UPSC CAPF AC Admit Card 2024: ಯುನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಯು ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (CAPF) ಅಸಿಸ್ಟೆಂಟ್ ಕಮಾಂಡೆಂಟ್ (ಗ್ರೂಪ್ A) ಪರೀಕ್ಷೆ 2024ಕ್ಕೆ ಅಡ್ಮಿಟ್ ಕಾರ್ಡ್ ಅನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ತಮ್ಮ ಅಡ್ಮಿಟ್ ಕಾರ್ಡ್ ಅನ್ನು UPSCಯ ಅಧಿಕೃತ ವೆಬ್ ಸೈಟ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಈ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ಅಭ್ಯರ್ಥಿಗಳಿಗೆ ಆಗಸ್ಟ್ 4 ರಂದು ಎರಡು ಪಾಳಿಗಳಲ್ಲಿ ಪರೀಕ್ಷೆಯು ನಡೆಯಲಿದೆ. ಒಟ್ಟು 506 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಪರೀಕ್ಷೆ ನಡೆಯಲಿದ್ದು ದೇಶದ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯ ನಡೆಯಲಿದೆ. ಪತ್ರಿಕೆ-1 ಬೆಳಗ್ಗೆ 10 ರಿಂದ ಮಧ್ಯಾಹ್ನ 12ರ ವರೆಗೆ, ಮತ್ತು ಪತ್ರಿಕೆ-2 ಮಧ್ಯಾಹ್ನ 2 ರಿಂದ 5 ರವರೆಗೆ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಪರೀಕ್ಷೆಗೆ ಹಾಜರಾಗಲು ಪ್ರವೇಶ ಪತ್ರಗಳು ಕಡ್ಡಾಯವಾಗಿದ್ದು, ಪ್ರವೇಶ ಪತ್ರದಲ್ಲಿ ಅಭ್ಯರ್ಥಿಗಳು ಪಾಲಿಸಬೇಕಾದ ಸಲಹೆ ಮುಖ್ಯ ಸೂಚನೆಗಳನ್ನು ನೀಡಲಾಗಿದೆ. ಪರೀಕ್ಷಾ ಕೇಂದ್ರ ಮತ್ತು ಪರೀಕ್ಷಾ ವಿಷಯಗಳ ಬಗ್ಗೆ ಮಾಹಿತಿಯನ್ನು ಪ್ರವೇಶ ಪತ್ರದಲ್ಲಿ ನೀಡಲಾಗಿದ್ದು, ಪ್ರವೇಶ ಪತ್ರದಲ್ಲಿ ನೀಡಲಾಗಿರುವ ಸೂಚನೆಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು. ಪ್ರವೇಶ ಪತ್ರವನ್ನು ಪಡೆದುಕೊಳ್ಳಲು ಅಭ್ಯರ್ಥಿಗಳು UPSC ಅಧಿಕೃತ ವೆಬ್ ಸೈಟ್ https://upsconline.nic.in/eadmitcard/admitcard_capf_2024/autologout.php ನಲ್ಲಿ ಡೌನ್ಲೋಡ್ ಮಾಡಿಕೊಳ್ಳಬಹುದು. ಈ ಲೇಖನದಲ್ಲಿ ಆನ್ಲೈನ್ ಮೂಲಕ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವುದು ಹೇಗೆ ಮೊದಲು ಕುರಿತು ಮಾಹಿತಿ ನೀಡಲಾಗಿದ್ದು ಗಮನವಿಟ್ಟು ಓದಿರಿ.
How to Download UPSC CAPF AC Admit Card 2024
ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡುವುದು ಹೇಗೆ:
UPSCಯ ಅಧಿಕೃತ ವೆಬ್ಸೈಟ್‌ಗೆ https://upsconline.nic.in/eadmitcard/admitcard_capf_2024 ಭೇಟಿ ನೀಡಿ.
CAPF ಅಡ್ಮಿಟ್ ಕಾರ್ಡ್ ಲಿಂಕ್ ಅನ್ನು ಕ್ಲಿಕ್ ಮಾಡಿ.
ನಿಮ್ಮ ನೋಂದಣಿ ID ಅಥವಾ ರೋಲ್ ನಂಬರ್ ಮತ್ತು ಇತರ ಅಗತ್ಯ ವಿವರಗಳನ್ನು ನಮೂದಿಸಿ.
ಸಬ್ಮಿಟ್ ಬಟನ್ ಕ್ಲಿಕ್ ಮಾಡಿ.
ನಿಮ್ಮ ಅಡ್ಮಿಟ್ ಕಾರ್ಡ್ ಸ್ಕ್ರೀನ್‌ನಲ್ಲಿ ಕಾಣಿಸುತ್ತದೆ.
ಅಡ್ಮಿಟ್ ಕಾರ್ಡ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಪ್ರಿಂಟ್ ತೆಗೆದುಕೊಳ್ಳಿ.
ಪರೀಕ್ಷೆಗೆ ಹೋಗುವಾಗ ಏನು ತರಬೇಕು?
ಅಡ್ಮಿಟ್ ಕಾರ್ಡ್‌ನ ಮೂಲ ಪ್ರತಿ
ಒಂದು ಪಾಸ್‌ಪೋರ್ಟ್ ಗಾತ್ರದ ಫೋಟೋ
ಒಂದು ಮಾನ್ಯವಾದ ಫೋಟೋ ID (ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್ ಇತ್ಯಾದಿ)