ಕೇಂದ್ರ ಲೋಕಸೇವಾ ಆಯೋಗವು (UPSC) ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) – 1, 2025ರ 457 ಹುದ್ದೆಗಳ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಫಲಿತಾಂಶವನ್ನು ಅಕ್ಟೋಬರ್ 10ರಂದು ಬಿಡುಗಡೆ ಮಾಡಿದೆ.
ಭಾರತೀಯ ಮಿಲಿಟರಿ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿ, ವಾಯುಪಡೆ ಅಕಾಡೆಮಿ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಸೇವೆ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗಾಗಿ CDS -1 ಪರೀಕ್ಷೆಯನ್ನು ಏಪ್ರಿಲ್ 13ರಂದು ನಡೆಸಿ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಅಂತಿಮವಾಗಿ SSB ಸಂದರ್ಶನವನ್ನು ನಡೆಸಲಾಗಿತ್ತು. ಇದೀಗ ಸದರಿ SSB ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಿಡಿಎಫ್ ಅನ್ನು UPSC ಅಧಿಕೃತ ವೆಬ್ಸೈಟ್ http://www.upsc.gov.in ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳು ಅಂತಿಮ ಫಲಿತಾಂಶವನ್ನು ಪರಿಶೀಲಿಸಬಹುದು.