಿ.
- ಭವಿಷ್ಯದ ಉಲ್ಲೇಖಕ್ಕಾಗಿ ದೃಢೀಕರಣ ಪುಟವನ್ನು ಡೌನ್‌ಲೋಡ್ ಮಾಡಿಕೊಳ್ಳಿ.
Important Direct Links:
Official Notification PDF | Download |
UGC NET June 2025 Information Bulletin PDF | Download |
Online Application Form Link | Apply Now |
Official Website | |
More Updates | Karnataka Help.in |