UGCET 2024 Admit Card:ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಪದವಿಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (KCET 2024) ಪರೀಕ್ಷೆಗೆ ಸಂಬಂಧಿಸಿದ ಪ್ರವೇಶಾತಿ ಕಾರ್ಡ್(Admit Card) ಅನ್ನು ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಪರೀಕ್ಷೆಗೆ ಅರ್ಜಿ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳು ಕೂಡಲೇ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ. ಹಾಗಾದರೆ ಪ್ರವೇಶಾತಿ ಕಾರ್ಡನ್ನು ಹೇಗೆ ಡೌನ್ಲೋಡ್ ಮಾಡಿಕೊಳ್ಳ ಬಹುದು ಎಂಬುವುದರ ಕುರಿತು ಸಂಪೂರ್ಣ ಮಾಹಿತಿಯನ್ನು ಈ ಕೆಳಗೆ ನೀಡಲಾಗಿದೆ.
ಕರ್ನಾಟಕ ಸಿಇಟಿ ಪರೀಕ್ಷೆಯು ಎಂಜಿನಿಯರಿಂಗ್, ಫಾರ್ಮಸಿ, ಫಾರ್ಮಾ ಡಿ, ಮತ್ತು ರಾಜ್ಯದಲ್ಲಿ ನೆಲೆಗೊಂಡಿರುವ ಕಾಲೇಜುಗಳು ಮತ್ತು ಸಂಸ್ಥೆಗಳು ನೀಡುವ ಇತರ ವೃತ್ತಿಪರ ಕೋರ್ಸ್‌ಗಳಲ್ಲಿ ಪ್ರವೇಶವನ್ನು ಒದಗಿಸಲು ಆಯೋಜಿಸಲಾದ ರಾಜ್ಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ.ಕರ್ನಾಟಕ ಪರೀಕ್ಷಾ ಪ್ರಾಧಿಕಾರವು UGCET ಸಂಬಂಧಿಸಿದ ಪರೀಕ್ಷೆಗಳನ್ನು ಏಪ್ರಿಲ್ 18 ಮತ್ತು 19, 2024 ರಂದು ನಡೆಸಲಾಗುವುದು. ಕನ್ನಡ ಭಾಷಾ ಪರೀಕ್ಷೆಯನ್ನು ಏಪ್ರಿಲ್ 20, 2024 ರಂದು ನಡೆಸಲಾಗುತ್ತದೆ.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಈ ಹಂತಗಳನ್ನು ಅನುಸರಿಸುವ ಮೂಲಕ ತಮ್ಮ ಪ್ರವೇಶ ಕಾರ್ಡ್‌ಗಳನ್ನು ಡೌನ್‌ಲೋಡ್ ಮಾಡಬಹುದು:
ಮೊದಲಿಗೆ https://cetonline.karnataka.gov.in/kea/ugcet 2024 ಗೆ ಭೇಟಿ ನೀಡಿ
UGCET 2024 ಪ್ರವೇಶ ಕಾರ್ಡ್ ಲಿಂಕ್ ತೆರೆಯಿರಿ ಅಥವಾ ಪ್ರವೇಶ>UGCET 2024> ಗೆ ಹೋಗಿ ಮತ್ತು ಪ್ರವೇಶಾತಿ ಕಾರ್ಡುಗಳು ಲಿಂಕ್ ತೆರೆಯಿರಿ.
ನಿಮ್ಮ ಲಾಗಿನ್ ವಿವರಗಳನ್ನು ನಮೂದಿಸಿ.
ಅದನ್ನು ಸಲ್ಲಿಸಿ ಮತ್ತು ಕೆಸಿಇಟಿ ಪ್ರವೇಶ ಪತ್ರವನ್ನು ಪಡೆದುಕೊಳ್ಳಿ
ಪ್ರವೇಶ ಪತ್ರದಲ್ಲಿ ನೀಡಿರುವ ಎಲ್ಲ ಸೂಚನೆ ಮತ್ತು ಸಲಹೆಗಳನ್ನು ಅಭ್ಯರ್ಥಿಗಳು ಪಾಲಿಸಬೇಕು, ಮತ್ತು ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ ಕನ್ನಡ ಪರೀಕ್ಷೆಯನ್ನು ಬೆಂಗಳೂರು ಮತ್ತು ಮಂಗಳೂರು, ಬೆಳಗಾವಿ ಈ ಮೂರು ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುತ್ತದೆ.