KCET/NEET: ಯುಜಿಸಿಇಟಿ,ಯುಜಿನೀಟ್​ – 1ನೇ ಸುತ್ತಿನ ಸೀಟು ಹಂಚಿಕೆ ನಂತರದ ಪ್ರಕ್ರಿಯೆಯ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ

Published on:

ಫಾಲೋ ಮಾಡಿ
UGCET/UGNEET 2025 1st Round Seat Allotment Revised Schedule
UGCET/UGNEET 2025 1st Round Seat Allotment Revised Schedule

ಯುಜಿಸಿಇಟಿ/ಯುಜಿನೀಟ್ ಕೋರ್ಸುಗಳಿಗೆ ಮೊದಲನೇ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಇಚ್ಛೆ/ಆಯ್ಕೆಗಳನ್ನು ಆಯ್ಕೆ ಮಾಡಿಕೊಂಡು, ನಿಗದಿತ ಶುಲ್ಕ ಪಾವತಿ ಮಾಡಲು ಹಾಗು ಆಯಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಆ.13ರಂದು ಬಿಡುಗಡೆ ಮಾಡಲಾಗಿದೆ ಎಂದು ಕೆಇಎ ಕಾರ್ಯನಿರ್ವಾಹಕ ಎಚ್​.ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನವದೆಹಲಿಯ ವೈದ್ಯಕೀಯ ಸಲಹಾ ಸಮಿತಿ (MCC) ಆ.12ರಂದು ಅಖಿಲ ಭಾರತ ವೈದ್ಯಕೀಯ ಸೀಟುಗಳ ಹಂಚಿಕೆಯ ಮೊದಲನೇ ಸುತ್ತಿನ ತಾತ್ಕಾಲಿಕ ಫಲಿತಾಂಶವನ್ನು ಘೋಷಿಸಿತ್ತು. ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಫಾರ್ಮ-ಡಿ ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಆಲೈಡ್ ಹೆಲ್ತ್ ಸೈನ್ಸ್, ಆರ್ಕಿಟೆಕ್ಚರ್, ಬಿ.ಎಸ್.ಸಿ (ನರ್ಸಿಂಗ್), ಹೋಮಿಯೋಪತಿ, ವೈದ್ಯಕೀಯ ಹಾಗೂ ದಂತವೈದ್ಯಕೀಯ ಕೋರ್ಸುಗಳ ಮೊದಲನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶದ ನಂತರ ಅಭ್ಯರ್ಥಿಗಳಿಗೆ ಮುಂದಿನ ವಿಧಾನದ ( Choice ಗಳನ್ನು ಆಯ್ಕೆ ಮಾಡಿಕೊಳ್ಳಲು, ಶುಲ್ಕ ಪಾವತಿ ಮಾಡಲು ಹಾಗೂ ಆಯಾ ಕಾಲೇಜುಗಳಲ್ಲಿ ಪ್ರವೇಶ ಪಡೆಯಲು) ಪರಿಷ್ಕೃತ ವೇಳಾಪಟ್ಟಿಯನ್ನು KEA ಅಧಿಕೃತ ವೆಬ್ಸೈಟ್ https://cetonline.karnataka.gov.in/kea/ನಲ್ಲಿ ಬಿಡುಗಡೆ ಮಾಡಲಾಗಿದೆ.

ಇಂಜಿನಿಯರಿಂಗ್ ಸೇರಿ ವಿವಿಧ ಕೋರ್ಸ್​ಗಳ ಛಾಯ್ಸ್​ ಆಯ್ಕೆಗೆ 14ನೇ ತಾರೀಖು ಕೊನೆ ದಿನ

ಇಂಜಿನಿಯರಿಂಗ್, ಕೃಷಿ ವಿಜ್ಞಾನ, ವೆಟರಿನರಿ, ಬಿ-ಫಾರ್ಮ್, ಫಾರ್ಮ-ಡಿ ಯೋಗ ಮತ್ತು ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಆಲೈಡ್ ಹೆಲ್ತ್ ಸೈನ್ಸ್, ಆರ್ಕಿಟೆಕ್ಚರ್, ಬಿ.ಎಸ್.ಸಿ (ನರ್ಸಿಂಗ್), ಹೋಮಿಯೋಪತಿ ಕೋರ್ಸುಗಳ ಅಭ್ಯರ್ಥಿಗಳು ಆ.14ರೊಳಗೆ ಛಾಯ್ಸ್​ಗಳನ್ನು ಆಯ್ಕೆ ಮಾಡಿ, ಶುಲ್ಕ ಪಾವತಿಸಿ ನಂತರ Confirmation Slip Download ಮಾಡಿಕೊಂಡು. ಬಳಿಕ ಆ.15 ರೊಳಗೆ ಆಯಾ ಕಾಲೇಜಿನಲ್ಲಿ ವರದಿ ಮಾಡಿಕೊಳ್ಳಬೇಕು.

About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment