2026ನೇ ಸಾಲಿನ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ಅಸಿಸ್ಟಂಟ್ ಕಮಾಂಡಂಟ್ಸ್ ಗ್ರೂಪ್-ಎ) ನೇಮಕಾತಿ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ(UPSC) ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ.
ಬಿ.ಎಸ್.ಎಫ್(108), ಸಿ.ಆರ್.ಪಿ.ಎಫ್(106), ಐ.ಟಿ.ಬಿ.ಪಿ(12), ಎಸ್.ಎಸ್.ಬಿ(53), ಸಿ.ಐ.ಎಸ್.ಎಫ್(70) ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಿಗೆ ಒಟ್ಟು 349 ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಿಕೊಳ್ಳಲಿದೆ. ಯಾವುದೇ ಪದವಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಮಾ.12ರೊಳಗೆ ಯುಪಿಎಸ್ಸಿ ಅಧಿಕೃತ ವೆಬ್ಸೈಟ್ https://upsconline.nic.in/loginಗೆ ಭೇಟಿ ನೀಡಿ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಬಹುದು.
ಅರ್ಜಿ ಸಲ್ಲಿಸುವ ಪ್ರಮುಖ ದಿನಾಂಕಗಳು:
- ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ – ಫೆಬ್ರವರಿ 20, 2026
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ – ಮಾರ್ಚ್ 12, 2026
- ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ – ಮಾರ್ಚ್ 12, 2026
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಯಾವುದೇ ವಿಭಾಗದಲ್ಲಿ ಪದವಿ ಪೂರ್ಣಗೊಳಿಸಿರಬೇಕು.
ವಯೋಮಿತಿ:
01-08-2026 ರಂತೆ;
ಕನಿಷ್ಠ ಮಿತಿ – 20 ವರ್ಷಗಳು
ಗರಿಷ್ಠ ಮಿತಿ – 25 ವರ್ಷಗಳು
ವಯೋಮಿತಿ ಸಡಿಲಿಕೆ; ಒಬಿಸಿ ಅಭ್ಯರ್ಥಿಗಳಿಗೆ-03 ವರ್ಷಗಳು, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ-05 ವರ್ಷಗಳು, ನಾಗರಿಕ ಕೇಂದ್ರ ಸರ್ಕಾರಿ ನೌಕರರಿಗೆ-05 ವರ್ಷಗಳು.
ಆಯ್ಕೆ ವಿಧಾನ:
ಲಿಖಿತ ಪರೀಕ್ಷೆ
ದೈಹಿಕ ದಕ್ಷತೆ ಪರೀಕ್ಷೆಗಳು (ಪಿಇಟಿ)
ಸಂದರ್ಶನ/ವ್ಯಕ್ತಿತ್ವ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಅಂತಿಮ ಆಯ್ಕೆ
ವೇತನ:
ಅಭ್ಯರ್ಥಿಗಳಿಗೆ ಅವರ ಹುದ್ದೆಗಳಿಗೆ ಅನುಗುಣವಾಗಿ ಕೇಂದ್ರ ಸರ್ಕಾರಿ ನಿಯಮಗಳ ಅನುಸಾರ ಮಾಹೆಯಾನ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಶುಲ್ಕ:
ಪ.ಜಾತಿ, ಪ.ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ – ಶುಲ್ಕ ವಿನಾಯಿತಿ ನೀಡಲಾಗಿದೆ.
ಇತರೆ ಎಲ್ಲಾ ಅಭ್ಯರ್ಥಿಗಳಿಗೆ- 200
ಅರ್ಜಿ ಸಲ್ಲಿಸುವ ವಿಧಾನ
• ಮೊದಲಿಗೆ ಅಭ್ಯರ್ಥಿಗಳು ಯುಪಿಎಸ್ಸಿ ಅಧಿಕೃತ ವೆಬ್ಸೈಟ್ https://upsc.gov.in/ ಗೆ ಭೇಟಿ ನೀಡಿ.
• ನಂತರ *ಹೊಸದೇನಿದೆ* ಶೀರ್ಷಿಕೆಯ ಕೆಳಗೆ ನೀಡಲಾಗಿರುವ “ಪರೀಕ್ಷಾ ಅಧಿಸೂಚನೆ: ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ACs) ಪರೀಕ್ಷೆ, 2026” ಆಯ್ಕೆ ಮಾಡಿ.
• ನಂತರ *ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ (ACs) ಪರೀಕ್ಷೆ, 2026* ವಿಭಾಗದಲ್ಲಿ ನೀಡಲಾಗಿರುವ “ಇಲ್ಲಿ ಕ್ಲಿಕ್ ಮಾಡಿ” ಆಯ್ಕೆಯ ಮೇಲೆ ಟ್ಯಾಪ್ ಮಾಡಿ. (ಅಥವಾ ನೇರವಾಗಿ https://upsconline.nic.in/loginಗೆ ಭೇಟಿ ನೀಡಿ)
• ಇದಾದ ಬಳಿಕ ನೋಂದಾಯಿತ ಮೊಬೈಲ್ ಸಂಖ್ಯೆ ನಮೂದಿಸಿ ಲಾಗಿನ್ ಆಗಿ ಅಥವಾ ಹೊಸ ಬಳಕೆದಾರರಾಗಿದ್ದಲ್ಲಿ ಹೊಸದಾಗಿ ನೋಂದಾಯಿಸಿ.
• ಅರ್ಜಿ ನಮೂನೆಯಲ್ಲಿ ಕೇಳಲಾಗುವ ಸ್ವವಿವರ, ಸಹಿ, ಭಾವಚಿತ್ರ, ಶೈಕ್ಷಣಿಕ ಮಾಹಿತಿ ಹಾಗೂ ಅಗತ್ಯ ದಾಖಲಾತಿಗಳನ್ನು ಅಪ್ಲೋಡ್ ಮಾಡಿ.
• ಬಳಿಕ ನಿಮ್ಮ ವರ್ಗಕ್ಕೆ ಅನ್ವಯಿಸುವ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಿ.
• ಕೊನೆಯಲ್ಲಿ ಅರ್ಜಿಯನ್ನು ಮತ್ತೊಮ್ಮೆ ಪರಿಶೀಲಿಸಿ ತಿದ್ದುಪಡಿಗಳಿದ್ದಲ್ಲಿ ಅದನ್ನು ಸರಿಪಡಿಸಿ ಸಲ್ಲಿಸಿ.
• ಅಂತಿಮವಾಗಿ ಭವಿಷ್ಯದ ಉಲ್ಲೇಖಕ್ಕಾಗಿ ಸಲ್ಲಿಸಿದ ಅರ್ಜಿಯ ಪ್ರತಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Important Direct Links:
| Official Notification PDF | Download |
| Online Application Form Link | Apply Now |
| Official Website | www.upsc.gov.in |
| More Updates | KarnatakaHelp.in |