ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ವತಿಯಿಂದ ಭಾರತೀಯ ಸೇನೆ / ಭದ್ರತಾ ಪಡೆ / ಪೊಲೀಸ್ ಸೇವೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭ್ಯರ್ಥಿಗಳಿಗೆ ತರಬೇತಿ ನೀಡುವ ಸಂಬಂಧ ಅರ್ಹ ಅಭ್ಯರ್ಥಿಗಳಿಂದ(Uniformed Services Training 2024) ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪೂರ್ವ ಸಿದ್ಧತೆ ಬಗ್ಗೆ ಉಚಿತವಾಗಿ 2 ತಿಂಗಳು ವಸತಿಯುತ ದೈಹಿಕ ಸಾಮರ್ಥ್ಯ ತರಬೇತಿ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ನೀಡಲಾಗುತ್ತದೆ. ಈ ಪ್ರಕಟಣೆ ಕುರಿತು ಸಂಪೂರ್ಣ ಮಾಹಿತಿಗಾಗಿ ಈ ಲೇಖನ ಓದಿರಿ.