ಕರ್ನಾಟಕ ಪರೀಕ್ಷಾ ಪ್ರಾಧಿಕರಣ (KEA) UGCET 2024 ಅಂತಿಮ ಸೀಟು ಮ್ಯಾಟ್ರಿಕ್ಸ್ ಅನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಿದೆ. ಈ ಮ್ಯಾಟ್ರಿಕ್ಸ್ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಲಭ್ಯವಿರುವ ಎಂಜಿನಿಯರಿಂಗ್ / ಆರ್ಕಿಟೆಕ್ಚರ್ ಕೋಟುಗಳ ಸೀಟುಗಳ ಸಂಖ್ಯೆಯನ್ನು ಒಳಗೊಂಡಿದೆ.
ಬಿಡುಗಡೆ ಮಾಡಿರುವ ಸೀಟು ಮ್ಯಾಟ್ರಿಕ್ಸ್ ನಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಅಥವಾ ಶಿಕ್ಷಣ ಸಂಸ್ಥೆಗಳು ತಮ್ಮ ಆಕ್ಷೇಪಣೆಗಳನ್ನು ಮತ್ತು ಸಲಹೆಗಳನ್ನು ಏಳು ದಿನಗಳ ಒಳಗಾಗಿ ನೇರವಾಗಿ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಲಿಖಿತವಾಗಿ ಅಥವಾ ಇ-ಮೇಲ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಸೀಟು ಮ್ಯಾಟ್ರಿಕ್ಸ್ ನ ಮೂಲಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಕಾಲೇಜುಗಳಲ್ಲಿ ಒಟ್ಟು ಸೀಟು ಗಳ ಲಭ್ಯತೆಯನ್ನು ತಿಳಿದುಕೊಳ್ಳಬಹುದು ಇದು ಕೌನ್ಸಲಿಂಗ್ ಸಮಯದಲ್ಲಿ ಉಪಯುಕ್ತವಾಗುತ್ತದೆ. ಅಂತಿಮ ಸೀಟ್ ಮ್ಯಾಟ್ರಿಕ್ಸ್ ಡೌನ್ಲೋಡ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟಿಗೆ www.kea.kar.nic.in ಭೇಟಿ ನೀಡಬೇಕು. ಈ ಲೇಖನದಲ್ಲಿ ಅಂತಿಮ ಸೀಟ್ ಮೆಟ್ರಿಕ್ಸ್ ಅನ್ನು ಆನ್ ಲೈನ್ ಮೂಲಕ ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಎಂಬುದರ ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.