WhatsApp Channel Join Now
Telegram Group Join Now

Union Budget 2024: ಹೊಸದಾಗಿ‌ ಕೆಲಸಕ್ಕೆ ಸೇರುವವರಿಗೆ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಸರ್ಕಾರದಿಂದಲೇ ಒಂದು ತಿಂಗಳ ಸಂಬಳ

Union Budget 2024: ಪ್ರಧಾನಿ ನರೇಂದ್ರ ಮೋದಿ(Modi 3.0 Budget 2024) ಅವರ ಸರ್ಕಾರದ ಮೊಟ್ಟ ಮೊದಲ ಬಜೆಟ್ ಇಂದು ಮಂಡನೆಯಾಗಿದ್ದು, ಇದರಲ್ಲಿ ನಿರುದ್ಯೋಗಿ ಯುವಕ ಯುವತಿಯರಿಗೆ ಅನೇಕ ಯೋಜನೆಯನ್ನು ಘೋಷಿಸಲಾಗಿದೆ. ಇದರ ಜೊತೆಗೆ ಹೊಸದಾಗಿ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಹೊಸದಾಗಿ ಉದ್ಯೋಗಕ್ಕೆ ಸೇರುವ ಎಲ್ಲಾ ಉದ್ಯೋಗಿಗಳಿಗೆ ಸರ್ಕಾರದಿಂದಲೇ ಒಂದು ತಿಂಗಳಿನ ವೇತನವನ್ನು ನೀಡಲು ಯೋಜನೆಯ ರೂಪಿಸಿದೆ. ಈ ಹಣವನ್ನು ಉದ್ಯೋಗಿಗಳ ಭವಿಷ್ಯ ನಿಧಿ (EPFO) ಗೆ ಕೊಡುಗೆಯಾಗಿ ನೀಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್ ಭಾಷಣದಲ್ಲಿ ಘೋಷಿಸಿದರು.

Union Budget 2024
Union Budget 2024

ಈ ಯೋಜನೆಯನ್ನು ಎಲ್ಲಾ ಕ್ಷೇತ್ರದ ಉದ್ಯೋಗಗಳಿಗೆ ಮತ್ತು ಹೊಸದಾಗಿ ಸೇರುವ ಎಲ್ಲಾ ಉದ್ಯೋಗಿಗಳಿಗೆ ಜಾರಿಗೊಳಿಸಲು ಉದ್ದೇಶಿಸಲಾಗಿದೆ. ಇದರಿಂದ 2.1 ಲಕ್ಷ ಯುವಕರಿಗೆ ಪ್ರಯೋಜನ ಆಗುತ್ತದೆ ಹಾಗೂ ಕೆಲಸಕ್ಕೆ ಸೇರ ಬಯಸುವವರ ಸಂಖ್ಯೆ ಹೆಚ್ಚಾಗುತ್ತದೆ ಇದರಿಂದ ನಿರುದ್ಯೋಗ ಸಮಸ್ಯೆ ಸ್ವಲ್ಪಮಟ್ಟಿಗೆ ಬಗೆಹರುತ್ತದೆ ಎಂದು ತಿಳಿಸಿದರು.

EPFOಗೆ ನೋಂದಣಿ ಮಾಡಿಕೊಳ್ಳುತ್ತಲೇ ಒಂದು ತಿಂಗಳ ಸಂಬಳವನ್ನು ಮೂರು ಕಂತುಗಳಲ್ಲಿ ನೀಡಲಾಗುತ್ತದೆ. ಉದ್ಯೋಗಿಗಳಿಗೆ ಅನುಕೂಲವಾಗಲಿ ಎಂದು ಮೊದಲ ಬಾರಿ ಕೆಲಸಕ್ಕೆ ಸೇರಿದವರಿಗೆ ಪ್ರೋತ್ಸಾಹಧನ ನೀಡಲಾಗುತ್ತದೆ ಎಂದು ಹೇಳಿದರು. ಮಹಿಳೆಯರು ಕೂಡ ಉದ್ಯೋಗ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಇದಕ್ಕಾಗಿ, ಯುವತಿಯರಿಗೆ ಕೌಶಲ ಅಭಿವೃದ್ಧಿಗೊಳಿಸಲು ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಪ್ರಾಯೋಜಿತ ಯೋಜನೆ ಘೋಷಣೆ ಮಾಡುತ್ತಿದ್ದೇವೆ. 5 ವರ್ಷದಲ್ಲಿ ಈ ಯೋಜನೆ ಅಡಿಯಲ್ಲಿ 20 ಲಕ್ಷ ಯುವತಿಯರಿಗೆ ತರಬೇತಿ ನೀಡುವುದಾಗಿ ಘೋಷಣೆ ಮಾಡಿದರು.

Important Direct Links:

More UpdatesKarnatakaHelp.in

Leave a Comment