UPSC CDS-1ರ ಅಂತಿಮ ಫಲಿತಾಂಶ ಪ್ರಕಟ

Published on:

ಕೇಂದ್ರ ಲೋಕಸೇವಾ ಆಯೋಗವು (UPSC) ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) – 1, 2025ರ 457 ಹುದ್ದೆಗಳ ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಫಲಿತಾಂಶವನ್ನು ಅಕ್ಟೋಬರ್ 10ರಂದು ಬಿಡುಗಡೆ ಮಾಡಿದೆ.

ಭಾರತೀಯ ಮಿಲಿಟರಿ ಅಕಾಡೆಮಿ, ಭಾರತೀಯ ನೌಕಾ ಅಕಾಡೆಮಿ, ವಾಯುಪಡೆ ಅಕಾಡೆಮಿ ಹಾಗೂ ಅಧಿಕಾರಿಗಳ ತರಬೇತಿ ಅಕಾಡೆಮಿಯಲ್ಲಿ ಸೇವೆ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗಾಗಿ CDS -1 ಪರೀಕ್ಷೆಯನ್ನು ಏಪ್ರಿಲ್ 13ರಂದು ನಡೆಸಿ. ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಅಂತಿಮವಾಗಿ SSB ಸಂದರ್ಶನವನ್ನು ನಡೆಸಲಾಗಿತ್ತು. ಇದೀಗ ಸದರಿ SSB ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳ ಪಿಡಿಎಫ್ ಅನ್ನು UPSC ಅಧಿಕೃತ ವೆಬ್ಸೈಟ್ http://www.upsc.gov.in ನಲ್ಲಿ ಬಿಡುಗಡೆ ಮಾಡಲಾಗಿದ್ದು, ಸಂದರ್ಶನಕ್ಕೆ ಹಾಜರಾದ ಅಭ್ಯರ್ಥಿಗಳು ಅಂತಿಮ ಫಲಿತಾಂಶವನ್ನು ಪರಿಶೀಲಿಸಬಹುದು.

UPSC CDS – 1ರ ಫಲಿತಾಂಶ ಪರಿಶೀಲಿಸುವ ವಿಧಾನ;

• UPSC ಅಧಿಕೃತ ವೆಬ್ಸೈಟ್ http://www.upsc.gov.in ಗೆ ಭೇಟಿ ನೀಡಿ.

• ನಂತರ ಹೊಸದೇನಿದೆ ವಿಭಾಗದ ಕೆಳಗೆ ನೀಡಲಾಗಿರುವ “ಅಂತಿಮ ಫಲಿತಾಂಶ: ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ (I), 2025” – ಎಂಬ ಶೀರ್ಷಿಕೆಯ ಮೇಲೆ ಟ್ಯಾಪ್ ಮಾಡಿ.

• ಸಂಯೋಜಿತ ರಕ್ಷಣಾ ಸೇವೆಗಳ ಪರೀಕ್ಷೆ (I), 2025 – ಅಂತಿಮ ಫಲಿತಾಂಶ ಪಿಡಿಎಫ್ ಮೇಲೆ ಕ್ಲಿಕ್ ಮಾಡಿ.

• CDS -1 ಫಲಿತಾಂಶವೂ ಪಿಡಿಎಫ್ ರೂಪದಲ್ಲಿ ಕಾಣಿಸಿತ್ತದೆ.

• ಪಿಡಿಎಫ್ ನಲ್ಲಿ ನಿಮ್ಮ ಹೆಸರು ಅಥವಾ ರೋಲ್ ಸಂಖ್ಯೆಯ ಮೂಲಕ ನಿಮ್ಮ ಅರ್ಹತೆಯನ್ನು ಪರಿಶೀಲಿಸಿಕೊಳ್ಳಿ.

• ನಂತರ ಭವಿಷ್ಯದ ಉಲ್ಲೇಖಕ್ಕಾಗಿ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಮುದ್ರಣ ತೆಗೆದುಕೊಳ್ಳಿ.

Important Direct Links:

UPSC CDS 1 Final Result 2025 PDF LinkDownload
Official Websitehttps://upsc.gov.in/
More UpdatesKarnatakaHelp.in
About the Author

ಶ್ವೇತಾ ಚಿದಂಬರ ಅವರು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಒಂದು ವರ್ಷ ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ತರಬೇತಿ ಪಡೆದಿದ್ದಾರೆ.

Leave a Comment