ಪ್ರಸಕ್ತ ಸಾಲಿನ ಯುಜಿಸಿಇಟಿ ಹಾಗೂ ಯುಜಿನೀಟ್ ಪ್ರವೇಶಕ್ಕೆ ಸಂಬಂಧಿಸಿದ ಮೊದಲ ಸುತ್ತಿನ ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ, ಕಟ್-ಆಫ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆ.1ರಂದು ಬಿಡುಗಡೆ ಮಾಡಿದೆ.
ವೈದ್ಯಕೀಯ, ದಂತವೈದ್ಯಕೀಯ, ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿಎಸ್‌ಸಿ (ನರ್ಸಿಂಗ್), ಬಿ-ಫಾರ್ಮ, ಫಾರ್ಮ್-ಡಿ, ಬಿಪಿಟಿ, ಬಿಪಿಒ, ಅಲೈಡ್‌ಹೆಲ್ತ್ ಸೈನ್ಸ್ ಕೋರ್ಸುಗಳ ಪ್ರವೇಶಕ್ಕೆ ಸಂಬಂಧಿಸಿದಂತೆ 1ನೇ ಸುತ್ತಿನ ಅಣುಕು ಸೀಟು ಹಂಚಿಕೆಯ ಫಲಿತಾಂಶವನ್ನು ಜು.25 ರಂದು ಬಿಡುಗಡೆ ಮಾಡಿತ್ತು. ಇದಕ್ಕೆ ಇಚ್ಚೆ-ಅಯ್ಕೆಗಳನ್ನು, ಹೊಸದಾಗಿ ಸೇರಿಸಲು/ಬೇಡದಿದ್ದಲ್ಲಿ ಅಳಿಸಲು/ಕ್ರಮಾಂಕ ಬದಲಾಯಿಸಲು-ಮಾರ್ಪಡಿಸಲು ಜು.26 ರಿಂದ 29ವರೆಗೆ ಕಾಲಾವಕಾಶ ನೀಡಲಾಗಿತ್ತು.
ಸದರಿ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು ಅಭ್ಯರ್ಥಿಗಳು ಪ್ರಾಧಿಕಾರದ ಜಾಲತಾಣ https://cetonline.karnataka.gov.in/kea/ಗೆ ಭೇಟಿ ನೀಡುವ ಮೂಲಕ ಪರಿಶೀಲನೆ ಮಾಡಬಹುದಾಗಿದೆ.
Nerseing /B Pharm