ಇಂಡಿಯಾ ಹಾಗೂ ವಿದೇಶಗಳಲ್ಲಿ ಕಾರ್ಯನಿರ್ವಹಿಸುವ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವೆಲ್ತ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಮುಂಬೈ ಕಚೇರಿಯ ಮಾನವಶಕ್ತಿ ಯೋಜನೆ ಮತ್ತು ನೇಮಕಾತಿ ವಿಭಾಗ ಅಧಿಸೂಚನೆಯನ್ನು ಹೊರಡಿಸಿದೆ.
ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ವೆಲ್ತ್ ಮ್ಯಾನೇಜರ್ (ವಿಶೇಷ ಅಧಿಕಾರಿಗಳ) ಒಟ್ಟು 250 ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇಮಕಾತಿ ನಡೆಯಲಿದೆ. ಬ್ಯಾಂಕಿಂಗ್ ವಲಯದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣವಕಾಶವಾಗಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಅಧಿಕೃತ ವೆಬ್ಸೈಟ್ www.unionbankofindia.co.inಗೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು, ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇತರೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಆಗಸ್ಟ್ 5, 2025
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಆಗಸ್ಟ್ 25, 2025
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ MBA/MMS/PGDBA/PGDBM/PGPM/PGDMನಲ್ಲಿ ಪೂರ್ಣಾವಧಿಯ 2 ವರ್ಷಗಳ ಪದವಿ ಅಥವಾ ಕೋರ್ಸ್ ಪೂರ್ಣಗೊಳಿಸಿರಬೇಕು.
ವೃತ್ತಿ ಅನುಭವ:
ಅಭ್ಯರ್ಥಿಯು ಸಾರ್ವಜನಿಕ ಬ್ಯಾಂಕುಗಳು/ಖಾಸಗಿ ಬ್ಯಾಂಕುಗಳು/ವಿದೇಶಿ ಬ್ಯಾಂಕುಗಳು/ಬ್ರೋಕಿಂಗ್ ಸಂಸ್ಥೆಗಳು/ಸೆಕ್ಯುರಿಟೀಸ್ ಸಂಸ್ಥೆಗಳು/ಆಸ್ತಿ ನಿರ್ವಹಣಾ ಕಂಪನಿಗಳಲ್ಲಿ-ಸಂಪತ್ತು ನಿರ್ವಹಣೆಯಲ್ಲಿ ಅಧಿಕಾರಿ ಅಥವಾ ವ್ಯವಸ್ಥಾಪಕ ಪಾತ್ರದಲ್ಲಿ ಕನಿಷ್ಠ 3 ವರ್ಷಗಳ ಅರ್ಹತಾ ನಂತರದ ಅನುಭವ ಹೊಂದಿರಬೇಕು.
ವಯೋಮಿತಿ:
ಕನಿಷ್ಠ ವಯಸ್ಸಿನ ಮಿತಿ – 25 ವರ್ಷಗಳು.
ಗರಿಷ್ಠ ವಯಸ್ಸಿನ ಮಿತಿ – 35 ವರ್ಷಗಳು.
ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.
My.garute10th.cimplnt.myjobopjutene.myvarpeine
Laxman Hanamant Soraganvi
S,S,L,C, Completing,II,PuC, Completing,ms, kollesha