UPSC 462 Vacancy 2025: ಸಹಾಯಕ ನಿರ್ದೇಶಕ, ಸಹಾಯಕ ಸಂಪಾದಕ ಸೇರಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ. ಅರ್ಜಿ ಸಲ್ಲಿಕೆಗೆ ಬೇಕಾದ ಅರ್ಹತೆ ಹಾಗೂ ಇತರೆ ಸಂಪೂರ್ಣ ಮಾಹಿತಿ ಇಲ್ಲಿದೆ.

By ಕರ್ನಾಟಕ ಹೆಲ್ಪ್ ಡೆಸ್ಕ್

Published On:

IST

ಫಾಲೋ ಮಾಡಿ

UPSC 462 Vacancy 2025 Notification
UPSC 462 Vacancy 2025

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಖಾಲಿ ಇರುವ ಒಟ್ಟು 462 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಕೇಂದ್ರ ಲೋಕಸೇವಾ ಆಯೋಗವು ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕ, ಸಹಾಯಕ ಸಂಪಾದಕ, ಸಹಾಯಕ ರಸಾಯನಶಾಸ್ತ್ರಜ್ಞ ಮತ್ತು ಇತರೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಅರ್ಜಿ ಸಲ್ಲಿಸ ಬಯಸುವ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ upsconline.nic.inಗೆ ಭೇಟಿ ನೀಡಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಈ ಲೇಖನದಲ್ಲಿ ಸದರಿ ನೇಮಕಾತಿಗೆ ಬೇಕಾದ ವಿದ್ಯಾರ್ಹತೆ, ವಯಸ್ಸಿನ ಮಿತಿ, ಪ್ರಮುಖ ದಿನಾಂಕಗಳು ಹಾಗೂ ಇತರೆ ಮಾಹಿತಿಯನ್ನು ನೀಡಿದ್ದೇವೆ. ತಪ್ಪದೇ ಕೊನೆವರೆಗೂ ಓದಿ, ನಿಮ್ಮ ಸ್ನೇಹಿತರಿಗೂ ಶೇರ್ ಮಾಡಲು ಮರೆಯದಿರಿ.

ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:

  • ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – 14-06-2025
  • ಅರ್ಜಿ ಸಲ್ಲಿಸಲು‌ ಕೊನೆಯ ದಿನಾಂಕ -03-07-2025

ಶೈಕ್ಷಣಿಕ ಅರ್ಹತೆ:

ನೇಮಕಾತಿಯ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿತ ವಿದ್ಯಾರ್ಹತೆ ಹೊಂದಿರಬೇಕು. ಹುದ್ದೆಗಳಿಗೆ ಆಧಾರಿತವಾಗಿ ವಿದ್ಯಾರ್ಹತೆ ನಿಗದಿ ಪಡಿಸಲಾಗಿದೆ. ತಪ್ಪದೇ ಅಧಿಕೃತ ಅಧಿಸೂಚನೆಯನ್ನು ಓದಿ.

ಅಭ್ಯರ್ಥಿಗಳು ಯಾವುದೇ ಪದವಿ, ಬಿಎ(BA), ಬಿ.ಆರ್ಕ್(B.Arch), ಬಿ.ಎಸ್ಸಿ(B.Sc), ಬಿ.ಟೆಕ್(B.Tech)/ಬಿಇ(BE,), ಎಲ್‌ಎಲ್‌ಬಿ(LLB), ಎಂಬಿಬಿಎಸ್(MBBS), ಡಿಎನ್‌ಬಿ, ಸಿಎ(CA), ಎಂ.ಎಸ್ಸಿ(M.Sc), ಪಿಜಿ ಡಿಪ್ಲೊಮಾ(PG Diploma), ಎಂವಿಎಸ್‌ಸಿ, ಎಂ.ಫಿಲ್/ಪಿಎಚ್‌ಡಿ(PhD), ಎಂಎಸ್(MS)/ಎಂಡಿ(MD), ಎಂ.ಸಿ.ಎಚ್೯(M.Ch), ಡಿಎಂ ಪದವಿ ಪಡೆದಿರಬೇಕು.

ವಯೋಮಿತಿ:

  • ಕನಿಷ್ಠ ವಯಸ್ಸಿನ ಮಿತಿ – 30 ವರ್ಷಗಳು
  • ಗರಿಷ್ಠ ವಯಸ್ಸಿನ ಮಿತಿ – 45 ವರ್ಷಗಳು

ಸರ್ಕಾರಿ ನಿಯಮಗಳ ಪ್ರಕಾರ ಮೀಸಲಾತಿ ವರ್ಗಗಳಿಗೆ ವಯಸ್ಸಿನ ಸಡಿಲಿಕೆ ಅನ್ವಯಿಸುತ್ತದೆ.

ಅರ್ಜಿ ಶುಲ್ಕ:

  • ಸಾಮಾನ್ಯ ಅಭ್ಯರ್ಥಿಗಳಿಗೆ – 25 ರೂ.
  • ಮಹಿಳಾ /ಎಸ್‌ಸಿ /ಎಸ್‌ಟಿ ಹಾಗೂ ಪಿ ಡಬ್ಲ್ಯೂ ಬಿ ಡಿ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.

ಆನ್ ಲೈನ್ ಮೂಲಕ ಅರ್ಜಿ‌ ಸಲ್ಲಿಸುವ ವಿಧಾನ

  • • ಯುಪಿಎಸ್‌ಸಿ ಅಧಿಕೃತ ವೆಬ್ಸೈಟ್ https://upsconline.gov.in/ ಗೆ ಭೇಟಿ ನೀಡಿ.
  • ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ ಅಥವಾ ನೋಂದಾಯಿಸಿ.
  • ಅರ್ಜಿಯಲ್ಲಿ ಕೇಳಲಾಗುವ ಸ್ವವಿವರ ಹಾಗೂ ಶೈಕ್ಷಣಿಕ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
  • ನಂತರ ಅರ್ಜಿ ಶುಲ್ಕ ಪಾವತಿ ಮಾಡಿ. (ಅನ್ವಯಿಸಿದರೆ)
  • ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ಸಲ್ಲಿಸಿ.
  • ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

Important Direct Links:

Official Notification PDFDownload
Online Application Form LinkApply Now
Official Websiteupsc.gov.in
More UpdatesKarnataka Help.in

About the Author

ಕರ್ನಾಟಕದ ಅತ್ಯಂತ ವಿಶ್ವಾಸಾರ್ಹ, ನೆಚ್ಚಿನ ಸುದ್ದಿ ಮಾಧ್ಯಮವಾಗಿದೆ. ಇಲ್ಲಿ ದಿನ ನಿತ್ಯ ಶೈಕ್ಷಣಿಕ ಸುದ್ದಿಗಳ ನವೀಕರಣಗಳನ್ನು ಪಡೆಯುತ್ತೀರಿ.

For Feedback - admin@karnatakahelp.in

Leave a Comment