UGNEET 2025 Kannada Exam: ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ

By Shwetha Chidambar

Published On:

IST

ಫಾಲೋ ಮಾಡಿ

UGNEET Kannada Exam Hall Ticket 2025
UGNEET Kannada Exam Hall Ticket 2025

ಯುಜಿನೀಟ್-2025ರ ಪ್ರವೇಶಾತಿ ಸಂಬಂಧ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳಿಗೆ ನಡೆಸಲಾಗುವ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಜು.15ರಂದು ಬಿಡುಗಡೆ ಮಾಡಿದೆ.

ಯುಜಿನೀಟ್-2025ಕ್ಕೆ ಜು.7ರಿಂದ ಅರ್ಜಿ ಸಲ್ಲಿಸಿರುವ ಹೊರನಾಡು ಮತ್ತು ಗಡಿನಾಡು ಕನ್ನಡಿಗ ಅಭ್ಯರ್ಥಿಗಳು ಹಾಗೂ ದಿನಾಂಕ ಏ.15 ರಂದು ನಡೆದ ಯುಜಿಸಿಇಟಿ ಕನ್ನಡ ಭಾಷೆ ಪರೀಕ್ಷೆಗೆ ಗೈರಾದ ಅಭ್ಯರ್ಥಿಗಳು ಸಹ ಪರೀಕ್ಷೆಗೆ ಹಾಜರಾಗಬಹುದು. ಅರ್ಹ ಅಭ್ಯರ್ಥಿಗಳು ಸದರಿ ಪರೀಕ್ಷೆಯ ಪ್ರವೇಶ ಪತ್ರವನ್ನುಪ್ರಾಧಿಕಾರದ ಜಾಲತಾಣ https://cetonline.karnataka.gov.in/kea/ದ ಮೂಲಕ ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯುಜಿನೀಟ್-2025 ಕನ್ನಡ ಭಾಷಾ ಪರೀಕ್ಷೆ ದಿನಾಂಕ ನಿಗದಿ

ಯುಜಿಸಿಇಟಿ-2025 ಕನ್ನಡ ಭಾಷೆ ಪರೀಕ್ಷೆ ಜು.17ರಂದು ಮಧ್ಯಾಹ್ನ 3.30 ರಿಂದ 4.30 ಗಂಟೆಯವರೆಗೆ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ವಿಶೇಷ ಸೂಚನೆ:

ಏ.15ರಂದು ನಡೆದ ಕನ್ನಡ ಭಾಷಾ ಪರೀಕ್ಷೆಗೆ ಹಾಜರಾಗಿರುವವರು ಮತ್ತೊಮ್ಮೆ ಕನ್ನಡ ಭಾಷಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಅರ್ಹರಿರುವುದಿಲ್ಲ.

How to Download UGNEET Kannada Exam Hall Ticket 2025

ಯುಜಿನೀಟ್-2025ರ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರ ಡೌನ್ಲೋಡ್ ಮಾಡುವ ವಿಧಾನ

  • ಕೆಇಎ ಅಧಿಕೃತ ವೆಬ್ ಸೈಟ್ https://cetonline.karnataka.gov.in/kea/ಗೆ ಭೇಟಿ ನೀಡಿ.
  • ಇತ್ತೀಚಿನ ಪ್ರಕಟಣೆಗಳು ವಿಭಾಗದಲ್ಲಿ 15-07 UGNEET-2025 ಕ್ಲಾಸ್ ‘C’ ‘D’ ಅಭ್ಯರ್ಥಿಗಳಿಗೆ ಕಡ್ಡಾಯ ಕನ್ನಡ ಹಾಲ್ ಟಿಕೆಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ.
  • ಲಾಗಿನ್ ಐಡಿ/ನೋಂದಣಿ ಸಂಖ್ಯೆ ಹಾಗೂ ಪಾಸ್ವರ್ಡ್ ನಮೂದಿಸಿ ಲಾಗಿನ್ ಆಗಿ.
  • ಬಳಿಕ ಯುಜಿನೀಟ್-2025ರ ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಪ್ರವೇಶ ಪತ್ರದ ಪ್ರಿಂಟ್ ತೆಗೆದುಕೊಳ್ಳಿ.

Important Direct Links:

UGNEET Kannada Exam Hall Ticket 2025 LinkDownload
Official WebsiteKea.Kar.Nic.in
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

2 thoughts on “UGNEET 2025 Kannada Exam: ಕನ್ನಡ ಭಾಷಾ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ”

Leave a Comment